25.7 C
ಪುತ್ತೂರು, ಬೆಳ್ತಂಗಡಿ
September 20, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬ್ಯಾನರ್ ಕಟ್ಟುವ ವೇಳೆ ತೆರೆದ ಚರಂಡಿಗೆ ಬಿದ್ದ ಶಿಕ್ಷಕನಿಗೆ ಗಾಯ

ಬೆಳ್ತಂಗಡಿ: ಬ್ಯಾನರ್ ಕಟ್ಟುವ ವೇಳೆ ತೆರೆದ ಚರಂಡಿಗೆ ಬಿದ್ದ ಶಿಕ್ಷಕರೊಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಮುಂಡಾಜೆ ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟದ ಬ್ಯಾನರನ್ನು ಮಂಗಳೂರು-ವಿಲ್ಲುಪುರಂ ಹೆದ್ದಾರಿಯ ಸೋಮಂತಡ್ಕ ರಸ್ತೆ ಬದಿಯ ಪ್ರದೇಶದಲ್ಲಿ ಅಳವಡಿಸಲು ಸ್ವಯಂಸೇವಕರ ಜತೆ ಅ.9ರಂದು ಸಂಜೆ ಶಿಕ್ಷಕ ತೆರಳಿದ್ದರು. ಬ್ಯಾನರ್ ಕಟ್ಟುವ ಸಮೀಪ ತೆರೆದ ಚರಂಡಿ ಗಮನಕ್ಕೆ ಬರದ ಕಾರಣ ಸುಮಾರು 6 ಅಡಿ ಆಳಕ್ಕೆ ಬಿದ್ದು ಕಾಲಿಗೆ ಗಂಭೀರ ಸ್ವರೂಪದ ಗಾಯಗಳಾಗಿ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತೆರೆದ ಚರಂಡಿ ಸಮಸ್ಯೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಂಗವಾಗಿ ಬೆಳ್ತಂಗಡಿ ತಾಲೂಕಿನಲ್ಲಿ ರಸ್ತೆ ಬದಿ ಚರಂಡಿಗಳನ್ನು ನಿರ್ಮಿಸಲಾಗಿದ್ದು ಇದನ್ನು ಸಂಪೂರ್ಣ ಮುಚ್ಚಲಾಗಿಲ್ಲ ಚರಂಡಿ ಭಾಗ ಅಲ್ಲಲ್ಲಿ ತೆರೆದುಕೊಂಡಿದ್ದು ಈಗಾಗಲೇ ಹಲವರು ಬಿದ್ದು ಗಾಯಗೊಂಡಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರಿಗೆ ಹಲವು ಬಾರಿ ಮನವರಿಕೆ ಮಾಡಲಾಗಿದೆ. ಸಂಬಂಧಪಟ್ಟವರು ಒಂದೆರಡು ಕಡೆ ಮಾತ್ರ ಸ್ಲ್ಯಾಬ್ ಅಳವಡಿಸುತ್ತಿದ್ದಾರೆ. ಇದರಿಂದ ಪಾದಚಾರಿಗಳಲ್ಲಿ ಗೊಂದಲ ಉಂಟಾಗುತ್ತಿದ್ದು ಚರಂಡಿಗೆ ಬಿದ್ದು ಗಾಯಗೊಳ್ಳುತ್ತಿರುವುದು ಮುಂದುವರೆದಿದೆ.

Related posts

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಸಿರಿ ಕೇಂದ್ರ ಕಛೇರಿಗೆ ಡಿ. ವೀರೇಂದ್ರ ಹೆಗ್ಗಡೆ ದಂಪತಿ ಭೇಟಿ

Suddi Udaya

ಭಾರತೀಯ ಸೇನೆಯಲ್ಲಿ 28 ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಸುಬೇದಾರ್ ಮೇಜರ್ ಶಿವಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ಕ್ಲಸ್ಟರ್ ಮಟ್ಟದ ಕಬ್ಬಡಿಯಲ್ಲಿ ವೇಣೂರು ಸರ್ಕಾರಿ ಪ್ರೌಢಶಾಲೆಗೆ ಗೆಲುವು

Suddi Udaya

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ಕೊಡಗು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿಗೆ ವಿಧಾನ ಪರಿಷತ್ತಿನ ಶಾಸಕ ಪ್ರತಾಪ್ ಸಿಂಹ ನಾಯಕ್ ನೇಮಕ

Suddi Udaya
error: Content is protected !!