38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಅ.24 ಸೌತಡ್ಕದಲ್ಲಿ ಶ್ರೀ ಮಹಾಗಣಪತಿ ಆಂಗ್ಲ ಮಾಧ್ಯಮ ಶಾಲೆಗೆ ಶಿಲಾನ್ಯಾಸ: ಡಾ. ಕೆ ಪ್ರಭಾಕರ್ ಭಟ್ ಕಲ್ಲಡ್ಕ

ಕೊಕ್ಕಡ: ಜೀವನ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಚಾರಿತ್ರ್ಯ ನಿರ್ಮಾಣದ ಮತ್ತು ಉತ್ತಮ ಗುಣಮಟ್ಟದ ಶಿಕ್ಷಣ ಜೊತೆಗೆ ಸಾಮಾಜಿಕ ಮತ್ತು ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಂಡು ಭಾರತೀಯ ಸಂಸ್ಕೃತಿಯನ್ನು ತಿಳಿಸುವ ಮೌಲ್ಯಾಧಾರಿತ ಶಿಕ್ಷಣದ ಬಗ್ಗೆ ಗ್ರಾಮೀಣ ಜನರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಾಹಿತಿ ಕಾರ್ಯಾಗಾರವನ್ನು ಅ. 11ರಂದು ಸೌತಡ್ಕ ಸೇವಾಧಾಮದ ಸಭಾಂಗಣದಲ್ಲಿ ಸೌತಡ್ಕ ಮಹಾಗಣಪತಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೃಷ್ಣ ಭಟ್ ಹಿತ್ತಿಲು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾಹಿತಿ ಕಾರ್ಯಾಗಾರವನ್ನು ಮಾರ್ಗದರ್ಶಕರಾಗಿ ಆಗಮಿಸಿದ ಡಾ. ಕೆ ಪ್ರಭಾಕರ ಭಟ್ ಕಲ್ಲಡ್ಕ ರವರು ಉದ್ದೇಶಿತ ಶ್ರೀ ಮಹಾಗಣಪತಿ ಆಂಗ್ಲ ಮಾಧ್ಯಮ ಶಾಲೆ ಯಾವ ರೀತಿ ಆರಂಭಗೊಳ್ಳಬೇಕು. ನಮ್ಮ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಈಗಿನ ಕಾಲದಲ್ಲಿ ಯಾಕೆ ಅಗತ್ಯ ಎಂಬ ವಿಷಯವಾಗಿ ಸುತ್ತಮುತ್ತಲಿನ ಗ್ರಾಮದಿಂದ ಆಗಮಿಸಿದ ಜನರಿಗೆ ಮಾಹಿತಿ ನೀಡಿದರು. ಸೌತಡ್ಕದಲ್ಲಿ 1.10ಎಕರೆ ಜಾಗದಲ್ಲಿ ನಿರ್ಮಾಣಗೊಳ್ಳಲಿರುವ ಶಾಲೆ ಅ.24ರಂದು ಶಿಲಾನ್ಯಾಸ ನಡೆಯಲಿದೆ. ವಾಸ್ತು ತಜ್ಞರನ್ನು ಕರೆಸಿ ಸಮಾಲೋಚನೆ ನಡೆಸಲಾಗಿದೆ. ಅದಲ್ಲದೆ ಸಂಬಂಧಪಟ್ಟ ಇಂಜಿನಿಯರ್ ಗೆ ಕಾಮಗಾರಿಯು ಹಸ್ತಾಂತರ ನಡೆಯಲಿದೆ ಎಂದು ತಿಳಿಸಿದರು.

ಶಾಲೆಯ ಕೊಠಡಿ ನಿರ್ಮಾಣಕ್ಕೆ ಸಂಪನ್ಮೂಲ ಕ್ರೋಡಿಕರಣದ ಚರ್ಚೆಯನ್ನು ಸಭೆಯಲ್ಲಿ ನಡೆಸಲಾಯಿತು. ಎಲ್.ಕೆ.ಜಿ ಯಿಂದ 10ನೇ ತರಗತಿವರೆಗೆ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಸಿಗಲಿದೆ. ಎಲ್. ಕೆ. ಜಿ ಯಿಂದ 10ನೇ ತರಗತಿ ವರೆಗೆ ಅಡ್ಮಿಷನ್ ಕೂಡ ಪ್ರಾರಂಭಿಸುತ್ತೇವೆ ಎಂದು ಪ್ರಭಾಕರ್ ಭಟ್ ತಿಳಿಸಿದರು.

ವೇದಿಕೆಯಲ್ಲಿ ಉದ್ದೇಶಿತ ಶ್ರೀ ಮಹಾಗಣಪತಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ಕಟ್ಟಡ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಪಟ್ಟೂರು ಶ್ರೀ ರಾಮ ಶಾಲೆಯ ಅಧ್ಯಕ್ಷ ಜನಾರ್ಧನ ಕಜೆ, ಶಾಲಾ ಕಟ್ಟಡ ಸಮಿತಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು. ಹರೀಶ್ ರಾವ್ ಮುಂಡ್ರುಪ್ಪಾಡಿ ಸ್ವಾಗತಿಸಿದರು. ಕೇಶವ ಹಳ್ಳಿಂಗೇರಿ ಕಾರ್ಯಕ್ರಮ ನಿರೂಪಿಸಿ, ಬಾಲಕೃಷ್ಣ ನೈಮಿಷ ಧನ್ಯವಾದವಿತ್ತರು

Related posts

ಬೆಳ್ತಂಗಡಿ ಕಾಶಿಬೆಟ್ಟು ಬಳಿ ಮೋರಿಗೆ ಬಿದ್ದ ಕಾರು

Suddi Udaya

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಗ್ಯಾರಂಟಿ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ ಯೋಜನೆಗಳ ಕುರಿತು ವಿಶೇಷ ಗ್ರಾಮಸಭೆ

Suddi Udaya

ಜ.22: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಬೆಳ್ತಂಗಡಿ ತಾಲೂಕಿನಾದ್ಯಂತ ಸಂಭ್ರಮಿಸಲು ಸಜ್ಜಾಗಿರುವ ರಾಮಭಕ್ತರು

Suddi Udaya

ಬಂದಾರು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಎಸ್.ಟಿ ಮೋರ್ಚಾವತಿಯಿಂದರಾಜೇಶ್ ಎಂ.ಕೆ. ಯವರ ಮೇಲಾದ ಮಾರಣಾಂತಿಕ ಹಲ್ಲೆ ಯನ್ನು ಖಂಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya
error: Content is protected !!