ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ

ಬೆಳ್ತಂಗಡಿ: ಜಿಲ್ಲಾ ನಗರಾಭಿವೃದ್ಧಿ ಕೋಶಾ ಮಂಗಳೂರು, ಬೆಳ್ತಂಗಡಿ ಪಟ್ಟಣ ಪಂಚಾಯತ್ ಇದರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಅಂಬೇಡ್ಕರ್ ಭವನದ ಬಳಿ ನೂತನವಾಗಿ ನಿರ್ಮಾಣಗೊಂಡ ಇಂದಿರಾ ಕ್ಯಾಂಟೀನ್ ಇದರ ಉದ್ಘಾಟನೆಯು ಅ.11ರಂದು ನಡೆಯಿತು.


ಇಂದಿರಾ ಕ್ಯಾಂಟೀನ್‌ನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಲೋಕಾರ್ಪಣೆಗೈದು, ಕರ್ನಾಟಕ ರಾಜ್ಯದಲ್ಲಿ ಯಾರೂ ಹಸಿವಿನಿಂದ ಬಳಲಬಾರದು, ಹಸಿವು ಮುಕ್ತ ರಾಜ್ಯ ಕರ್ನಾಟಕವಾಗಬೇಕು ಎಂಬ ಮಹತ್ವವಾದ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೆಳ್ತಂಗಡಿಯಂತಹ ಗ್ರಾಮೀಣ ಪ್ರದೇಶಗಳಲ್ಲಿಯೂ ಇಂದಿರಾ ಕ್ಯಾಂಟಿನ್ ತೆರೆದಿದ್ದಾರೆ. ಇಂದಿರಾ ಕ್ಯಾಂಟಿನ್ ಕಾಮಗಾರಿ ಸಮರ್ಪಕವಾಗಿಲ್ಲ, ಗುತ್ತಿಗೆದಾರರು ಸರಿಯಿಲ್ಲ, ಅವರನ್ನು ಬದಲಾಯಿಸಿ, ಕ್ಯಾಂಟಿನ್‌ನ್ನು ಸರಿಪಡಿಸುವ ಕಾರ್ಯ ಮಾಡಲಾಗುವುದು ಎಂದು ಭರವಸೆ ನೀಡಿದರು.

ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿ, ಬೆಳ್ತಂಗಡಿ ತಾಲೂಕಿನಲ್ಲಿ 94ಸಿಯ 703 ಅರ್ಜಿಗಳು ವಿಲೇಗೆ ಬಾಕಿಯಿದೆ. ಇದರಿಂದಾಗಿ ಇದರ ವಿಲೇಗೆ ಡಿಮಾಂಡ್ ಜಾಸ್ತಿಯಾಗಿದೆ. 94ಸಿ ಮಾಡಿಕೊಡುವವರ ದಂಧೆ ಹೆಚ್ಚಿದೆ. ದಲ್ಲಾಳಿಗಳ ಹಾವಳಿ ಕಡಿವಾಣ ಹಾಕಬೇಕಾದರೆ ಇದರ ವಿಲೇ ಶೀಘ್ರವಾಗಿ ಆಗಬೇಕಾಗಿದೆ ಎಂದು ತಿಳಿಸಿದರು.
ಕಾಯ೯ಕ್ರಮದಲ್ಲಿ 130 ಫಲಾನುಭವಿಗಳಿಗೆ 94ಸಿ ಮತ್ತು 94 ಸಿಸಿ ಹಕ್ಕು ಪತ್ರಗಳನ್ನು ವಿತರಿಸಲಾಯಿತು.


ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ, ಮಂಗಳೂರು ವಿದ್ಯುತ್ ಸರಬುರಾಜು ಮಂಡಳಿ ಅಧ್ಯಕ್ಷ ಹರೀಶ್ ಕುಮಾರ್, ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಟಿ., ಉಪಾಧ್ಯಕ್ಷೆ ಗೌರಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ, ಕರ್ನಾಟಕ ಪರಿಸರ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೋ, ಬೆಂಗಳೂರು ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ ಅಧ್ಯಕ್ಷೆ ಲಾವಣ್ಯ ಬಲ್ಲಾಳ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲ್ಯಾನ್, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್, ಗ್ಯಾರಂಟಿ ಯೋಜನೆಯ ಜಿಲ್ಲಾ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ತಹಶೀಲ್ದಾರ್ ಪೃಥ್ವಿ ಸಾನಿಕಂ, ಪ.ಪಂ. ಮುಖ್ಯಾಧಿಕಾರಿ ರಾಜೇಶ್ ಕೆ.ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಬ್ಲಾಕ್ ಕಾಂಗ್ರೇಸ್ ನಗರ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ, ಪಟ್ಟಣ ಪಂಚಾಯತ್ ಹಿರಿಯ ಸದಸ್ಯ ಜಗದೀಶ್ ಡಿ, ಅಭಿನಂದನ್ ಹರೀಶ್ ಕುಮಾರ್, ರಾಜಶೇಖರ ಅಜ್ರಿ, ಶಾಹುಲ್ ಹಮೀದ್, ಪ್ರಶಾಂತ್ ವೇಗಸ್, ಲಕ್ಷ್ಮಣ ಮೂಲ್ಯ ಅಂಡಿಂಜೆ, ಎ.ಸಿ ಮ್ಯಾಥ್ಯು ಮೊದಲಾದವರು ಉಪಸ್ಥಿತರಿದ್ದರು.

ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಸ್ವಾಗತಿಸಿದರು. ಶಿಕ್ಷಕ ಧರಣೇಂದ್ರ ಕುಮಾರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಕಳಿಯ : ಕೊಜಪ್ಪಾಡಿ ಶ್ರೀ ನಾಗಬ್ರಹ್ಮ ಸ್ವಾಮಿ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ಮಾ 26-29: ಕೊಕ್ರಾಡಿಯ ಬಾಕ್ಯಾರು ಹೇರ್ದಂಡಿ ಗರಡಿಯಲ್ಲಿ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ, ನೇಮೋತ್ಸವ

Suddi Udaya

ಉಜಿರೆಯಲ್ಲಿ ಸುಗಂಧಿ’ ಸ್ ಗಲ್ಲಿ ಕಿಚನ್ ಹೋಟೆಲ್ ಉದ್ಘಾಟನೆ

Suddi Udaya

ಸಿರಿ ಸಂಸ್ಥೆಯ ವತಿಯಿಂದ ಧರ್ಮಸ್ಥಳದ ಎ.ವಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಸಮಾರೋಪ ಸಮಾರಂಭ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಹರೀಶ್ ಪೂಂಜರವರ ಹೆಸರಿನಲ್ಲಿ ನಕಲಿ ಸಂದೇಶ ರವಾನೆ: ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಕೋಷ್ಟದಿಂದ ದೂರು

Suddi Udaya
error: Content is protected !!