38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಚಿವ ದಿನೇಶ್ ಗುಂಡೂರಾವ್‌ರಿಂದ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯ ಲೋಕಾರ್ಪಣೆ

ಬೆಳ್ತಂಗಡಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಂಗಳೂರು ದ.ಕ.ಜಿಲ್ಲಾ ಪಂಚಾಯತ್, ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಮಡಂತ್ಯಾರು ಹಾಗೂ ಪುಂಜಾಲಕಟ್ಟೆಯ ಬಾಲಕರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಅ.11 ರಂದು ನಡೆಯಿತು.

ಬಳಿಕ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಮಡಂತ್ಯಾರ್, ಮಾಲಾಡಿ ಗ್ರಾಮದ ಸಬರಬೈಲಿನಲ್ಲಿ ನಿರ್ಮಾಣಗೊಂಡ ನೂತನ ಕಟ್ಟಡದಲ್ಲಿ ಸಭಾ ಕಾರ್ಯಕ್ರಮ ನಡೆಯಿತು.

ಎರಡು ವಿದ್ಯಾರ್ಥಿನಿಲಯದ ನೂತನ ಕಟ್ಟಡವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ದಿನೇಶ್ ಗುಂಡೂರಾವ್ ಲೋಕರ್ಪಾಣೆಗೊಳಿಸಿ ಮಾತನಾಡಿದ ಅವರು ಉತ್ತಮ ವಾಸ್ತುಶೈಲಿಯ ವಿಶೇಷ ರೀತಿಯಲ್ಲಿ ಕಟ್ಟಡ ನಿರ್ಮಾಣಗೊಳಿಸಲಾಗಿದ್ದು ಶ್ರಮಿಸಿದವರಿಗೆ ಅಭಿನಂದನೆಗಳು, ಈ ಮಾದರಿಯಲ್ಲಿ ರಚನೆಗೊಂಡ ಕಟ್ಟಡ ಮುಂದೆ ನಿರ್ಮಾಣಗೊಳ್ಳುವ ಕಟ್ಟಡಗಳಿಗೆ ಅನುಕರಣೀಯ ಎಂದು ಅಭಿಪ್ರಾಯಪಟ್ಟರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಹರೀಶ್ ಪೂಂಜ ಮಾತನಾಡಿ ತಾಲೂಕಿಗೆ ಇನ್ನೂ 5 ವಿದ್ಯಾರ್ಥಿ ನಿಲಯದ ಅವಶ್ಯಕತೆಯಿದ್ದು ಸಚಿವರ ಒದಗಿಸಬೇಕು ಹಾಗೂ ಲೋಕರ್ಪಾಣೆಗೊಂಡ ವಿದ್ಯಾರ್ಥಿನಿಲಯದ ತಡೆಗೋಡೆ ರಚನೆಗೆ ಶಾಸಕರ ನಿಧಿಯಿಂದ ರೂ.10 ಲಕ್ಷರೂ.ಅನುದಾನ ನೀಡುವುದಾಗಿ ತಿಳಿಸಿದರು.

ಈ ವೇಳೆ ಶಾಸಕ ಹರೀಶ್ ಪೂಂಜರನ್ನು ಹಾಗೂ ಕಟ್ಟಡ ನಿರ್ಮಾಣದ ಗುತ್ತಿಗೆದಾರ ಪ್ರಶಾಂತ್ ಪಾರೆಂಕಿ, ದೀಕ್ಷಿತ್ ಕುಮಾರ್ ಹಾಗೂ ನಿರ್ಮಿತ್ ಕೇಂದ್ರದ ಅಭಿಯಂತರ ನವೀನ್ ಹಾಗೂ ಮಲಾಡಿ ಗ್ರಾ.ಪಂ.ಸದಸ್ಯ ಬೇಬಿ ಸುವರ್ಣರನ್ನು ಸನ್ಮಾನಿಸಲಾಯಿತು.

ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತ ಡಿ.ಎಸ್.ಗಟ್ಟಿ, ಕರ್ನಾಟಕ ಪರಿಸರ ಪ್ರವಾಸೋಧ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೋ, ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ ಅಧ್ಯಕ್ಷೆ ಲಾವಣ್ಯ ಬಲ್ಲಾಳ್ ಜೈನ್, ದ.ಕ.ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್ ಲಾಯಿಲ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ್ ಸಾಲ್ಯಾನ್ ಮಾಲಾಡಿ, ಮಾಲಾಡಿ ಗ್ರಾ.ಪಂ.ಅಧ್ಯಕ್ಷ ಪುನೀತ್ ಕುಮಾರ್, ಮಡಂತ್ಯಾರು ಗ್ರಾ.ಪಂ.ಅಧ್ಯಕ್ಷೆ ರೂಪ ನವೀನ್ ಮಡಂತ್ಯಾರು, ಸಿಎ ಬ್ಯಾಂಕ್ ಅಧ್ಯಕ್ಷ ಜೋಯಲ್ ಮೆಂಡೊನ್ಸಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಬಿಂದಿಯಾ ಎನ್. ನಾಯಕ, ತಾ.ಪಂ. ಇಓ ಭವಾನಿಶಂಕರ್ ಎನ್ ವೇದಿಕೆಯಲ್ಲಿದ್ದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಗ್ರಾಮ ಪಂಚಾಯತ್ ಸದಸ್ಯರುಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಪಕ್ಷದ ಪ್ರಮುಖರು, ವಿದ್ಯಾರ್ಥಿಗಳು ಸಹಿತ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜೋಸೆಫ್ ಪಿ.ಎಸ್. ಸ್ವಾಗತಿಸಿ, ಶಿಕ್ಷಕ ಅಜಿತ್ ಕೊಕ್ರಾಡಿ ವಂದಿಸಿ, ನಿರೂಪಿಸಿದರು.

Related posts

ಜಿಲ್ಲಾ ಮಟ್ಟದ ಕ್ರೀಡೋತ್ಸವ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ : ಎ.3 ರಂದು ಬಿ.ಎಸ್.ಪಿ ಯ ಅಭ್ಯರ್ಥಿ ಕಾಂತಪ್ಪ ಅಲಂಗಾರ್ ನಾಮಪತ್ರ ಸಲ್ಲಿಕೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ನಡ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬಿಜೆಪಿ ಜಿಲ್ಲಾ ಎಸ್.ಟಿ ಮೋರ್ಚಾ ವತಿಯಿಂದ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ರವರ ಮೇಲೆ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya

ಉಜಿರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೊಲ್ಪಾಡಿ ಶಾಲೆಯ ವಿದ್ಯಾರ್ಥಿನಿ ತನಿಷ್ಕ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!