September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ : ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ ಉದ್ಘಾಟನೆ

ಮುಂಡಾಜೆ : ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ, ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.), ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಹಾಗೂ ಮುಂಡಾಜೆ ಪ್ರೌಢ ಶಾಲೆ ಮುಂಡಾಜೆ ಇವುಗಳ ಸಂಯುಕ್ತ ಆಶ್ರಯದಲ್ಲಿ 14ರ ಮತ್ತು 17ರ ವಯೋಮಾನದ ಬಾಲಕರ ಹಾಗೂ ಬಾಲಕಿಯರ ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭವು ಮುಂಡಾಜೆಯ ವಿವೇಕಾನಂದ ಕ್ರೀಡಾಂಗಣದಲ್ಲಿ ಅ.10 ರಂದು ಜರುಗಿತು.

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ಇವರು ದೀಪ ಪ್ರಜ್ವಲನೆಯ ಮೂಲಕ ಪಂದ್ಯಾಟಕ್ಕೆ ವಿದ್ಯುಕ್ತವಾಗಿ ಚಾಲನೆಯನ್ನು ನೀಡಿ, ಮುಂಡಾಜೆ ವಿದ್ಯಾರ್ಥಿಗಳ ಕ್ರೀಡಾ ಸಾಧನೆಗಳನ್ನು ಪ್ರಶಂಸಿಸಿ, ಕ್ರೀಡೆಯಿಂದ ಶಾರೀರಿಕ ಹಾಗೂ ಮಾನಸಿಕ ಆರೋಗ್ಯ ಸುಧಾರಿಸುತ್ತದೆ ಎಂದರು.


ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಬೆಳ್ತಂಗಡಿಯ ನಿಕಟಪೂರ್ವ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಪಂದ್ಯಾಟಕ್ಕೆ ಶುಭಹಾರೈಸಿದರು.
ಮುಂಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ, ಬೆಳ್ತಂಗಡಿಯ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಭುವನೇಶ್ ಎಂ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಜಯ, ರಾಜ್ಯ ಸರಕಾರಿ ನೌಕರರ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ ಜಯರಾಜ್ ಜೈನ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರವಿರಾಜ್ ಗೌಡ, ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳು ಉಜಿರೆಯ ಕ್ರೀಡಾ ಕಾರ್ಯದರ್ಶಿ ರಮೇಶ್, ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಅಧ್ಯಕ್ಷ ವಿನಯಚಂದ್ರ, ಕಾರ್ಯದರ್ಶಿ ನಾರಾಯಣ ಗೌಡ ಕೊಳಂಬೆ, ಕೋಶಾಧಿಕಾರಿ ಡಾ| ರವಿ ಎಂ ಎನ್, ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಜಯಂತಿ ಟಿ, ದೈಹಿಕ ಶಿಕ್ಷಣ ಶಿಕ್ಷಕ ಗುಣಪಾಲ್ ಎಂ ಎಸ್, ಪ. ಪೂ. ಕಾಲೇಜಿನ ಪ್ರಾಂಶುಪಾಲೆ ಗೀತಾ, ಸರಸ್ವತಿ ಆಂ. ಮಾ. ಶಾಲೆ ಮುಂಡಾಜೆಯ ಮುಖ್ಯ ಶಿಕ್ಷಕಿ ಚಂದ್ರಮತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ವಾಲಿಬಾಲ್ ಆಟಗಾರ್ತಿ ಯಕ್ಷಿತಾ ಇವರು ಕ್ರೀಡಾ ಪ್ರತಿಜ್ಞೆಯನ್ನು ಬೋಧಿಸಿದರು. ಪ. ಪೂ. ಕಾಲೇಜಿನ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ಅಜಿತ್ ಕುಮಾರ್ ಜೈನ್ ಕೊಕ್ರಾಡಿ ನಿರೂಪಿಸಿ, ಬೆಳ್ತಂಗಡಿಯ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ ಕೃಷ್ಣಾನಂದ ರಾವ್ ಧನ್ಯವಾದಗೈದರು.


ಕ್ರೀಡಾ ವಿಭಾಗ, ಪ. ಪೂ. ಕಾಲೇಜಿನ ಎನ್ ಎಸ್ ಎಸ್, ರೋವರ್ಸ್ ಮತ್ತು ರೇಂಜರ್ಸ್ ವಿಭಾಗಗಳ ವಿದ್ಯಾರ್ಥಿಗಳು ಸ್ವಯಂ ಸೇವಕರಾಗಿ ಸಹಕರಿಸಿದರು. ಕ್ರೀಡಾಪಟುಗಳನ್ನು ಸೋಮಂತಡ್ಕ- ಮುಂಡಾಜೆ ಪೇಟೆಯಿಂದ ಗೌರವಪೂರ್ವಕವಾಗಿ ವಾದ್ಯ ಘೋಷಗಳೊಂದಿಗೆ ಸಂಭ್ರಮದಿಂದ ಮೆರವಣಿಗೆಯಲ್ಲಿ ಬರಮಾಡಿಕೊಳ್ಳಲಾಯಿತು.

Related posts

ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ : ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಎರಡು ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್ ಕೊಡುಗೆ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆ ನೇತೃತ್ವದಲ್ಲಿ ಸ್ಥಳೀಯ ಶಾಲಾ ಮಕ್ಕಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಸೌಜನ್ಯ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಎಸ್‌.ಐ.ಟಿ ಅಧಿಕಾರಿಗಳಿಗೆ ದೂರು ನೀಡಿದ ಸೌಜನ್ಯ ತಾಯಿ ಕುಸುಮಾವತಿ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅತ್ಯುತ್ತಮ ಸಾಧನೆ-ಪ್ರಸಕ್ತ ಸಾಲಿನಲ್ಲಿ ರೂ 326 ಕೋಟಿ ಠೇವಣಿ,ರೂ.269 ಕೋಟಿ ಸಾಲ,ರೂ.70 ಕೋಟಿ ಹೂಡಿಕೆ,ರೂ.5.85 ಕೋಟಿ ಲಾಭ

Suddi Udaya

ಕುಕ್ಕೇಡಿ: ಮೇಸ್ತ್ರೀ ಕೆಲಸ ನಿರ್ವಹಿಸುತ್ತಿದ್ದಾಗ ಆಕಸ್ಮಿಕವಾಗಿ ಬಿದ್ದು ಯುವಕ ಸಾವು

Suddi Udaya
error: Content is protected !!