32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಚಿವ ದಿನೇಶ್ ಗುಂಡೂರಾವ್‌ರಿಂದ ಉಜಿರೆ ಮತ್ತು ಬೆಳ್ತಂಗಡಿಯಲ್ಲಿ ನಿರ್ಮಾಣಗೊಳ್ಳಲಿರುವ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸ

ಬೆಳ್ತಂಗಡಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಂಗಳೂರು ದ.ಕ.ಜಿಲ್ಲಾ ಪಂಚಾಯತ್, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ಉಜಿರೆ ಹಾಗೂ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಬೆಳ್ತಂಗಡಿ ಟೌನ್‌ನಲ್ಲಿ ತಲಾ 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ವಿದ್ಯಾರ್ಥಿ ನಿಲಯದ ಶಿಲಾನ್ಯಾಸ ಕಾರ್ಯಕ್ರಮ ಅ.11 ರಂದು ಲಾಯಿಲದ ಕಾಶಿಬೆಟ್ಟು ಬಳಿ ನಡೆಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ದಿನೇಶ್ ಗುಂಡೂರಾವ್ ಶಿಲಾನ್ಯಾಸ ನೆರವೇರಿಸಿ, ನಾಮಫಲಕ ಅನವಾರಣಗೊಳಿಸಿದರು.

ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ್ತ ಅಧ್ಯಕ್ಷ ಕೆ.ಹರೀಶ್ ಕುಮಾರ್, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತ ಡಿ.ಎಸ್.ಗಟ್ಟಿ, ಕರ್ನಾಟಕ ಪರಿಸರ ಮತ್ತು ಪ್ರವಾಸೋಧ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೋ, ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆಯ ಅಧ್ಯಕ್ಷೆ ಲಾವಣ್ಯ ಬಲ್ಲಾಳ್ ಜೈನ್, ದ.ಕ.ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್ ಲಾಯಿಲ, ಪ.ಪಂ.ಅಧ್ಯಕ್ಷ ಜಯಾನಂದ ಗೌಡ ಟಿ., ಸದಸ್ಯ ಜಗದೀಶ್ ಡಿ, ಲಾಯಿಲ ಗ್ರಾ.ಪಂ.ಅಧ್ಯಕ್ಷೆ ಜಯಂತಿ ಎಂ.ಕೆ., ಉಪಧ್ಯಾಕ್ಷೆ ಸುಗಂಧಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪದ್ಮರಾಜ್ ಆರ್.ಪೂಜಾರಿ ಹಾಗೂ ರಕ್ಷಿತ್ ಶಿವಾರಂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಬಿಂದಿಯಾ ಎನ್. ನಾಯಕ, ಡಿಹೆಚ್‌ಓ, ತಾ.ಪಂ. ಇಓ ಭವಾನಿಶಂಕರ್ ಎನ್, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜೋಸೆಫ್ ಪಿ.ಎಸ್ ಸಹಿತ ಮತ್ತಿತರರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಸಮೀಪದ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ನ ವರ್ಷಂಪ್ರತಿ ನಡೆಯುವ ಉರೂಸ್ ಸಮಾರಂಭದ ಪೋಸ್ಟರ್ ಬಿಡುಗಡೆ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯ ಎಸ್.ಡಿ.ಎಂ.ಸಿ ಸಮಿತಿ ರಚನೆ

Suddi Udaya

ಲಾಯಿಲ: ಪಿ.ಎಮ್ ವಿಶ್ವಕರ್ಮ ಯೋಜನೆಯ ಮಾಹಿತಿ ಹಾಗೂ ಆನ್ಲೈನ್ ನೋಂದಾವಣೆ ಕಾರ್ಯಕ್ರಮ

Suddi Udaya

ಬಳಂಜ: ಕಾಪಿನಡ್ಕ ರಬ್ಬರ್ ತೋಟದಲ್ಲಿ ಚಿರತೆ ಪ್ರತ್ಯಕ್ಷ

Suddi Udaya

ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ

Suddi Udaya
error: Content is protected !!