September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ನೆರಿಯ: ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ಅ.10 ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಯೋನ್ ಅಶ್ರಮದ ಮ್ಯಾನೇಜಿಂಗ್ ಟ್ರಸ್ಟೀ ತ ಡಾ.ಯು.ಸಿ.ಪೌಲೋಸ್ ರವರು ಮಾತನಾಡಿ, ಮಾನಸಿಕ ಕಾಯಿಲೆಯ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿಯನ್ನು ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತಿದೆ. ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವೂ ಮುಖ್ಯ. ಮಾನಸಿಕ ಆರೋಗ್ಯವಿಲ್ಲದಿದ್ದರೆ ಒಬ್ಬ ಮನುಷ್ಯ ನೆಮ್ಮದಿಯಾಗಿ, ಸುಖವಾಗಿ ಬಾಳಲು ಸಾಧ್ಯವಿಲ್ಲ. ಇದಕ್ಕೆ ಧ್ಯಾನ ಮತ್ತು ದೈವಿಕ ಶಕ್ತಿಯು ಮುಖ್ಯ ಪಾತ್ರ ವಹಿಸುತ್ತದೆ. ಪ್ರೀತಿ ಮತ್ತು ತಿಳುವಳಿಕೆಯಿಂದ ಪರಸ್ಪರರ ಮಾನಸಿಕ ಆರೋಗ್ಯವನ್ನು ಬೆಂಬಲಿಸೋಣ ಎಂದರು.

ಅತಿಥಿಗಳಾಗಿ ಶ್ರೀನಿವಾಸ್ ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್ ಮಂಗಳೂರಿನ ಉಪನ್ಯಾಸಕರಾದ ಸನಲ್ ಪ್ರಮೋದ್ ಮಾನಸಿಕ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕೆಂಬುದನ್ನು ಸಂಕ್ಷಿಪ್ತವಾಗಿ ವಿವರಿಸಿ, ಮಾನಸಿಕ ಆರೋಗ್ಯವಾಗಿರುವ ವ್ಯಕ್ತಿಯು ಜೀವನದಲ್ಲಿ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸುವ ಶಕ್ತಿಯನ್ನು ಹೊಂದಿರುತ್ತಾನೆ ಎಂದರು.

ಸಿಯೋನ್ ಸಂಸ್ಥೆಯ ವೈದ್ಯಾಧಿಕಾರಿ ಶ್ರೀಯುತ ಡಾ.ಶಿವಾನಂದ ಸ್ವಾಮಿಯವರು, ಒಬ್ಬ ವ್ಯಕ್ತಿಗೆ ಮಾನಸಿಕ ಕಾಯಿಲೆ ಬರಬಹುದಾದ ಸಾಧ್ಯತೆಗಳ ಕಾರಣಗಳು, ವಿಧಗಳು, ಲಕ್ಷಣಗಳು, ಪರಿಹಾರಗಳನ್ನು ವಿವರಿಸಿ, ದೈಹಿಕವಾಗಿ ನಾವೆಷ್ಟೇ ಆರೋಗ್ಯವಾಗಿದ್ದರೂ, ನಮ್ಮ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳದಿದ್ದರೆ ಎಲ್ಲವೂ ಶೂನ್ಯ. ನಮ್ಮ ಜೀವನದಲ್ಲಿ ನಾವು ಸದೃಢರಾಗಿರಬೇಕೆಂದರು. ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ., ಸಂಸ್ಥೆಯ ಆಡಳಿತಾಧಿಕಾರಿ ಶ್ರೀಮತಿ ಶೋಭಾ ಯು.ಪಿ., ಹಣಕಾಸು ವ್ಯವಸ್ಥಾಪಕಿ ಶ್ರೀಮತಿ ಸೌಮ್ಯ ಯು.ಪಿ., ಆಶ್ರಮ ನಿವಾಸಿಯಾದ ನಾಗವೇಣಿಯವರು ಉಪಸ್ಥಿತರಿದ್ದರು.

ಸಂಸ್ಥೆಯ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು, ಶ್ರೀನಿವಾಸ್ ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್ ನ ವಿದ್ಯಾರ್ಥಿಗಳು, ಆಶ್ರಮನಿವಾಸಿಗಳು ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿ ಶ್ರೀಮತಿ ದಿನವತಿ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿ ಶ್ರೀಮತಿ ಸಿಂಧು ವಿ.ಎಂ. ಸ್ವಾಗತಿಸಿ, ಸಿಬ್ಬಂದಿ ಶ್ರೀಮತಿ ಆಶಾ ಸುಧಾಕರ್ ವಂದಿಸಿದರು. ಶ್ರೀನಿವಾಸ್ ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್ ಮಂಗಳೂರಿನ ವಿದ್ಯಾರ್ಥಿಗಳು ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ನೀಡಿ ಮನರಂಜಿಸಿದರು.

Related posts

ನ.24: ಎಂ.ಸಿ.ಸಿ. ಬ್ಯಾಂಕಿನ 18ನೇ ಶಾಖೆ ಬೆಳ್ತಂಗಡಿಯಲ್ಲಿ ಉದ್ಘಾಟನೆ

Suddi Udaya

ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ರೋಗಿಗಳ ಸೇವೆಗೆ ಲಭಿಸುತ್ತಿಲ್ಲ : ಪಟ್ಟಣ ಪಂಚಾಯತ್ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರ ಆಕ್ರೋಶ

Suddi Udaya

ಉಜಿರೆ: ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ ನಿಧನ

Suddi Udaya

ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ಉಮಿದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಇಂದಬೆಟ್ಟು: ಕುಡಿಯುವ ನೀರಿಗಾಗಿ ಗ್ರಾ.ಪಂ. ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರಿಂದ ಪಂಚಾಯತ್ ಎದುರು ಪ್ರತಿಭಟನೆ: ಶೀಘ್ರವಾಗಿ ದುರಸ್ತಿ ಮಾಡಿಸಿಕೊಡುವುದಾಗಿ ಗ್ರಾ.ಪಂ. ಅಧ್ಯಕ್ಷೆ ಭರವಸೆ

Suddi Udaya

ಉಜಿರೆ: ಓಡಲದಲ್ಲಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿ ಪರಾರಿ

Suddi Udaya
error: Content is protected !!