22.9 C
ಪುತ್ತೂರು, ಬೆಳ್ತಂಗಡಿ
March 7, 2026
ಅಭಿನಂದನೆಚಿತ್ರ ವರದಿವರದಿ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ: ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ,ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ ಸುಮಂತ್ ಕುಮಾರ್‌ ಜೈನ್ ಅವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಪ್ರದಾನ

ಬಳಂಜ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ, ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ ಸುಮಂತ್ ಕುಮಾರ್‌ ಜೈನ್ ಅವರು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಅಪಾರ ಸೇವೆಯನ್ನು ಪರಿಗಣಿಸಿ ಅ.12 ರಂದು ಶಿಕ್ಷಣ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಾಮಾಜಿಕ,ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸಮಾಜಕ್ಕೆ ವಿಶಿಷ್ಟ ಸೇವೆ ಸಲ್ಲಿಸಿದ ಸುಮಂತ್ ಕುಮಾರ್ ಮಾತನಾಡಿ ಅದೃಷ್ಟದ ಮೇಲೆ ಎಂದಿಗೂ ನಂಬಿಕೆ ಇಡಬೇಡಿ. ನಿಮ್ಮ ಕಠಿಣ ಶ್ರಮದ ಮೇಲೆ ನಂಬಿಕೆ ಇಡಿ, ಯಶಸ್ಸು ನಿಮ್ಮದಾಗುತ್ತದೆ.ನಮ್ಮ ಕಾಲೇಜಿನಲ್ಲಿ ಕಲಿತು ಹೋದ ಮಕ್ಕಳು ಇಂದು ದೇಶದ ಪ್ರತಿಷ್ಠಿತ ಕಂಪನಿಗಳಲ್ಲಿ,ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಂದುವರಿಸುತ್ತಿದ್ದಾರೆ. ನಮ್ಮ ಮಕ್ಕಳು ದೇಶಕ್ಕೆ ಆಸ್ತಿಯಾಗಬೇಕು. ಹೆತ್ತವರಿಗೆ ಒಳ್ಳೆಯ ಮಗನಾಗಬೇಕು. ಹಾಗಾಗಿ ನಮ್ಮಲ್ಲಿ ಸಂಸ್ಕಾರಭರಿತ ಮತ್ತು ಗುಣಮಟ್ಟದ ಶಿಕ್ಷಣ ನೀಡುತ್ತಿದ್ದೇವೆ ಎಂದರು.

ಇಂದಿನ ಯುವ ಸಮಾಜಕ್ಕೆ ನಮ್ಮ ಸಂಸ್ಕೃತಿ,ಆಚಾರ ವಿಚಾರದ ಬಗ್ಗೆ ತಿಳಿಯಪಡಿಸುವ ಉದ್ದೇಶದಿಂದ ಹಲವಾರು ವಿಶಿಷ್ಟ, ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಯಾಗಿದ್ದೇವೆ.ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಕಾರ್ಯಚಟುವಟಿಕೆಗಳು ಸಮಾಜಕ್ಕೆ ಮಾದರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ, ಕಾರ್ಯದರ್ಶಿ ರಂಜಿತ್ ಪೂಜಾರಿ,ನಿರ್ದೇಶಕರಾದ ಮನೋಹರ್ ಬಳಂಜ,ದಿನೇಶ್ ಪೂಜಾರಿ ಅಂತರ,ಯತೀಶ್ ವೈ ಎಲ್ ಬಳಂಜ, ಜಗದೀಶ್ ಪೂಜಾರಿ ಬಳ್ಳಿದಡ್ಡ,ಪ್ರವೀಣ್ ಡಿ ಕೋಟ್ಯಾನ್,ಯೋಗೀಶ್ ಕೊಂಗುಳ,ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಅಳದಂಗಡಿ: ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ನಿಂದ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Suddi Udaya

ಉಜಿರೆ ಪ್ರಮೋದ್ ಗೌಡ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಉಜಿರೆ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ತಣ್ಣೀರುಪಂತ: ಎರಡು ವರ್ಷದಿಂದ ಕಾಣೆಯಾದ ವ್ಯಕ್ತಿ ಪತ್ತೆ

Suddi Udaya

“ನಮ್ಮ ಜವನೆರ್ ವಾಟ್ಸಪ್ ಗ್ರೂಪ್ ಅಳದಂಗಡಿ” ಹಾಗೂ “ಪಬ್ ಜಿ “ಗ್ರೂಪಿನ ಸದಸ್ಯರಿಂದ ಸಹಾಯಧನ ಹಸ್ತಾಂತರ

Suddi Udaya
error: Content is protected !!