September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

ಉಜಿರೆ : ಪುದುವೆಟ್ಟಿನಂತಹ ಗ್ರಾಮೀಣ ಪ್ರದೇಶದಲ್ಲಿ ಎನ್ಎಸ್ಎಸ್ ಕಾರ್ಯ ಚಟುವಟಿಕೆ ಹಮ್ಮಿಕೊಂಡಿರುವುದು ಸಂತಸವಾಗಿದೆ ಎಂದು ಪುದುವೆಟ್ಟು ಗ್ರಾ.ಪಂ.ಅಧ್ಯಕ್ಷ ಪೂರ್ಣಾಕ್ಷ ಹೇಳಿದರು.
ಅವರು ಎಸ್ ಡಿ ಎಮ್ ಅನುದಾನಿತ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಮಾತನಾಡಿ, ಎನ್ ಎಸ್ ಎಸ್ ಎಂದರೆ ಕೇವಲ ಶ್ರಮದಾನ ಅಲ್ಲ, ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನ, ಜೀವನ ಮೌಲ್ಯ, ಮತ್ತು ಅವರು ಬದುಕುವ ಕಲೆಯನ್ನು ಶಿಬಿರಗಳ ಮೂಲಕ ಪ್ರಾಯೋಗಿಕವಾಗಿ ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಗುವುದು. ಶ್ರಮದಾನದಲ್ಲಿ ಕೆಲಸ ಮಾಡುವ ಮೂಲಕ ವಿದ್ಯಾರ್ಥಿಗಳಲ್ಲಿ ಸಹಕಾರ ಮನೋಭಾವ, ಸೇವಾ ಮನೋಭಾವವನ್ನು ಮೂಡಿಸಿ ಅವರು ಸಾಮಾಜಿಕವಾಗಿ ತೊಡಗಿಸಿಕೊಳ್ಳಬೇಕು ಎಂಬುದೇ ಈ ಶಿಬಿರದ ಉದ್ದೇಶವಾಗಿದೆ ಎಂದರು.

ವಾಣಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಯದುಪತಿ ‌ಗೌಡ, ಎಸ್ ಡಿ ಎಮ್ ಅನುದಾನಿತ ಪ್ರಾಥಮಿಕ ಶಾಲೆ ಪುದುವೆಟ್ಟಿನ ಮುಖ್ಯೋಪಾಧ್ಯಾಯ ಶೀನಪ್ಪ ಗೌಡ, ನಿವೃತ ಮುಖ್ಯ ಶಿಕ್ಷಕ ಶ್ರೀಧರ್ ನಾಯರ್, ಪ್ರಗತಿ ಪರ ಕೃಷಿಕ ಚಿತ್ತರಂಜನ್ ಜೈನ್, ಸಹಕಾರಿ ಹಾಲು ಉತ್ಪಾದಕರ ಸಂಘದ ರಂಗನಾಥ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಶಶಿಧರ್, ಎ ಪಿ ಎಂ ಸಿ ಮಾಜಿ ಸದಸ್ಯರಾದ ಅಬ್ದುಲ್ ಗಪೂರ್, ಮತ್ತಿತರರು ಉಪಸ್ಥಿತರಿದ್ದರು.

ಎನ್ಎಸ್ಎಸ್ ಯೋಜನಾಧಿಕಾರಿ ಪ್ರಕಾಶ್ ಗೌಡ ಮತ್ತು ಉಪ ಯೋಜನಾಧಿಕಾರಿಗಳಾದ ಲೋಹಿತ್ ಎಸ್, ಪುಷ್ಪಲತಾ ಉಪಸ್ಥಿತರಿದ್ದರು. ಶಿಬಿರಾರ್ಥಿಗಳಾದ ಮಂಜೂಷ ಸ್ವಾಗತಿಸಿ , ಮಾನ್ಯ ವಂದಿಸಿದರು. ಭವಿತಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya

ಬಿಜೆಪಿ ಮಂಡಲದ ವತಿಯಿಂದ ಲಾಯಿಲ ಶಕ್ತಿಕೇಂದ್ರದ ಕಾರ್ಯಕರ್ತರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಮಹಾಬಲ ನಾಯ್ಕ ಮರಿಕೆ ನಿಧನ

Suddi Udaya

ಉಜಿರೆ:ಕಾಲಭೈರವ ಆರ್ಕೇಡ್ ನಲ್ಲಿ ಸಮೃದ್ದಿ ಟ್ರೇಡರ್ಸ್ ದಿನಸಿ ಮಳಿಗೆ ಶುಭಾರಂಭ

Suddi Udaya

ಯುವ ಕಾಂಗ್ರೆಸ್ ದಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಮಂಗಳೂರಿನಲ್ಲಿ ಬ್ರಹತ್ ಪಂಜಿನ ಮೆರವಣಿಗೆ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ಸಾವಿರದ ನುಡಿ ನಮನ ಕಾಯ೯ಕ್ರಮ

Suddi Udaya
error: Content is protected !!