25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ ಸಮಾರೋಪ 

ಬೆಳ್ತಂಗಡಿ : ಜಿಲ್ಲಾಡಳಿತ ಮತ್ತು ಜಿಪಂ ದಕ, ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಹಾಗೂ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ವತಿಯಿಂದ ಮುಂಡಾಜೆ ಅನುದಾನಿತ ಪ್ರೌಢಶಾಲೆಯ ವಿವೇಕಾನಂದ ಕ್ರೀಡಾಂಗಣದಲ್ಲಿ ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ ಅ.11ರಂದು ಜರಗಿತು.

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ವಿನಯಚಂದ್ರ ವಹಿಸಿದ್ದರು. ಆರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ, ಎಕ್ಸೆಲ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್,ಯಂಗ್ ಚಾಲೆಂಜರ್ಸ್ ಸ್ಪೋರ್ಟ್ಸ್ ಕ್ಲಬ್ ನ ಸಂಚಾಲಕ ನಾಮದೇವ ರಾವ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.

8 ಜಿಲ್ಲೆಗಳಿಂದ ಒಟ್ಟು 32 ತಂಡಗಳ 600 ಕ್ರೀಡಾಪಟುಗಳು ಭಾಗವಹಿಸಿದ್ದರು. 17 ರ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಹಾಸನ ಜಿಲ್ಲೆಯ ಅರಕಲಗೂಡು ಸರಕಾರಿ ಪ್ರೌಢಶಾಲೆ ಬಾಲಕಿಯರ ತಂಡ, 17ರ ವಯೋಮಾನದ ಬಾಲಕರ ವಿಭಾಗದ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಹಾಸನ ಜಿಲ್ಲೆಯ ಮಂಗಳೂರು ಪಬ್ಲಿಕ್ ಸ್ಕೂಲ್ ನ ಬಾಲಕರ ತಂಡ, 14 ರ ವಯೋಮಾನದ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ದಕ ಜಿಲ್ಲೆಯ ಪುತ್ತೂರಿನ ಬಾಲಕರ ತಂಡ,14 ರ ವಯೋಮಾನದ ಬಾಲಕಿಯರ ವಿಭಾಗದ ಪಂದ್ಯಾಟದಲ್ಲಿ  ಹಾಸನ ಜಿಲ್ಲೆಯ ಅರಕಲಗೂಡಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿಕೊಂಡಿದೆ.

Related posts

ಡಾ. ಸುಬ್ರಹ್ಮಣ್ಯ ಭಟ್ಟರ ಐತಿಹಾಸಿಕ ಕಾದಂಬರಿ “ಪ್ರತಿಷ್ಠೆ” ಅಳದಂಗಡಿ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರವರಿಂದ ಬಿಡುಗಡೆ

Suddi Udaya

ಗೇರುಕಟ್ಟೆ ಜವಳಿ ಉದ್ಯಮಿ ಸತೀಶ್ ಕುಮಾರ್ ಬಿ. ನಿಧನ

Suddi Udaya

ಬಳಂಜ ಶಾಲೆಯ ಹಳೆ ವಿದ್ಯಾರ್ಥಿ ಪ್ರವೀಣ್ ಜೈನ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಜೆ.ಇ.ಇ.(ಬಿ.ಆರ್ಕ್) ಫಲಿತಾಂಶ ಪ್ರಕಟ: ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಲಾಯಿಲ : ಚಂದ್ಕೂರು ರಸ್ತೆಯಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಪರಿಶೀಲನೆ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಾದ ತೇಜಸ್ ಮತ್ತು ಸಾತ್ವಿಕ್ ಯಂ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!