23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದಿಂದ ಹೈನುಗಾರಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಚೆಕ್ ವಿತರಣೆ

ಬೆಳ್ತಂಗಡಿ: ದ.ಕ ಸಹಕಾರಿ ಹಾಲು ಒಕ್ಕೂಟ ಮಂಗಳೂರು ಮತ್ತು ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನೇತೃತ್ವದಲ್ಲಿ ಹೈನುಗಾರಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಚೆಕ್ ವಿತರಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ರವರು, “ಹೈನುಗಾರಿಕೆಯ ಮೂಲಕ ಸ್ವಾಭಿಮಾನದ ಬದುಕಿಗೆ ಪ್ರೋತ್ಸಾಹ ನೀಡುವುದು, ಮಹಿಳೆಯರ ಸಬಲೀಕರಣ ಸಾಧಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಸುಮಾರು 6 ಮಂದಿ ಸದಸ್ಯರಿಗೆ ತಲಾ ರೂ. 46,000 ಮೌಲ್ಯದ ಚೆಕ್‌ಗಳನ್ನು ವಿತರಿಸಲಾಯಿತು.


ಸಂಘದ ಅಧ್ಯಕ್ಷೆ ಶ್ರೀಮತಿ ರಾಜೇಶ್ವರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ವೇದಿಕೆಯಲ್ಲಿ ದ. ಕ ಹಾಲು ಒಕ್ಕೂಟದ ಉಪಾಧ್ಯಕ್ಷ ಉದಯ ಎಸ್ ಕೋಟ್ಯಾನ್, ದ. ಕ ಹಾಲು ಒಕ್ಕೂಟದ ನಿರ್ದೇಶಕರುಗಳಾದ ಶ್ರೀಮತಿ ಸವಿತಾ ಎನ್ ಶೆಟ್ಟಿ, ಚಂದ್ರಶೇಖರ್ ರಾವ್, ಹೆಚ್. ಪ್ರಭಾಕರ್, ಭರತ್ ಎನ್, ಹಾಗೂ ದ ಕ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಾದ ವಿವೇಕ್ ಡಿ, ವ್ಯವಸ್ಥಾಪಕರಾದ ರವಿರಾಜ್ ಉಡುಪ, ಉಪವ್ಯವಸ್ಥಾಪಕರಾದ ಸತೀಶ್ ರಾವ್ ಉಪಸ್ಥಿತರಿದ್ದರು.

ಉಪ ವ್ಯವಸ್ಥಾಪಕರಾದ ಶ್ರೀಮತಿ ಶ್ರುತಿ ವಿಸ್ತರಣಾಧಿಕಾರಿಗಳಾದ ರಾಜೇಶ್ ಕಾಮತ್, ಸ್ಟೆಪ್ ಯೋಜನಾ ಸಂಯೋಜಕರಾದ ಶ್ರೀಮತಿ ನಳಿನಿ ಸಂಘದ ಎಲ್ಲಾ ನಿರ್ದೇಶಕರು ಹಾಜರಿದ್ದರು.
ಸಂಘದ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಭವ್ಯ ಕೆ.ಎಸ್. ಸ್ವಾಗತಿಸಿ, ನಿರೂಪಿಸಿ, ಧನ್ಯವಾದವಿತ್ತರು.

Related posts

ಲಾಯಿಲ :ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ 1 ನೇ ತರಗತಿ ಆಂಗ್ಲ ಮಾಧ್ಯಮ ಉದ್ಘಾಟನೆ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ ಆಡಳಿತ ಮಂಡಳಿ ರಚನೆ: ಅಧ್ಯಕ್ಷರಾಗಿ ಯುವ ನಾಯಕ ಸಂತೋಷ್ ಪಿ ಕೋಟ್ಯಾನ್ ಬಳಂಜ ಆಯ್ಕೆ

Suddi Udaya

5, 8, 9 ಮತ್ತು 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ಆದೇಶ

Suddi Udaya

ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಫೆ.13: ಅರೆಮಲೆಬೆಟ್ಟ ಜಾತ್ರಾ ಮಹೋತ್ಸವ

Suddi Udaya
error: Content is protected !!