ಬೆಳ್ತಂಗಡಿ: ಪ್ರಸಿದ್ಧ ಗುಜರಾತ್ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿಯವರ ಮಾತೃಶ್ರೀ ಕಾಶಿ ಶೆಟ್ಟಿ (86ವ) ಅವರು ಇಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಇವರು ಮಕ್ಕಳಾದ ಶ್ರೀನಿವಾಸ್ ಶೆಟ್ಟಿ, ಜಯರಾಮ ಶೆಟ್ಟಿ, ಶಶಿಧರ ಶೆಟ್ಟಿ, ಪ್ರಶಾಂತ ಶೆಟ್ಟಿ, ಹರೀಶ್ ಶೆಟ್ಟಿ, ರಾಜೇಶ್ ಶೆಟ್ಟಿ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕಾಶಿ ಶೆಟ್ಟಿಯವರ ನಿಧಾನಕ್ಕೆ ಅಳದಂಗಡಿ ಅರಮನೆಯ ಡಾ.ಪದ್ಮಪ್ರಸಾದ ಅಜಿಲ, ಶಿವಪ್ರಸಾದ್ ಅಜಿಲ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.











