22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಾಲೂಕು ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣ ಕುರಿತು ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣ ಕುರಿತು ವಿವಿಧ ಸಂಘ ಸಂಸ್ಥೆಗಳ ಮುಖಂಡರ ಜೊತೆ ಪೂರ್ವಭಾವಿ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಅ.14 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ವಿನೂತನ ರೀತಿಯಲ್ಲಿ ರಾಜ್ಯಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ಅಂದಾಜು 7 ಕೋಟಿ ರೂಪಾಯಿ ವೆಚ್ಚದ ಯೋಜನೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣವಾಗಲಿದೆ. ಈಗಾಗಲೇ ಕಟ್ಟಡ ನಿರ್ಮಾಣಕ್ಕೆ 3.60 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ. ಬೆಳ್ತಂಗಡಿ ತಾಲೂಕು ಕ್ರೀಡಾಂಗಣದ ಸ್ಥಳದಲ್ಲಿ 2.48 ಎಕ್ರೆ ಜಾಗದಲ್ಲಿ ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಾಣವಾಗಲಿದೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ರೆಂಕೆದಗುತ್ತು ಎಂಬಲ್ಲಿ ನೂತನ ತಾಲೂಕು ಕ್ರೀಡಾಂಗಣಕ್ಕೆ ಜಾಗ ಕಾಯ್ದಿರಿಸಿಲಾಗಿದೆ ಎಂದು ಶಾಸಕರು ತಿಳಿಸಿದರು.

ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ, ಉಪಾಧ್ಯಕ್ಷೆ ಗೌರಿ ಮತ್ತು ಸದಸ್ಯ ಅಂಬರೀಷ್ ಮತ್ತು ತಾಲೂಕು ಪಂಚಾಯತ್ ಇಓ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ಪ್ರಶ್ವಿನ್ ಪ್ರಿಂಟರ್ಸ್ ಶುಭಾರಂಭ

Suddi Udaya

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಧರ್ಮಗುರುಗಳಾದ ಫಾ. ಜೇಮ್ಸ್ ಪಟ್ಟೇರಿಲ್ ಆಯ್ಕೆ

Suddi Udaya

ಮದರಂಗಿ ಶಾಸ್ತ್ರದ ನಡುವೆ ಮತಚಲಾಯಿಸಿದ ಮದುಮಗಳು: ಮಲವಂತಿಗೆ ಗ್ರಾಮದ ಮೋಹಿನಿಯವರು ಮತಚಲಾಯಿಸಿ ಎಲ್ಲರ ಗಮನ ಸೆಳೆದರು

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ

Suddi Udaya

ನೀರ್ನಳ್ಳಿ ಗಣಪತಿಯವರಿಗೆ ಉಂಡೆಮನೆ ಗೌರವ ಪ್ರಶಸ್ತಿ

Suddi Udaya
error: Content is protected !!