22.9 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಟ್ರಯಥ್ಲಾನ್ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ ಶಿಪ್‌: ಪಡಂಗಡಿಯ ಕುವರಿ ಅದ್ವಿಕಾ ಕೆಪಿ ಯವರಿಗೆ ಕಂಚಿನ ಪ್ರಶಸ್ತಿ

ಬೆಳ್ತಂಗಡಿ: ಒಡಿಶಾದ ಭುಭನೇಶ್ವರ ಕಳಿಂಗ ಕ್ರೀಡಾಂಗಣದಲ್ಲಿ ಅ.10ರಿಂದ 14ರವರೆಗೆ ನಡೆದ 40ನೇ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ ಶಿಪ್‌ 2025 ರಲ್ಲಿ ಟ್ರಯಥ್ಲಾನ್ ಬಿ ವಿಭಾಗದಲ್ಲಿ 2739 ಅಂಕಗಳನ್ನು ಪಡೆದ ಕರ್ನಾಟಕದ ಅದ್ವಿಕಾ ಕೆಪಿ ಕಂಚಿನ ಪದಕವನ್ನು ಜಯಿಸಿದ್ದಾರೆ.

ಜೊತೆಗೆ ಉಡುಪಿಯಲ್ಲಿ ನಡೆದ ರಾಜ್ಯಮಟ್ಟದ ಜೂನಿಯರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 14 ವಯೋಮಾನದ ಟ್ರಯಥ್ಲಾನ್ ಬಿ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಇವರು ಮಂಗಳ ಕ್ರೀಡಾಂಗಣದ ಮಂಗಳ ಅಥ್ಲೆಟಿಕ್ ಕ್ಲಬ್ ನಲ್ಲಿ ಅಂತರರಾಷ್ಟ್ರೀಯ ಕೋಚ್ ದಿನೇಶ್ ಕುಂದರ್ ರವರಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ. ಮೂಲತಃ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದವರಾಗಿದ್ದು ಪ್ರಸ್ತುತ ಮಂಗಳೂರಿನಲ್ಲಿ ನೆಲೆಸಿದ್ದಾರೆ. ಇವರು ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಡಾ. ಅರುಣ್ ಕೆಪಿ ಮತ್ತು ಗೀತಾ ದಂಪತಿಯ ಸುಪುತ್ರಿಯಾಗಿದ್ದು, ಸೈಂಟ್ ಆಗ್ನೆಸ್ ಸಿಬಿಎಸ್ಸಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

Related posts

ಬಿಲ್ಲವ ಫ್ಯಾಮಿಲಿ‌ ದುಬೈ ವತಿಯಿಂದ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಪೀತಾಂಬರ ಹೇರಾಜೆಯವರಿಗೆ ಗೌರವ ಸನ್ಮಾನ

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಗೌರವ ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ಆನ್ ಫಿಟ್ ಮಲ್ಟಿ ಜಿಮ್ ಶುಭಾರಂಭ

Suddi Udaya

ಕಣಿಯೂರು 45ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಭರತನಾಟ್ಯದಲ್ಲಿ ಅಂಡಿಂಜೆಯ ಸಾನ್ವಿ ಸಾಲಿಯಾನ್‌ಗೆ ಡಿಸ್ಟಿಂಕ್ಷನ್

Suddi Udaya

ಸೆ 29 : ತೋಟತ್ತಾಡಿ 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya
error: Content is protected !!