27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶದಲ್ಲಿ ಲೋಪವಾಗಿಲ್ಲ: ರಾಜ್ಯ ಸರಕಾರ ಸಮರ್ಥನೆ

ಬೆಳ್ತಂಗಡಿ: ಸೌಜನ್ಯಾ ಸಾವಿಗೆ ನ್ಯಾಯ ದೊರಕಿಸಲು ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡೀಪಾರು ಮಾಡಿ ಹೊರಡಿಸಿರುವ ಆದೇಶದಲ್ಲಿ ಕಾನೂನು ಪ್ರಕ್ರಿಯೆ ಲೋಪವೂ ಆಗಿಲ್ಲ; ಸಹಜ ನ್ಯಾಯ ತತ್ವದ ಉಲ್ಲಂಘನೆಯೂ ಆಗಿಲ್ಲ ಎಂದು ರಾಜ್ಯ ಸರಕಾರ ಸಮರ್ಥಿಸಿಕೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ರಾಯಚೂರು ಜಿಲ್ಲೆ ಮಾನ್ವಿಗೆ ಗಡೀಪಾರು ಮಾಡಿ ಹೊರಡಿಸಲಾಗಿರುವ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಅ.13ರಂದು ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ತಾರಾನಾಥ ಪೂಜಾರಿ, ಗಡಿಪಾರು ಆದೇಶದಲ್ಲಿ ಒಂದಲ್ಲ, ಹತ್ತಾರು ಕಾನೂನು ಪ್ರಕ್ರಿಯೆಯ ಲೋಪಗಳಿವೆ. ಇಡೀ ಸರಕಾರ ಮತ್ತು ಗೃಹ ಇಲಾಖೆ ತಿಮರೋಡಿ ವಿರುದ್ಧ ನಿಂತಿದೆ. ತಿಮರೋಡಿ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಕುರಿತು ಯಾವುದೇ ವಿವರಗಳನ್ನು ಒದಗಿಸಲಾಗಿಲ್ಲ. ಈಗಾಗಲೇ ಸುಮಾರು 10 ಪ್ರಕರಣಗಳಲ್ಲಿ ಖುಲಾಸೆ ಆಗಿದ್ದು, ಎರಡು ಪ್ರಕರಣಗಳಲ್ಲಿ ಬಿ ರಿಪೋರ್ಟ್ ಸಲ್ಲಿಕೆಯಾಗಿದೆ. ಲೋಕಸಭೆ ಚುನಾವಣೆ ವೇಳೆ ಗಲಭೆ ಎಬ್ಬಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಆದರೆ, ಅದಕ್ಕೆ ಸಾಕ್ಷಿ ಕೊಟ್ಟಿಲ್ಲ. ಇವರ ಹೆದರಿಕೆಯಿಂದ ಸಾಕ್ಷಿಗಳು ಮುಂದೆ ಬರುವುದಿಲ್ಲ ಎಂದೆಲ್ಲ ಹೇಳಲಾಗಿದೆ. ಆದರೆ ಇದೆಲ್ಲವೂ ಸುಳ್ಳು ಎಂದರು. ಇದಕ್ಕೆ ಬಲವಾಗಿ ಆಕ್ಷೇಪಿಸಿದ ಅಡ್ವಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ತಿಮರೋಡಿ ಪರ ವಕೀಲರು ನ್ಯಾಯಾಲಯಕ್ಕೆ ಹೇಳುತ್ತಿರುವ ವಿವರಗಳು ಸರಿಯಲ್ಲ. ಸ್ಥಳೀಯ ನಿವಾಸಿಯಾಗಿರುವ ಮಹೇಶ್ ಶೆಟ್ಟಿ ತಿಮರೋಡಿ ಸೌಜನ್ಯಾ ಚಳವಳಿ ಹೆಸರಲ್ಲಿ ಏನು ಮಾಡುತ್ತಿದ್ದಾರೆ ಎಂಬುದು ಜನರಿಗೆ ಗೊತ್ತಿದೆ. ಸರಕಾರ ಸಹಜ ನ್ಯಾಯ ತತ್ವಕ್ಕೆ ವಿರುದ್ಧವಾಗಿ ನಡೆದುಕೊಂಡಿಲ್ಲ. ಅಲ್ಲದೇ ಅವರನ್ನು ಗಡೀಪಾರು ಮಾಡಿ ಹೊರಡಿಸಿದ ಆದೇಶದಲ್ಲಿ ಕಾನೂನು ಪ್ರಕ್ರಿಯೆಯ ಯಾವ ಲೋಪವೂ ಆಗಿಲ್ಲ ಎಂದು ವಿವರಿಸಿದರು. ಸುದೀರ್ಘ ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ಆದೇಶ ಕಾಯ್ದಿರಿಸಿರುವುದಾಗಿ ತಿಳಿಸಿತು. ಅಲ್ಲದೆ, ಗಡಿಪಾರು ಆದೇಶಕ್ಕೆ ಸಂಬಂಧಿಸಿದಂತೆ ತಿಮರೋಡಿ ವಿರುದ್ಧ ಆತುರದ ಕ್ರಮ ಜರುಗಿಸದಂತೆ ಈ ಹಿಂದೆ ಹೊರಡಿಸಿದ್ದ ಮಧ್ಯಾಂತರ ಆದೇಶವನ್ನು ವಿಸ್ತರಿಸಿತು.

Related posts

ಇಂದಬೆಟ್ಟು: ಬೆದ್ರಬೆಟ್ಟು ನಿವಾಸಿ ಕೇಶವ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಎಸ್ ಕೆ ಪಿ ಎ ಸದಸ್ಯರಿಗೆ ನಿಕಾನ್ ಕ್ಯಾಮರದ ಬಗ್ಗೆ ಕಾರ್ಯಾಗಾರ

Suddi Udaya

ಮನ್‌ಶರ್ ಪಿ.ಯು. ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಹಂಸಶ್ರೀ ಬಿ.ಆರ್. ಅಧಿಕಾರ ಸ್ವೀಕಾರ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಥಮ ವರ್ಷದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಪಾಲೇದು ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಕಣಿಯೂರು: ಕುಡುವಂತಿ ನಿವಾಸಿ ಪುತ್ತು ನಾಯ್ಕ ನಿಧನ

Suddi Udaya
error: Content is protected !!