23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.20 ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಶಾಸಕ ಹರೀಶ್ ಪೂಂಜರವರ ಸಾರಥ್ಯದ 6ನೇ ವರ್ಷದ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವ ಅ. 20 ರಂದು ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ ಜರುಗಲಿದೆಯೆಂದು ಬಿಜೆಪಿ ಯುವ ಮೋರ್ಚಾ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದೀಜಿಯವರು ಗುಜರಾತ್ ಹಾಗೂ ಭಾರತದ ಆಡಳಿತ ಚುಕ್ಕಾಣಿ ಹಿಡಿದು 25ನೇ ವರ್ಷ ಆರಂಭವಾಗುವ ಸವಿನೆನಪಿಗಾಗಿ ಅದೇ ದಿನ ಪೂರ್ವಾಹ್ನ 8.00 ಗಂಟೆಗೆ ನಮೋ‌ ಮ್ಯಾರಥಾನ್ ಓಟ ವಾಣಿ ಶಿಕ್ಷಣ ಸಂಸ್ಥೆಗಳ ಬಳಿಯಿಂದ ಆರಂಭಗೊಂಡು ಬಸ್ ನಿಲ್ದಾಣದವರೆಗೆ ನಡೆಯಲಿದೆ. ಬಳಿಕ ಗಣ್ಯರ ಉಪಸ್ಥಿತಿಯಲ್ಲಿ ತಾಲೂಕಿನ ಮನೆ ಹಬ್ಬವಾದ ದೋಸೆಹಬ್ಬಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ ನೀಡಲಿದ್ದಾರೆ. ಇದರೊಂದಿಗೆ ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸಾಂಸ್ಕೃತಿಕ ತುಡರ್ ನೃತ್ಯ ಸ್ಪರ್ಧೆ ಸಾಯಂಕಾಲದವರೆಗೆ ನಡೆಯಲಿದ್ದು, ಮಕ್ಕಳ ಹುಲಿವೇಷ ಸ್ಪರ್ಧೆ ಬಾಲೆ ಪಿಲಿ ಸಂಜೆ 6ರ ಗೋಧೋಳಿ ಮುಹೂರ್ತದಲ್ಲಿ ಗೋ ಪೂಜಾ ಉತ್ಸವ, ದೀಪ ಪ್ರಜ್ವಲನೆ ಹಾಗೂ ರಾತ್ರಿ ಭಜರಂಗ ಬಲಿ ನಾಟಕ ಪ್ರದರ್ಶನವೂ ಜರಗಲಿದೆ.

ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜು, ಜಿಲ್ಲಾ ಬಿಜೆಪಿ ಮುಖಂಡರು, ಸಂಸದರು, ಶಾಸಕರೂ ಸೇರಿದಂತೆ ಹಲವು ಗಣ್ಯರು ಭಾಗಿಯಾಗುವ ಈ ಸಾಂಸ್ಕೃತಿಕ ಹಬ್ಬದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಆಗಮಿಸಿ ದೋಸೆ ಸವಿದು ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿಕೊಂಡಿದ್ದಾರೆ.

Related posts

ಬೆಳ್ತಂಗಡಿ ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯ ನೇತೃತ್ವದಲ್ಲಿ ಆಟಿ ಕೂಟ

Suddi Udaya

ಮಿತ್ತಬಾಗಿಲು ಬಿ.ಕೆ ದೇವರಾಯರಿಗೆ ರೈತಪೀಠ ಪ್ರಶಸ್ತಿ

Suddi Udaya

ಕೊಯ್ಯೂರು : ಕಲ್ಪಾಮೃತ -ಸ್ವಾನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya

ಉಜಿರೆ ಶ್ರೀ. ಧ.ಮಂ. ವಸತಿ ಪ.ಪೂ. ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಯಾತ್ರಿ ನಿವಾಸ: ನ. 23 ರಂದು ಯಾತ್ರಿ ನಿವಾಸದ ಶಿಲಾನ್ಯಾಸ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!