28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸ್ಥಗಿತಗೊಂಡ ಬಸ್ ನಿಲ್ದಾಣದ ಕಾಮಗಾರಿ; ಶಾಸಕ ಹರೀಶ್ ಪೂಂಜರಿಂದ‌ ಅಧಿಕಾರಿಗಳೊಂದಿಗೆ ಸಭೆ

ಬೆಳ್ತಂಗಡಿ: ತಾಲೂಕು ಕೇಂದ್ರದಲ್ಲಿ ನಿರ್ಮಾಣವಾಗುತ್ತಿರುವ ಬಸ್ ನಿಲ್ದಾಣದ ಕಾಮಗಾರಿ ಸ್ಥಗಿತಗೊಂಡಿರುವ ಹಿನ್ನಲೆಯಲ್ಲಿ ಶಾಸಕ ಹರೀಶ್ ಪೂಂಜ‌ ಅವರು ಅಧಿಕಾರಿಗಳ‌ ಸಭೆ ನಡೆಸಿ ಕಾಮಗಾರಿ ಆರಂಭಿಸುವಂತೆ ಸೂಚನೆ ನೀಡಿದ್ದಾರೆ.

ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು , ಅರಣ್ಯ ಇಲಾಖೆ ಸೇರಿದಂತೆ‌ ಇತರ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ
ಕಾಮಗಾರಿಯನ್ನು ಮುಕ್ತಾಯಗೊಳಿಸುವ ಸಂಬಂಧ ಇರುವ ಅಡಚಣೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿಗಳನ್ನು ಪಡೆದುಕೊಂಡರು. ಸಮಸ್ಯೆಗಳನ್ನು ಪರಿಹರಿಸಿ ಕೂಡಲೇ ಕಾಮಗಾರಿ ಆರಂಭಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿರುತ್ತಾರೆ. ಕಳೆದ ಆರು ತಿಂಗಳಿನಿಂದ ಸ್ಥಗಿತಗೊಂಡಿರುವ ಬಸ್ ನಿಲ್ದಾಣದ ಕಾ‌ಮಗಾರಿ ಇನ್ನಾದರೂ ಆರಂಭವಾಗುವುದೇ ಎಂದು ಕಾದು ನೋಡಬೇಕಾಗಿದೆ‌.

Related posts

ಕೊಕ್ಕಡ : ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಕಲ್ಲೇರಿ: ಪಂಜಿಕುಡೇಲು ನಿವಾಸಿ ಸುಂದರ ಕೋಟ್ಯಾನ್ ನಿಧನ

Suddi Udaya

ಅಳದಂಗಡಿ: ಕೆದ್ದುವಿನಲ್ಲಿ ಪೆಟ್ರೋಲ್ ಪಂಪ್ ಶುಭಾರಂಭ, ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಮರೋಡಿ : 22 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ

Suddi Udaya

ಕಳೆಂಜ ರಾಜು ಜೋಸೆಫ್ ಅವರ ಸಾವು ಪ್ರಕರಣ ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರುವುದಾಗಿ ಮಗನಿಂದ ಠಾಣೆಗೆ ದೂರು

Suddi Udaya
error: Content is protected !!