37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆ

ಉಜಿರೆ: ಕೈಯ ಸುರಕ್ಷತೆ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು. ವಿಶ್ವದಾದ್ಯಂತ ಅನೇಕ ಮಕ್ಕಳು ಕೈಯ ಅಸುರಕ್ಷತೆಯಿಂದಾಗಿ ನ್ಯೂಮೇನಿಯಾ ಡಯೇರಿಯಾದಿಂದ ಸಾವನ್ನಪ್ಪುತ್ತಿದ್ದಾರೆ. ಕೊರೋನ ಇತ್ಯಾದಿಗಳು ಕಾಯಿಲೆಗಳು ಕೆಲವು ವೈರಸ್ ಹಾಗೂ ಬ್ಯಾಕ್ಟೀರಿಯಗಳಿಂದ ಬರುವುದರಿಂದ ಕೈಯ ಸುರಕ್ಷತೆ ಅತಿ ಮುಖ್ಯವಾಗಿದೆ. ಇದಕ್ಕೆ ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದ ವೈಜ್ಞಾನಿಕ ಕ್ರಮದಿಂದ ಕೈಯನ್ನು ತೊಳೆದುಕೊಳ್ಳಬೇಕು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಹೇಳಿದರು .

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಸಂಘ , ಮಾನವ ಸಂಪನ್ಮೂಲ ಅಭಿವೃದ್ಧಿ ಕೋಶ , ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸಾಂಸ್ಕೃತಿಕ ಸಮಿತಿಯ ವತಿಯಿಂದ ನಡೆದ ವಿಶ್ವ ಕೈ ತೊಳೆಯುವ ದಿನಾಚರಣೆ ಅಂಗವಾಗಿ ವೈಜ್ಞಾನಿಕವಾಗಿ ಕೈ ತೊಳೆಯುವ ಪ್ರಾತ್ಯಕ್ಷಿಕೆ ನಡೆಸಿ ಮಾತನಾಡಿದರು

ಆಹಾರ ತಿನ್ನುವ ಮೊದಲು ಹಾಗೂ ಆನಂತರ , ಪ್ರಾಣಿಗಳನ್ನು ಮುಟ್ಟಿದಾಗ , ಶೌಚ ಹಾಗೂ ಮೂತ್ರಾದಿಗಳ ವಿಸರ್ಜನೆಯ ಬಳಿಕ ಅಗತ್ಯವಾಗಿ ಸೋಪು ಉಪಯೋಗಿಸಿ ಕೈ ತೊಳೆದುಕೊಳ್ಳಬೇಕೆಂದು ಈ ಸಂದರ್ಭದಲ್ಲಿ ನುಡಿದರು.

ಅಭ್ಯಾಗತರಾಗಿ ಆಗಮಿಸಿದ ಸಾಂಸ್ಕೃತಿಕ ಸಮಿತಿಯ ಸಂಯೋಜಕ ಹಾಗೂ ಹಿಂದಿ ಭಾಷಾ ವಿಭಾಗದ ಮುಖ್ಯಸ್ಥ ನಾಗರಾಜ್ ಭಂಡಾರಿ ಅವರು ಮಾತನಾಡಿ ಕೊರೋನದ ಅನಂತರ ಎಲ್ಲರಿಗೂ ಕೈ ಸುರಕ್ಷತೆ ಬಗ್ಗೆ ಹೆಚ್ಚು ಅರಿವಿಗೆ ಬಂದಿತು. ಅನೇಕ ವರ್ಷಗಳಿಂದ ಇಂತಹ ಅರಿವಿನ ಕಾರ್ಯಕ್ರಮ ನಮ್ಮ ಕಾಲೇಜಿನಲ್ಲಿ ನಡೆಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.
ರಾಷ್ಟ್ರೀಯ ಸೇವಾ ಯೋಜನೆಯ ಸಹ ಯೋಜನಾಧಿಕಾರಿ ಶೋಭಾ ಉಪಸ್ಥಿತರಿದ್ದರು.

ಸಂಸ್ಕೃತ ಸಂಘದ ಅಧ್ಯಕ್ಷೆ ಹಂಸಿನೀ ಭಿಡೆ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಪ್ರಸನ್ನಾ ಸ್ವಾಗತಿಸಿ , ಎಸ್ ಎಸ್ ಎಸ್ ಸ್ವಯಂ ಸೇವಕಿ ಪ್ರಣಮ್ಯಾ ಜಿ.ಕೆ ವಂದಿಸಿದರು.

Related posts

ಕಳೆಂಜ: ಸ.ನಂ 309 ರಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರನೀಡುವ ಸಲುವಾಗಿ ಜಮೀನಿನ ಜಂಟಿ ಸರ್ವೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ.ಎ ನೇತೃತ್ವದಲ್ಲಿ ವಿ.ಪ. ಸದಸ್ಯ ಐವನ್ ಡಿಸೋಜ ರವರಿಗೆ ಮನವಿ

Suddi Udaya

ಬಂಗಾಡಿ-ಕೊಲ್ಲಿ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಕೃಷಿಕರಿಗೆ ಸಂಕಷ್ಟ: ಕೂಡಲೇ ಕ್ರಮ ಕೈಗೊಳ್ಳುವಂತೆ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ಆಗ್ರಹ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘ ಅರಸಿನಮಕ್ಕಿಗೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ನಾವೂರು: ಗೋಳಿದಡಿ ನಿವಾಸಿ ಲೀಲಾವತಿ ನಿಧನ

Suddi Udaya

ಲಾಯಿಲ: ಗಾಂಧಿನಗರದಲ್ಲಿ ರಸ್ತೆಕಾಮಗಾರಿ ಲೋಕಾರ್ಪಣೆ

Suddi Udaya

ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,

Suddi Udaya
error: Content is protected !!