23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ. ಸೆಕೆಂಡರಿ ಶಾಲೆಯಲ್ಲಿ ಜಿಲ್ಲಾಮಟ್ಟದ ನೆಟ್‌ಬಾಲ್ ಟೂರ್ನಿ

ಉಜಿರೆ: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಯಲ್ಲಿಯೂ ನಿರಂತರ ಅಭ್ಯಾಸ ಮತ್ತು ಕಠಿಣ ಪರಿಶ್ರಮದಿಂದ ಪ್ರಯತ್ನಿಸಿದಲ್ಲಿ  ಉನ್ನತ ಸಾಧನೆ ಸಾಧ್ಯವಾಗುತ್ತದೆ ಎಂದು ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಹೇಳಿದರು.


ಅವರು ಗುರುವಾರ ಉಜಿರೆಯಲ್ಲಿ ಎಸ್.ಡಿ.ಎಂ. ಸೆಕೆಂಡರಿ ಶಾಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕರು ಹಾಗೂ ಬಾಲಕಿಯರ ನೆಟ್‌ಬಾಲ್ ಟೂರ್ನಿ ಉದ್ಘಾಟಿಸಿ ಮಾತನಾಡಿದರು.
ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹೊಂದುವುದಲ್ಲದೆ ಕ್ರೀಡಾಪಟುಗಳಿಗೆ ಮುಂದೆ ಉತ್ತಮ ಉದ್ಯೋಗವೂ ದೊರಕುತ್ತದೆ ಎಂದು ಹೇಳಿ ಶುಭ ಹಾರೈಸಿದರು.


ಅಧ್ಯಕ್ಷತೆ ವಹಿಸಿದ ಉಜಿರೆ ಗ್ರಾಮ ಪಂಚಾಯಿತಿ  ಅಧ್ಯಕ್ಷರಾದ ಉಷಾ ಕಾರಂತ ಉನ್ನತ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಗ್ರಾಮ ಪಂಚಾಯಿತಿ ವತಿಯಿಂದ ಗೌರವಿಸಿ ಪ್ರೋತ್ಸಾಹಿಸಲಾಗುತ್ತದೆ ಎಂದರು.
ದ.ಕ. ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಭುವನೇಶ್, ತಾಲ್ಲೂಕು ದೈಹಿಕ ಶಿಕ್ಷಣ ಅಧಿಕಾರಿ ಸುಜಯ,  ರಾಷ್ಟçಮಟ್ಟದ ಕ್ರೀಡಾಪಟು ಪ್ರೇಮನಾಥ ಶೆಟ್ಟಿ, ಎಡಪದವು, ಮಿಜಾರು ಶುಭಾಶಂಸನೆ ಮಾಡಿದರು.
ಎಸ್.ಡಿ.ಎಂ. ಸೆಕೆಂಡರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕೆ. ಸುರೇಶ, ಎಸ್.ಡಿ.ಎಂ. ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ, ಅಖಿಲ್‌ಕುಮಾರ್, ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಕೆ. ಕೃಷ್ಣಾನಂದ ಉಪಸ್ಥಿತರಿದ್ದರು.
ಎಸ್.ಡಿ.ಎಂ. ಸೆಕೆಂಡರಿ ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಕಿರಣ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಪರಮೇಶ್ವರ ಧನ್ಯವಾದವಿತ್ತರು.
ಗೇರುಕಟ್ಟೆ ಸರ್ಕಾರಿ ಪ್ರೌಢಶಾಲಾ ಶಿಕ್ಷಕ ಅಜಿತ್ ಕೊಕ್ರಾಡಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಮಿತ್ತಬಾಗಿಲು: ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಹಿಳೆಯ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ

Suddi Udaya

ಅಂಡಿಂಜೆಯಲ್ಲಿ ಬೈಕ್ ಅಪಘಾತ: ಅಂಡಿಂಜೆ ನಿವಾಸಿ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಮೃತ್ಯು

Suddi Udaya

ನಾಲ್ಕೂರು: ಅನಾರೋಗ್ಯದಿಂದ ಸುಶೀಲ ಜೈಮಾತಾ ನಿಧನ

Suddi Udaya

ಶ್ರೀಮತಿ ಮಾಲಿನಿ ಮತ್ತು ರಮಾನಂದ ಗುಡ್ಡಾಜೆ ಇವರ 25ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿಂಶತಿ ಸಂಭ್ರಮ ಹಾಗೂ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಉಜಿರೆ:ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃತಿಕ ಸಂಘದ ವತಿಯಿಂದ ‘ವೃಕ್ಷಾಬಂಧನ’ ಕಾರ್ಯಕ್ರಮ

Suddi Udaya
error: Content is protected !!