22.9 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಅನುಗ್ರಹ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ರೂ.4.75 ಲಕ್ಷ ಸಾಲ ಪಡೆದು ವಂಚನೆ

ಬೆಳ್ತಂಗಡಿ: ಬೆಳ್ತಂಗಡಿ ಸಂತೆಕಟ್ಟೆ ಸಮೀಪ ಕಾರ್ಯಾಚರಿಸುತ್ತಿರುವ ಅನುಗ್ರಹ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ತಂಗಡಿ ಶಾಖೆಯಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ವ್ಯಕ್ತಿಯೋರ್ವ ರೂ. 4,75,750 ಸಾಲವನ್ನು ಪಡೆದು ವಂಚಿಸಿರುವ ಬಗ್ಗೆ ಸಂಘದ ವ್ಯವಸ್ಥಾಪಕರಾದ ಪ್ರವೀಣ್ ಕ್ಲಿಪರ್ಡ್ ಪಾಯಸ್ ಅವರು ಅ.14ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಉಜಿರೆ ಅನುಗ್ರಹ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ತಂಗಡಿ ಸಂತೆಕಟ್ಟೆಯಲ್ಲಿರುವ ಶಾಖೆಯಲ್ಲಿ ಈ ಸಾಲ ಪಡೆದು ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಸಂಘದ ವ್ಯವಸ್ಥಾಪಕರಾದ ಪ್ರವೀಣ್ ಕ್ಲಿಪರ್ಡ್ ಪಾಯಸ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ, ಅಬ್ದುಲ್ ರಮೀಜ್ ಎಂಬಾತ 2025 ಸೆಪ್ಟೆಂಬರ್ ತಿಂಗಳ 9 ರಂದು ಮತ್ತು ಅಕ್ಟೋಬರ್ ತಿಂಗಳ 8 ರಂದು ಸಹಕಾರ ಸಂಘಕ್ಕೆ ಬಂದು ಕ್ರಮವಾಗಿ 22.900 ಗ್ರಾಂ ಮತ್ತು 33.910 ಗ್ರಾಂ ತೂಕದ ಚಿನ್ನಾಭರಣವೆಂದು ನಂಬಿಸಿ ಚಿನ್ನಾಭರಣವನ್ನು ಅಡಮಾನ ಇಟ್ಟು, ಕ್ರಮವಾಗಿ ರೂ. 1,91,000 ರೂ ಮತ್ತು ರೂ. 2,84,750 ರೂ ಸಾಲ ಪಡೆದುಕೊಂಡಿದ್ದಾನೆ. ಅ.14 ರಂದು ಸಾಮಾಜಿಕ ಜಾಲತಾಣದಲ್ಲಿ ಆರೋಪಿತನು ಇತರೇ ಹಣಕಾಸು ಸಂಸ್ಥೆಗಳಲ್ಲಿ ನಕಲಿ ಚಿನ್ನಾಭರಣ ಅಡವಿರಿಸಿ ಸಾಲ ಪಡೆದು ಮೋಸ ಮಾಡಿರುವ ವಿಚಾರ ತಿಳಿದು ಬಂದಿದ್ದು, ಸಂಶಯಗೊಂಡು ಬೆಳ್ತಂಗಡಿ ಅನುಗ್ರಹ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಆರೋಪಿತನು ಅಡಮಾನ ಇಟ್ಟ ಚಿನ್ನಾಭರಣವನ್ನು ಮರು ಪರಿಶೀಲಿಸಿದಾಗ ಆರೋಪಿತನು ಶಾಖೆಯಲ್ಲಿ ಅಡಮಾನ ಇಟ್ಟಿರುವ ಚಿನ್ನಾಭರಣ ನಕಲಿ ಎಂಬುವುದಾಗಿ ತಿಳಿದು ಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.


ಒಟ್ಟು 56.810 ಗ್ರಾಂ ತೂಕದ ನಕಲಿ ಚಿನ್ನಾಭರ ಇಟ್ಟು ಒಟ್ಟು ರೂ.4,75,750 ಸಾಲ ಪಡೆದಿರುವುದು ಬೆಳಕಿಗೆ ಬಂದಿದೆ. ವ್ಯವಸ್ಥಾಪಕ ಪ್ರವೀಣ್ ಕ್ಲಿಪರ್ಡ್ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ: ೧೧೭/೨೦೨೫ ಕಲಂ: ೩೧೮(೪), ೩೧೬(೨) ಬಿಎನ್‌ಎಸ್‌ಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದೇರೀತಿ ಮಂಗಳೂರು ಕಾವೂರಿನ ಸಹಕಾರಿ ಸಂಸ್ಥೆಯೊಂದರಲ್ಲಿ ಅಸಲಿ ಎಂದು ನಂಬಿಸಿ ನಕಲಿ ಚಿನ್ನಾಭರಣ ಇಟ್ಟು ರೂ.6.24 ಲಕ್ಷ ಸಾಲ ಪಡೆದು ವಂಚನೆ ಮಾಡಿದ ಪ್ರಕರಣ ನಡೆದಿದೆ.

Related posts

ಕೊಕ್ಕಡದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಅರಸಿನಮಕ್ಕಿ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವರದ ಶಂಕರ ದಾಮ್ಲೆ, ಉಪಾಧ್ಯಕ್ಷರಾಗಿ ಸೀತಾ ಎ ಆಯ್ಕೆ

Suddi Udaya

ಮಾಜಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ರವರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

Suddi Udaya

ಮಡಂತ್ಯಾರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!