32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ಮಕ್ಕಳ ಆಟದ ಮನೆ ಉದ್ಘಾಟನೆ

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆ, ಹಳೆಕೋಟೆಯಲ್ಲಿ ವಾಣಿ ಮಕ್ಕಳ ಆಟದ ಮನೆ ಉದ್ಘಾಟನಾ ಕಾರ್ಯಕ್ರಮವು ಅ. 16ರಂದು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ವಹಿಸಿದರು. ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷ ಹೆಚ್ ಪದ್ಮಗೌಡ, ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಕಳಿಯ ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ಬಾಲಕೃಷ್ಣಗೌಡ ಬಿರ್ಮೊಟ್ಟು , ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ, ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಕೋಶಾಧಿಕಾರಿ ಯುವರಾಜ್ ಅನಾರ್, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆಎಂ, ಮಾಜಿ ಅಧ್ಯಕ್ಷ ಸೋಮೇಗೌಡ , ಆಡಳಿತಾಧಿಕಾರಿ ಪ್ರಸಾದ್, ಪದವಿಪೂರ್ವ ಕಾಲೇಜಿನ ಪ್ರಿನ್ಸಿಪಾಲ ವಿಷ್ಣು ಪ್ರಕಾಶ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಶೇಖರ್ ಶೆಟ್ಟಿ, ಉಪಾಧ್ಯಕ್ಷರಾದ ಚಿತ್ರಲೇಖ, ನಿರ್ದೇಶಕರಾದ ವಿಜಯ ಗೌಡ ನ್ಯಾಯತರ್ಪು, ದಿನೇಶ್ ಗೌಡ ಕೊಯ್ಯರು, ಮಾಧವ ಗೌಡ, ವಸಂತ ಗೌಡ, , ಡಿ.ಎಂ ಗೌಡ, ಉಷಾದೇವಿ ವೆಂಕಟ್ರಮಣ ಗೌಡ, ಭವಾನಿ ಕಾಂತಪ್ಪಗೌಡ ಉಪಸ್ಥಿತರಿದ್ದರು.

ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಸ್ವಾಗತಿಸಿ, ಶಿಕ್ಷಕಿ ಮೋಹನಂಗಿ ಕಾರ್ಯಕ್ರಮ ನಿರೂಪಿಸಿ, ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಸುಹಾಸಿನಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾಂಗ್ರೇಸ್ ಪಕ್ಷದ ಚುನಾವಣಾ ಕಛೇರಿಯ ಉದ್ಘಾಟನೆ

Suddi Udaya

ಧರ್ಮಸ್ಥಳದಲ್ಲಿ25ನೇ ವರ್ಷದ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಸಿದ್ಧಾಂತಕೀರ್ತಿ ಸ್ವಾಮೀಜಿಯವರಿಂದ ಉದ್ಘಾಟನೆ: ಧಮ೯ಸ್ಥಳದ ಧಮಾ೯ಧಿಕಾರಿ ಡಾ.ಹೆಗ್ಗಡೆ, ಮಣಿಲಶ್ರೀ ಉಪಸ್ಥಿತಿ: 115 ಭಜನಾ ಮಂಡಳಿಗಳ 202 ಮಂದಿ ಶಿಬಿರಾಥಿ೯ಗಳು ಭಾಗಿ

Suddi Udaya

ಮಚ್ಚಿನ: ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರ

Suddi Udaya

ಶಾಸಕರು ತಮ್ಮ ಅಪ್ತರ ಮೂಲಕ ಅಕ್ರಮ ಮರ ಸಾಗಾಟ, ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿ ಚುಣಾವಣೆಗೆ ಹಣ ಖರ್ಚು ಮಾಡಿದ್ದಾರೆ: ಮನೋಹರ ಕುಮಾರ್ ಆರೋಪ ; ಬ್ಲಾಕ್ ಕಾಂಗ್ರೆಸ್ ನಿಂದ ಪತ್ರಿಕಾಗೋಷ್ಠಿ

Suddi Udaya

ಜಿಲ್ಲಾ ವಕ್ಫ್‌ ಅಧಿಕಾರಿ ಹಾಜಿ ಅಬೂಬಕ್ಕರ್ ಸೇವೆಯಿಂದ ನಿವೃತ್ತಿ: ಕಾಜೂರು- ಕಿಲ್ಲೂರು ವತಿಯಿಂದ ಗೌರವಾರ್ಪಣೆ

Suddi Udaya

ಸುಲ್ಕೇರಿ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ ನಾವರ, ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ

Suddi Udaya
error: Content is protected !!