September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ನಡೆಯಿತು.

ಮುಖ್ಯ ಅತಿಥಿಯಾಗಿ ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದ (ಬಿ.ಎಡ್.) ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ವಿದ್ಯಾಶ್ರೀ ಅವರು ಮಾತನಾಡಿ, ಶ್ರಮ, ನಿಷ್ಠೆ, ಶಿಸ್ತು ಜೀವನದ ಯಶಸ್ಸಿಗೆ ಕಾರಣವಾಗುತ್ತದೆ. ಆತ್ಮವಿಶ್ವಾಸ, ಛಲ ಇದ್ದಾಗ ಯಾವುದೇ ಸಾಧನೆ ಮಾಡಬಹುದು ಎಂದರು.

ವಿದ್ಯಾರ್ಥಿ ಸಂಘಟನೆಗಳಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಉನ್ನತ ಹುದ್ದೆಯನ್ನು ಹಾಗೂ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಆತ್ಮಸ್ಥೈರ್ಯ ಬರುತ್ತದೆ ಎಂದು ಅವರು ಹೇಳಿದರು.
ಐ.ಟಿ.ಐ. ಕಾಲೇಜಿನ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿ, ಶುಭಕೋರಿದರು.

ಇದೇ ಸಂದರ್ಭದಲ್ಲಿ, ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ 58ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಪ್ರಯುಕ್ತ ಆಯೋಜಿಸಿದ್ದ ಕ್ವಿಜ್, ಭಾಷಣ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನ ನೀಡಲಾಯಿತು.

ದೀಪಾವಳಿ ಹಬ್ಬದ ಪ್ರಯುಕ್ತ ನಡೆದ ಗೂಡುದೀಪ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನ ನೀಡಲಾಯಿತು.

ವಿದ್ಯಾರ್ಥಿ ಸಂಘದ ನಾಯಕಿ ಅಪೇಕ್ಷಾ ಹಾಗೂ ಇತರ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.

Related posts

ಯುವವಾಹಿನಿ ಗ್ರಾಮ ಚಾವಡಿ-ಕೊಣಾಜೆ ಘಟಕದ ಸ್ಥಾಪಕ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಇಲಂತಿಲ ಆಯ್ಕೆ

Suddi Udaya

ಉಜಿರೆ ಎಸ್. ಡಿ.ಎಂ ಕಾಲೇಜು : ಎನ್ ಎಸ್ ಎಸ್ ಘಟಕಕ್ಕೆ ಸುವರ್ಣ ಸಂಭ್ರಮ: ಅ.5:ಹಿರಿಯ ಸ್ವಯಂಸೇವಕರ ಒಗ್ಗೂಡುವಿಕೆಯಲ್ಲಿ ‘ ಸುವರ್ಣ ಸಮ್ಮಿಲನ ‘ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವರ್ಷವೊಂದರಲ್ಲೇ 193 ಕೆರೆಗಳ ಪುನಶ್ಚೇತನ : ಬರಗೆಲ್ಲುವುದಕ್ಕೆ ಕೆರೆ ಮಾದರಿ

Suddi Udaya

ಇಂದಬೆಟ್ಟು: ಗೋಮಾಂಸ ಮಾಡುತ್ತಿದ್ದ ಶೆಡ್ ಮೇಲೆ ಪೊಲೀಸ್ ದಾಳಿ: ಇಬ್ಬರು ಆರೋಪಿಗಳ ಬಂಧನ

Suddi Udaya

ಮುಂಡಾಜೆ ಕಾಡಾನೆ ಹಾವಳಿ ಕೃಷಿ ನಾಶ

Suddi Udaya

ಪಟ್ರಮೆಯ ಹಿಂದೂ ಯುವಕನ ಜೊತೆ ನೆಲ್ಲಿಕಾರಿನ ಮುಸ್ಲಿಂ ಯುವತಿ ವಿವಾಹ

Suddi Udaya
error: Content is protected !!