ಬೆಳ್ತಂಗಡಿ : ಬೆಂಗಳೂರಿನ ಸೈಂಟ್ ಜೋಸೆಫ್ ವಿಶ್ವ ವಿದ್ಯಾಲಯದಲ್ಲಿ ಆರ್ಕಿಡ್ ಸೊಸೈಟಿ ಆಫ್ ಕರ್ನಾಟಕ ಹಾಗೂ ಇಂಡೋ ಅಮೆರಿಕನ್ ಹೈಬ್ರಿಡ್ ಸೀಡ್ಸ್ ಆಯೋಜಿಸಿದ್ದ ಆರ್ಕಿಡ್ ಪ್ರದರ್ಶನದ ಪ್ಯಾಫಿಯೋಪೆಡಿಲಮ್ ಆರ್ಕಿಡ್ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳನ್ನು ಪಡೆದ ಶ್ರೀಕ್ಷೇತ್ರ ಧರ್ಮಸ್ಥಳದ ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರನ್ನು ಧರ್ಮಸ್ಥಳ ಶಾಂತಿವನ ಟ್ರಸ್ಟ್‌ನ ವತಿಯಿಂದ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಾಡಿತ್ತಾಯ ಅವರು ಗೌರವಿಸಿದರು.
ಈ ಸಂದರ್ಭದಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ। ಐ. ಶಶಿಕಾಂತ್ ಜೈನ್, ಧರ್ಮಸ್ಥಳದ ಶಾಂತಿವನ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ। ಶಿವಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.











