September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆಯಲ್ಲಿ ಸಾಕು ನಾಯಿ, ಬೆಕ್ಕುಗಳಿಗೆ ರೇಬಿಸ್ ಲಸಿಕೆ ಶಿಬಿರ

ಉಜಿರೆ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೆಳ್ತಂಗಡಿ ಪಶು ಸಂಗೋಪನೆ ಮತ್ತು ಪಶು ವೈದ್ಯ ಸೇವಾ ಇಲಾಖೆ ವತಿಯಿಂದ ಉಜಿರೆ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಉಜಿರೆ ಪಂಚಾಯತ್ ವ್ಯಾಪ್ತಿಯಲ್ಲಿ ಸಾಕು ನಾಯಿ ಗಳಿಗೆ ಮತ್ತು ಬೆಕ್ಕುಗಳಿಗೆ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ಶಿಬಿರ ಅ.17ರಂದು ಜರಗಿತು.

ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್‌ ಶಿಬಿರಕ್ಕೆ ಚಾಲನೆ ನೀಡಿದರು. ತಾಲೂಕು ಪಶು ವೈದ್ಯಾಧಿಕಾರಿ ರವಿ ಕುಮಾರ್, ಉಜಿರೆ ಪಶು ವೈದ್ಯ ಸಚಿನ್‌, ಗ್ರಾಮ ಪಂಚಾಯತ್‌ ಸದಸ್ಯೆ ಶಶಿಕಲಾ, ಪಂಚಾಯತ್ ಸಿಬ್ಬಂದಿ, ಪಶು ಸಖಿ ಉಪಸ್ಥಿತರಿದ್ದರು. ಬಳಿಕ ಪಂಚಾಯತ್ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಸಾಕುನಾಯಿ ಹಾಗೂ ಬೆಕ್ಕುಗಳಿಗೆ ಉಚಿತವಾಗಿ ರೇಬಿಸ್ ಲಸಿಕೆ ನೀಡಲಾಯಿತು.

Related posts

ಶ್ರೀ ಕ್ಷೇತ್ರ ಧ.ಗ್ರಾ.ಯೋ. ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ ಎಂ ಮಹಿಳಾ ಐ.ಟಿ.ಐ ಕಾಲೇಜಿನ ಓರಿಯಂಟೇಷನ್ ಹಾಗೂ ಕಾನ್ವಕೇಷನ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಮೂಡುಬಿದಿರೆ ಎಕ್ಸಲೆಂಟ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಡಿರುದ್ಯಾವರ : ಕುಕ್ಕಾವು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಬಟ್ಟಲು ವಿತರಣೆ

Suddi Udaya
error: Content is protected !!