ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಂಭಶ್ರೀ ಆಂ.ಮಾ. ಶಾಲೆಯ ಒಂದನೇ ತರಗತಿ ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ವೇಣೂರಿನ ಅಂಚೆಕಛೇರಿ, ಪೊಲೀಸ್ ಠಾಣೆ ಮತ್ತು ಮಾರ್ಕೆಟ್ ಗೆ ಭೇಟಿ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ ಮತ್ತು ಕಾಲೇಜು ನಿಟ್ಟಡೆ ಇಲ್ಲಿನ ಶಾಲಾ ಸಂಸ್ಥಾಪಕ ಗಿರೀಶ್ ಕೆ ಹೆಚ್ ಮತ್ತು ಶಾಲಾ ಸಂಚಾಲಕ ಅಶ್ವಿತ್ ಕುಲಾಲ್ ರವರ ಮಾರ್ಗದರ್ಶನದಲ್ಲಿ, ಒಂದನೇ ತರಗತಿ ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳನ್ನು ವೇಣೂರಿನ ಅಂಚೆಕಛೇರಿ, ಪೊಲೀಸ್ ಠಾಣೆ ಮತ್ತು ಮಾರ್ಕೆಟ್ ಗೆ ಭೇಟಿ ನೀಡಲಾಯಿತು.

ಅಂಚೆ ಕಚೇರಿಯಲ್ಲಿ ಪೋಸ್ಟ್ ಮಾಸ್ಟರ್ ಮತ್ತು ಅಲ್ಲಿನ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಲೆಟರ್, ಸ್ಟ್ಯಾಂಪ್ ಗಳ ಬಗ್ಗೆ ಉತ್ತಮ ಮಾಹಿತಿ ನೀಡಿ, ವಿದ್ಯಾರ್ಥಿಗಳಿಗೆ ಲೆಟರ್ ವಿತರಿಸಿದರು. ಹಾಗೆಯೇ ಪೋಲಿಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ಗಳು ಪೊಲೀಸ್ ಟೋಪಿ, ಆಯುಧಗಳ, ಸಹಾಯವಾಣಿ ನಂಬರ್ ಗಳ ಬಗ್ಗೆ ವಿವರವಾದ ಮಾಹಿತಿ ನೀಡಿ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿಯನ್ನು ನೀಡಿರುತ್ತಾರೆ. ಅದೇ ರೀತಿ ವೇಣೂರಿನ ಮಾರ್ಕೆಟಿನಲ್ಲಿ ವಿವಿಧ ರೀತಿಯ ತರಕಾರಿ, ಫಲವಸ್ತು, ತಿಂಡಿಗಳು , ಹೂವಿನ ಗಿಡಗಳನ್ನು ನೋಡಿ ಸಂತೋಷ ಪಟ್ಟರು.ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶುಭ, ಶಿಕ್ಷಕಿ ಶ್ರೀಮತಿ ಭವಾನಿ ದಿವ್ಯ,ಶಿಕ್ಷಕಿ ಶ್ರೀಮತಿ ಸುಪ್ರೀತಾ, ದೈಹಿಕ ಶಿಕ್ಷಕ ಶ್ರಿ ಶೈಲೇಶ್, ಶಾಲಾ ವಾಹನದ ಚಾಲಕ ದಯಾನಂದ್ ವಿದ್ಯಾರ್ಥಿಗಳಿಗೆ ಸಹಕರಿಸಿದರು.

Related posts

ಗುಡ್ ಫ್ಯೂಚರ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ, ವಾರ್ಷಿಕ ಕ್ರೀಡಾಕೂಟ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಶವ ಪತ್ತೆ

Suddi Udaya

ಆಟೋ ರಿಕ್ಷಾ ಮಗುಚಿಬಿದ್ದು ಮೃತಪಟ್ಟ ಬಾಲಕನ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಭೇಟಿ

Suddi Udaya

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ಈ ಭಾರಿ ಹೆಚ್ಚು ಕ್ರೀಡಾಭಿಮಾನಿಗಳು ಸೇರುವ ನಿರೀಕ್ಷೆ, ವಿಜೇತ ತಂಡಗಳಿಗೆ ನಗದು ಹಾಗೂ ಟ್ರೋಪಿ,

Suddi Udaya

ಚಾರ್ಮಾಡಿ ಸಾರ್ವಜನಿಕ ಹಿಂದೂ ರುದ್ರ ಭೂಮಿಯ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಶಾಸಕ ಹರೀಶ್ ಪೂಂಜರಿಂದ ಭರವಸೆ

Suddi Udaya

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

Suddi Udaya
error: Content is protected !!