March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಸಂಗಮ ಕ್ಷೇತ್ರ ಶ್ರೀ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದ ಮುಂಭಾಗ ಹರಿಯುವ ನೇತ್ರಾವತಿ ನದಿಯ ಪರಿಸರದಲ್ಲಿ ಭಾನುವಾರ ಮೊಸಳೆ ಕಂಡು ಬಂದಿದೆ.

ದೇವಸ್ಥಾನದ ಸಮೀಪ ಮೃತ್ಯುಂಜಯ ಹಾಗೂ ನೇತ್ರಾವತಿ ನದಿ ಸಂಗಮಗೊಳ್ಳುತ್ತದೆ. ನದಿಯಲ್ಲಿ ಬೆಳಗಿನ 10ಗಂಟೆ ಸಮಯ ಮೊಸಳೆ ಈಜಾಡುತ್ತಿರುವುದು ದೇವಸ್ಥಾನದಲ್ಲಿ ಇದ್ದವರಿಗೆ ಕಂಡು ಬಂದಿದೆ. ಬಳಿಕ ಮೊಸಳೆ ನದಿಯ ಇನ್ನೊಂದು ಭಾಗದಲ್ಲಿ ಮರಳಿನ ಮೇಲೆ ವಿಶ್ರಮಿಸುತ್ತಿತ್ತು. ಬಳಿಕ ಮತ್ತೆ ನದಿಗೆ ಇಳಿದ ಮೊಸಳೆ ಸ್ವಲ್ಪ ಸಮಯದ ನಂತರ ಅದೇ ಸ್ಥಳದಲ್ಲಿ ಕಂಡುಬಂತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.ಸುಮಾರು ಒಂದು ತಾಸಿನಷ್ಟು ಸಮಯ ಅಲ್ಲೇ ಇದ್ದ ಮೊಸಳೆ ಮತ್ತೆ ನದಿಗೆ ಇಳಿದಿದೆ.ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೊಸಳೆ ಕಂಡುಬಂದ ಸ್ಥಳಕ್ಕೆ ಹೋಗಲು ಹೆಚ್ಚಿನ ನೀರ ಹರಿವು ಹಾಗೂ ಸ್ಥಳದಲ್ಲಿ ಹೂಳು ತುಂಬಿರುವುದು ಅಡ್ಡಿಯಾಗಿದ್ದು ಮೊಸಳೆ ಇಲ್ಲಿಂದ ಯಾವ ಪ್ರದೇಶಕ್ಕೆ ಹೋಗಿದೆ ಎಂಬುದು ತಿಳಿದು ಬಂದಿಲ್ಲ.ಕಳೆದ ಮೂರು-ನಾಲ್ಕು ದಿನಗಳಿಂದ ನೇತ್ರಾವತಿ, ಮೃತ್ಯುಂಜಯ ನದಿ ಪ್ರದೇಶದ ಅಲ್ಲಲ್ಲಿ ಮೊಸಳೆ ಕಂಡು ಬಂದಿರುವ ಕುರಿತು ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ.ಮುಂಡಾಜೆ ಕಲ್ಮಂಜ ಪರಿಸರದಲ್ಲಿ ನದಿಗಿಳಿಯುವವರು ಎಚ್ಚರಿಕೆ ವಹಿಸಬೇಕಾಗಿದೆ.

Related posts

ಸೌಜನ್ಯ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮುಖಾಂತರ ನ್ಯಾಯಾಂಗ ತನಿಖೆಗೆ ವಹಿಸಲು ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ವಿ.ಹಿಂ.ಪಂ ಆಗ್ರಹ

Suddi Udaya

ಧರ್ಮಸ್ಥಳದಲ್ಲಿ ವಿಜಯದಶಮಿ ಪ್ರಯುಕ್ತ ತೆನೆಹಬ್ಬ ಆಚರಣೆ

Suddi Udaya

ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ಮುಂಬಯಿ ಉದ್ಯಮಿ ನಾರಾಯಣ ಸುವರ್ಣ ಮರೋಡಿ ಆಯ್ಕೆ

Suddi Udaya

ಗುರುವಾಯನಕೆರೆ ವ್ಯಾಪ್ತಿಯಲ್ಲಿ ದಾಖಲೆಗಳಿದ್ದ ಪರ್ಸ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂದಿರುಗಿಸುವಂತೆ ಮನವಿ

Suddi Udaya

ಪಡಂಗಡಿ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜೀನಾಮೆ ಒತ್ತಾಯಿಸಿ ಬೆಳ್ತಂಗಡಿ ಬಿಜೆಪಿ ವತಿಯಿಂದ ಪ್ರತಿಭಟನೆ

Suddi Udaya
error: Content is protected !!