32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕಣಿಯೂರು: ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದಿಂದ ಸಾಧಕರಿಗೆ ಸನ್ಮಾನ

ಕಣಿಯೂರು: ಮೂಲ್ಯರ ಯಾನೆ ಕುಲಾಲರ ಸೇವಾ ಸಂಘ ಕಣಿಯೂರು ವತಿಯಿಂದ ಸಾಧಕರಿಗೆ ಸನ್ಮಾನ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮವು ಅ.19ರಂದು ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ತಾಲೂಕು ಯುವ ವೇದಿಕೆಯ ಅಧ್ಯಕ್ಷ ಅವಿನಾಶ್ ಕುಲಾಲ್ ಅವರು ಮಾತನಾಡಿ, ಸಂಘದ ಮೂಲಕ ನಾವು ಬಲಿಷ್ಠರಾಗಬೇಕು ಮತ್ತು ನಮ್ಮಲ್ಲಿ ಒಗ್ಗಟ್ಟು ಇರಬೇಕು. ಯುವಕರು ಸಂಘದ ಮೂಲಕ ಸಕ್ರಿಯವಾಗಿ ತೊಡಗಿಕೊಂಡರೆ, ಸಮಾಜದ ಅಭಿವೃದ್ಧಿಗೆ ಅಮೂಲ್ಯ ಕೊಡುಗೆ ನೀಡಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಆನ್‌ಲೈನ್ ಛದ್ಮವೇಶ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು. ಪ್ರತಿಭಾವಂತ ವಿದ್ಯಾರ್ಥಿಗಳ ಸೃಜನಾತ್ಮಕತೆ ಮತ್ತು ಕಲೆ ಪ್ರದರ್ಶನಕ್ಕೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಯಿತು.ಕಾರ್ಯಕ್ರಮದಲ್ಲಿ ಸಮಾಜ ಸೇವೆಯಲ್ಲಿ ತೊಡಗಿಕೊಂಡು ನಿರಂತರವಾಗಿ ಜನಸೇವೆಗೆ ತಮ್ಮನ್ನು ಸಮರ್ಪಿಸಿಕೊಂಡಿರುವ ಅಶೋಕ್ ಕುಲಾಲ್ ಕಣಿಯೂರು ಇವರಿಗೆ ಸಂಘದ ವತಿಯಿಂದ “ಸೇವಾ ಸ್ಪೂರ್ತಿ ಪ್ರಶಸ್ತಿ” ನೀಡಿ ಗೌರವಿಸಲಾಯಿತು.

ಉಮೇಶ್ ಪಿಲಿಗೂಡು ಮಾತನಾಡಿ ಎಲ್ಲ ಸದಸ್ಯರು ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಮಾತ್ರ ಸಂಘದ ನಿಜವಾದ ಶಕ್ತಿ ಬೆಳಗುತ್ತದೆ ಎಂದು ಹೇಳಿದರು.ಕಾರ್ಯದರ್ಶಿ ಸುಧೀರ್ ಕೆ ಎನ್ ಸ್ವಾಗತಿಸಿ, ದಿನೇಶ್ ಅಂತರ ವಂದಿಸಿದರು. ಶ್ರೀಮತಿ ಮಮಿತಾ ಸುಧೀರ್ ಕಾರ್ಯಕ್ರಮ ನಿರೂಪಿಸಿದರು.

Related posts

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಬೆಳ್ತಂಗಡಿ ತಾಲೂಕಿನ ಉತ್ತಮ ಸಂಘ ಪ್ರಶಸ್ತಿ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ಮೂಲಭೂತ ಸೌಕರ್ಯಗಳ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ವತಿಯಿಂದ ನಡ ಸ.ಹಿ.ಪ್ರಾ.ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

Suddi Udaya

ಕಲ್ಮಂಜ: ನಿಡಿಗಲ್ ಅಕ್ಷಯನಗರ ಗೆಳೆಯರ ಬಳಗದಿಂದ 26ನೇ ವರ್ಷದ ಆಟೋಟ ಸ್ಪರ್ಧೆ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಒಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ಉಜಿರೆ ಎಸ್.ಡಿ.ಎಂ ಆಸ್ಪತ್ರೆಗೆ ಖ್ಯಾತ ಸಂಶೋಧಕ ಡಾ. ಡಿ.ಕೆ ಹರಿ ದಂಪತಿಯ ಭೇಟಿ

Suddi Udaya
error: Content is protected !!