ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 14 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಮುಂಡಾಜೆ ಅನುದಾನಿತ ಪ್ರೌಢ ಶಾಲೆಯ ಕು. ಯಕ್ಷಿತ ಜೆ ಇವರು ಚಿನ್ನದ ಪದಕ ಪಡೆದು ನವೆಂಬರ್ ನಲ್ಲಿ ಅಂಧ್ರಪ್ರದೇಶದ ಕಡಪಾದಲ್ಲಿ ನಡೆಯುವ 70 ನೇ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ ಆಗಿದ್ದಾರೆ.
ಇವರು ಮೊಗ್ರು ಗ್ರಾಮ ದಂಡುಗ ನಿವಾಸಿ ಶೀಲಾವತಿ ಮತ್ತು ಜನಾರ್ಧನ ದಂಪತಿಯ ಸುಪುತ್ರಿ. ಇವರ ಕ್ರೀಡಾ ಸಾಧನೆಗೆ ಶಾಲಾಭಿವೃದ್ಧಿ ಸಮಿತಿ, ಶಿಕ್ಷಕ ವೃಂದ, ವಿದ್ಯಾಭಿಮಾನಿಗಳು ಅಭಿನಂದನೆ ಸಲ್ಲಿಸಿದರು.











