ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲು ಅನುಮತಿ ಮತ್ತು ಕೊಠಡಿಗಳ, ಪ್ರಯೋಗಾಲಯಗಳ ನಿರ್ಮಾಣಕ್ಕೆ ಅನುದಾನಕ್ಕೆ ಉನ್ನತ ಶಿಕ್ಷಣ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ ತಾಲೂಕು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯು 1983 ರಲ್ಲಿ ಪ್ರಾರಂಭಗೊಂಡಿದ್ದು, 2025-26 ನೇ ಸಾಲಿನಲ್ಲಿ ಈವರೆಗೆ ಸ್ನಾತಕ ಮತ್ತು ಸ್ನಾತಕೋತ್ತರ ವಿಭಾಗಗಳಲ್ಲಿ 580 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.
ಈ ಕಾಲೇಜಿಗೆ ಗ್ರಾಮೀಣ ಪ್ರದೇಶದಿಂದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶಾತಿ ಪಡೆದಿರುತ್ತಾರೆ. ಪ್ರಸ್ತುತ ಕಾಲೇಜಿನಲ್ಲಿ ಬಿಎ, ಬಿ.ಕಾಂ, ಬಿಬಿಎ ,ಎಮ್ ಎ ಮತ್ತುಎಮ್ ಕಾಂ ತರಗತಿಗಳು ನಡೆಯುತ್ತಿದೆ.

ಬೆಳ್ತಂಗಡಿಯಲ್ಲಿರುವ ಸರಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ 180 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ತಮ್ಮ ಮುಂದಿನ ಪದವಿ ವ್ಯಾಸಂಗಕ್ಕಾಗಿ ಹತ್ತಿರವಿರುವ ಖಾಸಗಿ ಕಾಲೇಜುಗಳಿಗೆ ಹೆಚ್ಚಿನ ಶುಲ್ಕವನ್ನು ಪಾವತಿಸಿ ವ್ಯಾಸಂಗ ಮಾಡಬೇಕಾಗಿರುತ್ತದೆ. ಪ್ರಸ್ತುತ ಬೆಳ್ತಂಗಡಿ ತಾಲೂಕಿನಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗಗಳಿರುವುದಿಲ್ಲ ,ಹೆಚ್ಚಿನ ವಿದ್ಯಾರ್ಥಿಗಳ ಮತ್ತು ಪೋಷಕರ ಬೇಡಿಕೆಯಂತೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಗೆ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲು ಮತ್ತು ಅಗತ್ಯವಿರುವ 6 ಕೊಠಡಿಗಳನ್ನು ಮತ್ತು 2 ಪ್ರಯೋಗಾಲಯಗಳನ್ನು ನಿರ್ಮಿಸಲು ಅನುದಾನವನ್ನು ಒದಗಿಸಿಕೊಡಬೇಕೆಂದರು. ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ ಸುಧಾಕರ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿಯನ್ನು ಸಲ್ಲಿಸಿದರು.

ಮನವಿಗೆ ಸಚಿವರು ಪೂರಕವಾಗಿ ಸ್ಪಂದಿಸಿ ಜಂಟಿ ನಿರ್ದೇಶಕರು ಕಾಲೇಜು ಶಿಕ್ಷಣ ಇಲಾಖೆಯ ಕವಿತಾ ಕೆ ಆರ್ ರವರಿಗೆ ಕಾಲೇಜಿಗೆ ಭೇಟಿ ನೀಡಿ ವರದಿಯನ್ನು ಸಲ್ಲಿಸುವಂತೆ ಸಚಿವರು ಸೂಚಿಸಿದರು.

Related posts

ವೇಣೂರು ಕುಂಭಶ್ರೀ ಆಂ.ಮಾ. ಶಾಲೆಗೆ ಪ್ರಮೋದ್ ಶೆಟ್ಟಿ ರವರಿಂದ ಫ್ಯಾನ್ ಕೊಡುಗೆ

Suddi Udaya

ನಾಳೆ (ಎ.30) ನಾರಾವಿ ಉಪ ವಲಯಾರಣ್ಯಾಧಿಕಾರಿ ಕುಶಾಲಪ್ಪ ಗೌಡರವರಿಗೆ ಸೇವಾ ನಿವೃತ್ತಿ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಮತ್ತು ಪುತ್ತೂರು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟ‌ರ್ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಭಜನಾ ತಂಡಗಳಿಂದ ಕುಣಿತ ಭಜನೆ

Suddi Udaya

ಉಜಿರೆ ಯು.ಎಸ್ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ನೆರಿಯಾ ಗ್ರಾಮದಲ್ಲಿ “ಮಲೆಕುಡಿಯ ಬುಡಕಟ್ಟು ಕುಟುಂಬಗಳೊಂದಿಗೆ ಶೈಕ್ಷಣಿಕ ವಿನಿಮಯ”

Suddi Udaya
error: Content is protected !!