37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ನಾತಕೋತ್ತರ ವಿಭಾಗದಲ್ಲಿ ನೈನಾಡಿನ ಚೇತನಾ ರವರಿಗೆ ನಾಲ್ಕು ಚಿನ್ನದ ಪದಕ

ಬೆಂಗಳೂರು ವಿಶ್ವವಿದ್ಯಾಲಯದ 2022–24ನೇ ಸಾಲಿನ ಶಿಕ್ಷಣ ಸ್ನಾತಕೋತ್ತರ (Master of Education) ವಿಭಾಗದಲ್ಲಿ ನೈನಾಡಿನ ಚೇತನಾ ಅವರು ನಾಲ್ಕು ಚಿನ್ನದ ಪದಕಗಳನ್ನು ಗೆದ್ದು, ಪ್ರಥಮ ರ‍್ಯಾಂಕ್‌ ಪಡೆದಿದ್ದಾರೆ. ಈ ಗೌರವವನ್ನು ಅವರು ಬೆಂಗಳೂರು ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ 60ನೇ ವಾರ್ಷಿಕ ದೀಕ್ಷಾಂತ ಸಮಾರಂಭದಲ್ಲಿ ಸ್ವೀಕರಿಸಿದರು.

ಈ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಥಾವರ್ ಚಂದ್ ಗೆಹ್ಲೋಟ್, ಕುಲಸಚಿವರಾದ ಡಾ. ಎಸ್.ಎಂ. ಜಯಕಾರ, ಪ್ರೋಕುಲಪತಿಗಳಾದ ಡಾ. ಸಿ.ಎಂ. ಸುಧಾಕರ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

ಶ್ರೀಮತಿ ಚೇತನಾ ಕರುಣಾಕರವರು ನೈನಾಡಿನ ಶಿವಪ್ಪ ಮೂಲ್ಯ ಮತ್ತು ಪುಷ್ಪಾವತಿ ದಂಪತಿಗಳ ಸುಪುತ್ರಿಯಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುತ್ತಾರೆ.

Related posts

ಬೆಳ್ತಂಗಡಿಯಲ್ಲಿ ಯುವವಾಹಿನಿಯಿಂದ “ಡೆನ್ನಾನ ಡೆನ್ನನ” ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ನಾವೂರು ಗ್ರಾಮ ಪಂಚಾಯತ್ ನ ವಿಶೇಷ ಗ್ರಾಮ ಸಭೆ

Suddi Udaya

ಹೇಮಾವತಿ ವೀ. ಹೆಗ್ಗಡೆಯವರ ಕನಸನ್ನು ಸಾಕಾರಗೊಳಿಸಿದ ರಂಗಶಿವ ತಂಡ ‘ಮುದ್ದಣನ ಮನೋರಮೆ’ ನಾಟಕ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆ

Suddi Udaya

ಚಂದ್ರನ ಮೇಲೆ ಸ್ಪರ್ಶ, ಎಕ್ಸೆಲ್ ನಲ್ಲಿ ಹರ್ಷ

Suddi Udaya
error: Content is protected !!