September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ ಹಾಗೂ ಉಚಿತ ಮಹಿಳೆಯರ ಕ್ಯಾನ್ಸರ್ ತಪಾಸಣಾ ಶಿಬಿರ

ಪಡಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಣಪತಿ ಸಭಾಭವನ ಪಡಂಗಡಿಯಲ್ಲಿ ಫಾದರ್ ಎಲ್.ಎಂ. ಪಿಂಟೋ ಆಸ್ಪತ್ರೆ ಬದ್ಯಾರ್ ಫಾದರ್ ಮುಲ್ಲರ್ ಆಸ್ಪತ್ರೆ ಮಂಗಳೂರು ಶ್ರೀ ಗಣೇಶೋತ್ಸವ ಸಮಿತಿ ಪಡಂಗಡಿ ಗ್ರಾ.ಪಂ. ಪಡಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘ ಪಡಂಗಡಿ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಅ.19 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಉಚಿತ ಕಣ್ಣಿನ ತಪಾಸಣೆ ಹಾಗೂ ಉಚಿತ ಮಹಿಳೆಯರ ಕ್ಯಾನ್ಸರ್ ತಪಾಸನಾ ಶಿಬಿರ ನಡೆಯಿತು.

ಶಿಬಿರವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಪೂಜಾರಿ ಉದ್ಘಾಟಿಸಿ ಉದ್ಘಾಟನಾ ಭಾಷಣ ಮಾಡಿ ಶಿಬಿರದ ಯಶಸ್ವಿಗೆ ಶುಭ ಹಾರೈಸಿದರು. ಫಾದರ್ ಎಲ್ ಎಂ ಪಿಂಟೋ ಆಸ್ಪತ್ರೆ ಬದ್ಯಾರ್ ಇದರ ಆಡಳಿತಾಧಿಕಾರಿಯವರು ಶಿಬಿರದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಸಕ ಹರೀಶ್ ಪೂಂಜಾ ಇವರು ಶಿಬಿರದ ಬಗ್ಗೆ ಮಾತನಾಡಿ ನಾವೆಲ್ಲ ಕನಿಷ್ಠ ವರ್ಷದಲ್ಲಿ 100 ದಿನವಾದರೂ ಮನೆಯಲ್ಲೇ ಬೆಳೆಸಿದ ತರಕಾರಿಗಳನ್ನು ಉಪಯೋಗಿಸುವ ಸಂಕಲ್ಪ ಮಾಡಬೇಕು ಇದರಿಂದ ನಮ್ಮ ಆರೋಗ್ಯವನ್ನು ಕಾಪಾಡಲು ನಾವು ಶ್ರಮಿಸಬೇಕೆಂದು ಹಿತ ನುಡಿದು ಶಿಬಿರದ ಯಶಸ್ವಿಗೆ ಹಾರೈಸಿದರು. ಸದಸ್ಯ ಸಂತೋಷ ಕುಮಾರ್ ಜೈನ್ ಮಾತನಾಡಿ ಎಲ್ಲಾ ಸಂಪತ್ತಿಂಗಿತಲು ಮಿಗಿಲಾದ ಸಂಪತ್ತು ಅದು ಆರೋಗ್ಯ ಅದನ್ನು ಕಾಪಾಡಿ ನೆಮ್ಮದಿಯ ಜೀವನವನ್ನು ಸಾಗಿಸಬೇಕೆಂಬ ಹಿತನುಡಿಯೊಂದಿಗೆ ಶಿಬಿರದ ಯಶಸ್ವಿಗಾಗಿ ಹಾರೈಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸಫನಾ ಸ್ವಾಗತಿಸಿ, ಎಲ್ ಎಂ ಆಸ್ಪತ್ರೆ ಸಿಬ್ಬಂದಿ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya

ಪೆರಿಂಜೆ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಬಳಂಜ ಶಾಲಾ ಆಟದ ಮೈದಾನ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಸಂತ ತೆರೇಸಾ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಿಎ ಫೌಂಡೇಶನ್ ಹಾಗೂ ಸಿಪಿಟಿ ವಿಷಯದ ಕುರಿತು ಪುನಶ್ಚೇತನ ಕಾರ್ಯಾಗಾರ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಪವನ್ ಸಾಲ್ಯಾನ್ ಕೊಲ್ಲಾಜೆ

Suddi Udaya

ಅರಣ್ಯ ಒತ್ತುವರಿ ಮತ್ತು ಪಟ್ಟಾ ಜಮೀನು ಸೇರಿ 3 ಎಕರೆಗಿಂತ ಕಡಿಮೆ ಇರುವ ಅರಣ್ಯ ಒತ್ತುವರಿದಾರರನ್ನು ತೆರವುಗೊಳಿಸುವಂತಿಲ್ಲ: ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!