September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಶಾಸಕ ಹರೀಶ್ ಪೂಂಜ ಸಾರಥ್ಯದಲ್ಲಿ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೋಸೆ ಹಬ್ಬಕ್ಕೆ ಚಾಲನೆ

ಬೆಳ್ತಂಗಡಿ: ಬೆಳಕಿನ ಹಬ್ಬ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಶಾಸಕ ಹರೀಶ್ ಪೂಂಜರವರ ಸಾರಥ್ಯದಲ್ಲಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬಕ್ಕೆ ಬೆಳ್ತಂಗಡಿ ಬಸ್‌ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಚಾಲನೆ ನೀಡಲಾಯಿತು.


ದೊಡ್ಡಬಳ್ಳಾಪುರ ಶಾಸಕ ಹಾಗೂ ಬಿಜೆಪಿ ಯುವ ಮೋರ್ಚಾದ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜು ಅವರು 6 ನೇ ವರ್ಷದ ದೋಸೆ ಹಬ್ಬವನ್ನು ದೀಪ ಬೆಳಗಿಸಿ ಚಾಲನೆ ನೀಡಿ, ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರ ಸಂಘಟನೆಗೆ ಮೆಚ್ಚುಗೆ ವ್ಯಕ್ತಿಪಡಿಸಿದರು.

ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾ| ಬ್ರಿಜೇಶ್ ಚೌಟ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಸಂದೀಪ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಜಿಲ್ಲಾ ಕೋಶಾಧಿಕಾರಿ ಸಂಜಯ್ ಪ್ರಭು, ಉಡುಪಿ ಜಿಲ್ಲಾ ಯುವಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್, ಜಿಲ್ಲಾ ಯುವ ಮೋರ್ಚಾದ ಉಪಾಧ್ಯಕ್ಷ ಅನಿನಾಶ್ ಸುವರ್ಣ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ನಗರ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಬಿಜೆಪಿ ಯುವ ಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಪ್ರಮುಖರಾದ ವಿನಿತ್ ಕೋಟ್ಯಾನ್, ಗಣೇಶ್ ಲಾಯಿಲ, ಜಯಪ್ರಕಾಶ್ ಕಡಮಾಜೆ, ಗಣೇಶ್ ಗೌಡ, ಸೀತರಾಮ ಬೆಳಾಲ್, ಶರತ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.


ಭಾರತದ ಆಡಳಿತ ಚುಕ್ಕಾಣಿ ಹಿಡಿದ ಪ್ರಧಾನಿ ನರೇಂದ್ರ ಮೋದಿಯವರ 75ನೇ ಹುಟ್ಟು ಹಬ್ಬ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವ ಆಚರಣೆಯ ಅಂಗವಾಗಿ ಬಿಜೆಪಿ ಯುವ ಮೋರ್ಚಾದ ವತಿಯಿಂದ ವಾಣಿ ಶಿಕ್ಷಣ ಸಂಸ್ಥೆಗಳ ಬಳಿಯಿಂದ ನಮೋ ಮ್ಯಾರಾಥಾನ್ ಆದ್ದೂರಿಯಾಗಿ ನಡೆಯಿತು. ಸುಮಾರು ಮೂರುವರೆ ಸಾವಿರಕ್ಕೂ ಹೆಚ್ಚು ಯುವ ಕಾರ್ಯಕರ್ತರು ಭಾಗವಹಿಸಿದ್ದರು.


ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸಾಂಸ್ಕೃತಿಕ ತುಡರ್ ನೃತ್ಯ ಸ್ಪರ್ಧೆ ಸಾಯಂಕಾಲದವರೆಗೆ ನಡೆಯಲಿದ್ದು, ಮಕ್ಕಳ ಹುಲಿವೇಷ ಸ್ಪರ್ಧೆ ಬಾಲೆ ಪಿಲಿ, ಸಂಜೆ 6ರ ಗೋಧೋಳಿ ಮುಹೂರ್ತದಲ್ಲಿ ಗೋ ಪೂಜಾ ಉತ್ಸವ, ದೀಪ ಪ್ರಜ್ವಲನೆ ಹಾಗೂ ರಾತ್ರಿ ‘ಭಜರಂಗ ಬಲಿ’ ನಾಟಕ ಪ್ರದರ್ಶನವೂ ಜರಗಲಿದೆ.

ಶಾಸಕ ಹರೀಶ್ ಪೂಂಜ ಸ್ವಾಗತಿಸಿ, ಕಾರ್ಯಕ್ರಮದ ಉದ್ದೇಶಗಳ ಬಗ್ಗೆ ತಿಳಿಸಿದರು. ಯುವ ಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್ ಧನ್ಯವಾದವಿತ್ತರು.

Related posts

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ರುಡ್ ಸೆಟ್ ಸಂಸ್ಥೆಗೆ ಭೇಟಿ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಇಂದಬೆಟ್ಟು ಸ.ಹಿ. ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ -ರೇಂಜರ್ಸ್ ಸಹಯೋಗದಲ್ಲಿ ಒಂದು ದಿನದ ಶಿಬಿರ

Suddi Udaya

ಬೆಳ್ತಂಗಡಿ ನ.ಪಂ. ಮುಂಭಾಗ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಸಾವ್ಯ : ಮರೆಜಾಲು ನಿವಾಸಿ ಸಂತೋಷ್ ನಿಧನ

Suddi Udaya

ಉರುವಾಲು:32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya
error: Content is protected !!