September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ ಗ್ರಾ.ಪಂ.ಯಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯ ಅನುಷ್ಠಾನದ ಅಧ್ಯಯನ ಪ್ರವಾಸ

ಬೆಳ್ತಂಗಡಿ: ಕರ್ನಾಟಕ ರಾಜ್ಯದ ಮಾದರಿ ಗ್ರಾಮ ಪಂಚಾಯತಿಯಾದ ಉಜಿರೆ ಗ್ರಾಮ ಪಂಚಾಯತಿಯಲ್ಲಿ ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಯೋಜನೆಯ ಅನುಷ್ಠಾನದ ಕುರಿತಂತೆ ಅಧ್ಯಯನ ಪ್ರವಾಸವನ್ನು ನಡೆಸಲು ಆಂಧ್ರ ಪ್ರದೇಶ ರಾಜ್ಯ ಸರ್ಕಾರದ ಸ್ವಚ್ಛ ಆಂಧ್ರ ಕಾರ್ಪೊರೇಷನ್ ಸಮಿತಿಯ ಅಧ್ಯಕ್ಷರಾದ ಕೋಮರೆಡ್ಡಿ ಪಟ್ಟಾಭಿರಾಮ ಹಾಗೂ ಸಮಿತಿಯ ಸದಸ್ಯರು ಭೇಟಿ ನೀಡಿದರು.

ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಉಷಾಕಿರಣ್ ಕಾರಂತ್ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು. ಅಧ್ಯಯನ ಪ್ರವಾಸದ ತಂಡವುಉಜಿರೆ ಗ್ರಾ.ಪಂ. ಕಚೇರಿ, ಡಿಜಿಟಲ್ ಅರಿವು ಕೇಂದ್ರ, ಎಂ.ಆರ್.ಎಫ್ ಘಟಕ, ಸ್ವಚ್ಛ ಸಂಕೀರ್ಣ ಘಟಕ, ಮಲ ತ್ಯಾಜ್ಯ ನಿರ್ವಹಣಾ ಘಟಕವನ್ನು ಭೇಟಿ ನೀಡಿ ಅಧ್ಯಯನ ನಡೆಸಿದರು.

ಈ ಸಂಧರ್ಭದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾನ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು, ಸ್ವಚ್ಛ ಭಾರತ ಮಿಷನ್ (ಗ್ರಾ) ಜಿಲ್ಲಾ ಘಟಕದ ಸಂಯೋಜಕರಾದ ಪವನ್, ನವೀನ್ ಹಾಗೂ ಡೊಂಬಯ್ಯ ಅವರು, ಉಜಿರೆ ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಡ: ಸ.ಪ್ರೌ.ಶಾಲೆಯಲ್ಲಿ ಗಿಡ ನಾಟಿ ಮತ್ತು ಪರಿಸರ ಮಾಹಿತಿ ಕಾರ್ಯಕ್ರಮ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಭಾಗವತ ಸಪ್ತಾಹ’

Suddi Udaya

ಬೆಳ್ತಂಗಡಿ ಭಾರತ ಮಾತಾ ಪೂಜಾ ಸಮಿತಿಯಿಂದ ರಾಷ್ಟ್ರದೇವೋಭವ ಕಾರ್ಯಕ್ರಮ

Suddi Udaya

ಬೆಳಾಲು: ಮಾಯ ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ

Suddi Udaya

ಹೊಚ್ಚ ಹೊಸ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ 10% ಡಿಸ್ಕೌಂಟ್ ಸೇಲ್

Suddi Udaya
error: Content is protected !!