September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

ಸೌತಡ್ಕ : ಬೆಂಗಳೂರು ಅಸೋಸಿಯೇಷನ್ ಆಫ್ ಪೀಪಲ್ ವಿಥ್ ಡಿಸಬಿಲಿಟಿಯ ಸಹಕಾರದೊಂದಿಗೆ ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಗುರುತಿಸಲ್ಪಟ್ಟ ಬೆನ್ನುಹುರಿ ಅಪಘಾತಕ್ಕೊಳಗಾದ ಶಿಬಾಜೆಯ ಮೋಹನ್ ಪಿಬಿ, ಮಹೇಶ್ ಗುತ್ತಿಗಾರು, ನಿಡ್ಲೆಯ ಚಂದ್ರಶೇಖರ್ ಭಟ್, ಪುತ್ತೂರಿನ ಶ್ರೀಮತಿ ಜೈನಾಬಿ, ಬದಿಯಡ್ಕದ ಚಂದ್ರಶೇಖರ್, ಕಡಬದ ಧನಂಜಯ ಮತ್ತು ಯೋಗೀಶ್ ಎರ್ಮಲ್ ರವರಿಗೆ ಗಾಲಿಕುರ್ಚಿ ವಿತರಣಾ ಕಾರ್ಯಕ್ರಮವನ್ನು ಅ. 20 ದೀಪಾವಳಿ ಹಬ್ಬದಂದು ಸೌತಡ್ಕ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೇವಾಧಾಮದಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಪುತ್ತೂರಿನ ಇನ್ನರ್ ವೀಲ್ ಕ್ಲಬ್ ನ ಅಧ್ಯಕ್ಷೆ ಶ್ರೀಮತಿ ರೂಪಲೇಖರವರು ಗಾಲಿಕುರ್ಚಿಗಳನ್ನು ಹಸ್ತಾಂತರಿಸಿ ಫಲಾನುಭವಿಗಳಿಗೆ ವಿಶ್ವಾಸ ಬದುಕಿಗಾಗಿ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಸೇವಾಧಾಮ ಸಂಸ್ಥಾಪಕ ಕೆ ವಿನಾಯಕ ರಾವ್, ಬೆನ್ನು ಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು, ಆರೈಕೆದಾರರು, ಫಲಾನುಭವಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಅ.3: ಮುಂಡಾಜೆ ಮೂರ್ತಿಲ್ಲಾಯ ಭಕ್ತವೃಂದದಿಂದ ಬಿರ್ದ್‌ದ ಪಿಲಿಗೊಬ್ಬು

Suddi Udaya

ಬೆಳ್ತಂಗಡಿ ಸಿರಿ ಸಂಸ್ಥೆಗೆ ಪತ್ರಕರ್ತ ವಸಂತ ಗಿಳಿಯಾರ್ ಭೇಟಿ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕೆಸರಲ್ಲಿ ಕಸರತ್ತು – ವಿಶೇಷ ಸ್ಪರ್ಧೆಗಳ ಆಯೋಜನೆ

Suddi Udaya

ಹರೀಶ್ ಪೂಂಜ ಗೆಲುವು: ಮುಗೇರಡ್ಕದಲ್ಲಿ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ಡಿ.ಕೆ. ಆರ್.ಡಿ.ಎಸ್ ನಿಂದ ಪೌಷ್ಟಿಕ ಆಹಾರ ಮಾಹಿತಿ, ಪ್ರಾತ್ಯಕ್ಷಿಕೆ ಹಾಗೂ ಗುರುವಂದನಾ ಕಾರ್ಯಕ್ರಮ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!