September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ಅಂಗವಾಗಿ ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್‌ಕಾಲೇಜಿನಲ್ಲಿ ಸರಣಿ ಕಾರ್ಯಕ್ರಮಗಳು

ಉಜಿರೆ: ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ಸಂಭ್ರಮದ ಅಂಗವಾಗಿ ಎಸ್‌ಡಿಎಂ ಇಂಜಿನಿಯರಿಂಗ್‌ಕಾಲೇಜ್, ಉಜಿರೆಯಲ್ಲಿ ವಿದ್ಯಾರ್ಥಿಗಳಲ್ಲಿ ಆರೋಗ್ಯ, ಸಾಮಾಜಿಕ ಜಾಗೃತಿ ಮತ್ತು ಸೇವಾ ಮನೋಭಾವ ಬೆಳೆಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.


ಅ.15 ರಂದು ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಉಜಿರೆಯ ಆಹಾರ ತಜ್ಞೆ ಶ್ರೀಮತಿ ಅನ್ವೇಷಾ ಜೈನ್ ಅವರು ಆರೋಗ್ಯ ಮತ್ತು ಶುಚಿತ್ವ ಕುರಿತು ಉಪನ್ಯಾಸ ನೀಡಿದರು.
ಅ.16 ರಂದು ಯೂತ್ ರೆಡ್ ಕ್ರಾಸ್ ಘಟಕ ಹಾಗೂ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಸಹಕಾರದೊಂದಿಗೆ ರಕ್ತದಾನ ಶಿಬಿರ ಆಯೋಜಿಸಲಾಯಿತು. ಎಸ್‌ಡಿಎಂ ಆಸ್ಪತ್ರೆಯ ಪೆಥಲಾಜಿಸ್ಟ್ ಡಾ. ಮೇಘಾ ನಾಯಕ್ ಶಿಬಿರವನ್ನು ಉದ್ಘಾಟಿಸಿದರು. ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಒಟ್ಟು 170 ಯೂನಿಟ್ ರಕ್ತದಾನ ಮಾಡಿದರು.
ಅ.17 ರಂದು ಇಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗವು ʼಸರ್ಕಾರಿ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳುʼ ಎಂಬ ವಿಷಯದ ಬಗ್ಗೆ ಕಾರ್ಯಕ್ರಮವನ್ನು ಆಯೋಜಿಸಿತು. ಒಎನ್‌ಜಿಸಿ ಯ, ನಿವೃತ್ತ ಮಹಾಪ್ರಬಂಧಕ ಸುಬ್ರಹ್ಮಣ್ಯ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಸಾಯಂಕಾಲ ವಿದ್ಯಾರ್ಥಿಗಳಿಂದ ಪರಿಸರ ಸಂರಕ್ಷಣೆಯ ಕುರಿತು ʼಮೈಮ್ ಶೋʼ ಆಯೋಜಿಸಲಾಯಿತು.

Related posts

ಆ.24: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದಲ್ಲಿ ಉಚಿತ ಯೋಗ ಶಿಬಿರ

Suddi Udaya

ಮೊಬೈಲ್ ಕಳವಾದರೆ ವಾಟ್ಸಪ್ ನಲ್ಲಿ ಹಾಯ್ ಕಳುಹಿಸಿದರೆ ಪತ್ತೆಗೆ ಪ್ರಯತ್ನ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಸ್ ಪಿ ವೈ ಎಸ್ ಎಸ್ ಕರ್ನಾಟಕ, ಶ್ರೀ ಪತಂಜಲಿ ಯೋಗ ಶಿಕ್ಷಣ ಫೌಂಡೇಶನ್ ಮಂಗಳೂರು ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನಾರ್ಯ ಪೊದುಂಬಿಲ ಕೆಸರ್ ದ ಕಂಡಡ್ ಪರ್ಬದ ಗೊಬ್ಬು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂದಾರು: ಸ.ಹಿ.ಪ್ರಾ. ಶಾಲಾ ಶಿಕ್ಷಕಿ ಕು. ದೇವಿಕಾ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!