September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೈಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ತರಗತಿ ಉದ್ಘಾಟನೆ

ಪೆರ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಬೈಪಾಡಿಯ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯನ್ನು ಹಮ್ಮಿಕೊಳ್ಳಲಾಗಿದ್ದು ಇದರ ಉದ್ಘಾಟನಾ ಕಾರ್ಯಕ್ರಮವನ್ನು ಸರಕಾರಿ ಪ್ರೌಢ ಶಾಲೆ ಬೈಪಾಡಿ ಯಲ್ಲಿ ನಡೆಸಲಾಯಿತು.

ಉದ್ಘಾಟನೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಬಾಲಕೃಷ್ಣ ರವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ನಮ್ಮ ಗ್ರಾಮೀಣ ಪ್ರದೇಶದ ಮಕ್ಕಳಿಗೆ ವಿಶೇಷ ತರಗತಿಯ ಅವಕಾಶಗಳು ಇಲ್ಲದೆ ಇದ್ದು ಈ ಒಂದು ವಿಶೇಷ ತರಗತಿಯು ಮಕ್ಕಳ ಎಸ್.ಎಸ್.ಎಲ್.ಸಿ ಫಲಿತಾಂಶ ವನ್ನು ಉತ್ತಮ ರೀತಿಯಲ್ಲಿ ಪಡೆಯಲು ಅವಕಾಶವಾಗಿದೆ ಎಲ್ಲಾ ಮಕ್ಕಳು ವಿಶೇಷ ತರಗತಿಯ ಪ್ರಯೋಜನ ಪಡೆಯುವಂತೆ ತಿಳಿಸಿದರು.

ವಲಯ ಮೇಲ್ವಿಚಾರಕರಾದ ಪೂರ್ಣಿಮಾ ರವರು ಗ್ರಾಮೀಣ ಪ್ರದೇಶದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಗುಣವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಎಲ್ಲಾ ಮಕ್ಕಳು ವಿಶೇಷ ತರಗತಿಯನ್ನು ಪಡೆದು ಉತ್ತಮ ಅಂಕ ಗಳಿಸುವಂತೆ ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಒಕ್ಕೂಟ ಅಧ್ಯಕ್ಷ ಶಶಿಧರ ರವರು ತಮ್ಮ ಊರಿನ ಮಕ್ಕಳಿಗಾಗಿ ನಡೆಸಲಾಗುವ ಈ ಕಾರ್ಯಕ್ರಮದಿಂದ ಶಾಲೆಯಲ್ಲಿ ಉತ್ತಮ ಫಲಿತಾಂಶ ಸಿಗಲಿ ಎಂದು ತಿಳಿಸುತ್ತ ಸಂತಸ ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಒಕ್ಕೂಟ ಉಪಾಧ್ಯಕ್ಷ ದಿನೇಶ್ ಉಪಸ್ಥಿತರಿದ್ದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಕಾರ್ಯಕ್ರಮ ನಿರೂಪಿಸಿದರು. ಪ್ರಮೀಳಾ ಸೇವಾಪ್ರತಿನಿಧಿ ಸ್ವಾಗತಿಸಿ, ವಿಶೇಷ ತರಗತಿ ಶಿಕ್ಷಕ ಮೇದ ಧನ್ಯವಾದ ನೀಡಿದರು.

Related posts

ಜೆಸಿಐ ಉಜಿರೆ ಘಟಕ ಮತ್ತು ಮಹಿಳಾ ಜೆಸಿ ವಿಭಾಗದಿಂದ ಜಾಗೃತಿ ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ “ತನ್’ಶೀತ್ವ್” ದ‌ಅ್‌ವಾ ಕ್ಯಾಂಪ್

Suddi Udaya

ಬಳಂಜ : ಮುಜ್ಜಿಮೇರು ಮನೆಯ ಒಬ್ಬು ಪೂಜಾರಿ ನಿಧನ

Suddi Udaya

ವೇಣೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಕಾರ್ಯಕ್ರಮ; 2 ಸಾವಿರ ಗಿಡಗಳ ನಾಟಿ

Suddi Udaya

ಕಲ್ಮಂಜ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!