September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಆಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಅ.21 ರಂದು ದೀಪಾವಳಿಯನ್ನು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮವು ಪ್ರಾರ್ಥನಾ ವಿಧಿಯೊಂದಿಗೆ ದೀಪ ಬೆಳಗಿಸುವುದರ ಮೂಲಕ ಪ್ರಾರಂಭವಾಯಿತು. ವಿದ್ಯಾರ್ಥಿನಿಯಾದ ಬಿಂದುರವರು ದೀಪಾವಳಿಯ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿನಿಯರು ನೃತ್ಯ, ನಾಟಕ ಪ್ರದರ್ಶಿಸುವ ಮೂಲಕ ಎಲ್ಲರನ್ನೂ ಮನರಂಜಿಸಿದರು. ಕಾರ್ಯಕ್ರಮಕ್ಕೆ ಶಾಲಾ ಸಂಚಾಲಕರಾದ ವಂ|ಸ್ವಾ| ಸ್ಟ್ಯಾನಿ ಗೋವಿಯಸ್ ರವರು ಆಗಮಿಸಿ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ದೀಪಾವಳಿಯು ಕತ್ತಲೆಯಿಂದ ಬೆಳಕಿನೆಡೆಗೆ ಕೊಂಡೊಯ್ಯುವ ಹಬ್ಬವಾಗಿದೆ ಎಂದು ಹೇಳಿ ಮಕ್ಕಳಿಗೆ ದೀಪಾವಳಿಯ ಶುಭಾಶಯವನ್ನು ಕೋರಿದರು.

ಕಾರ್ಯಕ್ರಮದಲ್ಲಿ ಮಡಂತ್ಯಾರು ಚರ್ಚ್ ಸಹಾಯಕ ಧರ್ಮಗುರುಗಳಾದ ವಂ|ಸ್ವಾ| ಲ್ಯಾರಿ ಪಿಂಟೋ , ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೊ ಡೇಸ, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ರವೀಂದ್ರ ರೈ ಹಾಗೂ ಶಿಕ್ಷಕರ-ರಕ್ಷಕ ಸಂಘದ ಸದಸ್ಯ ಪ್ರವೀಣ್ ಚಂದ್ರ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಎಲ್ರಿಕಾ ಮತ್ತು ಆಫ್ನಾನ್ ರವರು ನಿರೂಪಿಸಿ, ಪ್ರೀತಮ್ ಸ್ವಾಗತಿಸಿ, ಕ್ಷಮ್ಯ ಧನ್ಯವಾದವನ್ನು ಸಮರ್ಪಿಸಿದರು.

Related posts

ಬೆಳ್ತಂಗಡಿ ತಹಶೀಲ್ದಾರ ಯಾಗಿ ಸುರೇಶ್ ಕುಮಾರ್ ಟಿ ಎಸ್ ನೇಮಕ

Suddi Udaya

ಭಾರತೀಯ ಜೈನ್ ಮಿಲನ್ ನ ಕೆನಡಾ ಘಟಕವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೆಬಿನಾರ್ ಮೂಲಕ ಉದ್ಘಾಟನೆ

Suddi Udaya

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಖಂಡನೆ

Suddi Udaya

ಉಜಿರೆಯ ಎಸ್.ಡಿ.ಎಂ ಕಾಲೇಜಿನ ಅಮಿತ್‌ ಕೆ ಜೈನ್ ಅವರಿಗೆ ಪಿ.ಎಚ್.ಡಿ ಪದವಿ

Suddi Udaya

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಿಂದ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
error: Content is protected !!