ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರ 58ನೇ ಪಟ್ಟಾಭಿಷೇಕದ ವಧ೯ಂತ್ಯುತ್ಸವ ಅ.24ರಂದು ಅಮೃತವರ್ಷಿಣಿ ಸಭಾಂಗಣದಲ್ಲಿ ಜರುಗಿತು.

ತುಮಕೂರು ಶ್ರೀ ಕ್ಷೇತ್ರ ಸಿದ್ಧಗಂಗಾ ಮಠದ ಪರಮಪೂಜ್ಯ ಶ್ರೀ ಸಿದ್ಧಲಿಂಗ ಸ್ವಾಮೀಜಿ ಪುಸ್ತಕ ಬಿಡುಗಡೆ ಮಾಡಿ ಆಶೀರ್ವಚನ ನೀಡಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಶ್ರೀಮತಿ ಹೇಮಾವತಿ ವೀ.ಹೆಗ್ಗಡೆ, ಶಾಸಕ ಹರೀಶ್ ಪೂಂಜ , ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಅಧ್ಯಕ್ಷ ಹರೀಶ್ ಕುಮಾರ್, ಡಿ.ಸುರೇಂದ್ರ ಕುಮಾರ್, ಇಸ್ಕಾನ್ ಸಂಸ್ಥೆಯ ಶ್ರೀರಾಮ್, ಟಾಟಾ ಕಂಪೆನಿಯ ಚರಣ್ ಗುರುಮೂರ್ತಿ ಭಾಗವಹಿಸಿದ್ದರು.


ಈ ಸಂದರ್ಭದಲ್ಲಿ ನಿವೃತ್ತ ಉದ್ಯೋಗಿ ಸಿರಿಬಾಗಿಲು ರಾಮಕೃಷ್ಣ ಮಯ್ಯ ಅವರನ್ನು ಸನ್ಮಾನಿಸಲಾಯಿತು.
ಮಣೆಗಾರ್ ವಸಂತ ಮಂಜಿತ್ತಾಯ ಮತ್ತು ಬಳಗದವರ ವೇದಘೋಷ ಬಳಿಕ ಎಸ್ ಡಿ ಎಂ ಸೊಸೈಟಿ ಕಾಯ೯ದಶಿ೯ ಡಿ. ಹಷೇ೯ಂದ್ರ ಕುಮಾರ್ ಸ್ವಾಗತಿಸಿದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಯ೯ನಿವ೯ಹಕ ನಿದೇ೯ಶಕ ಅನಿಲ್ ಕುಮಾರ್ ಎಸ್.ಎಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ಧಮ೯ಸ್ದಳ ಮಂಜುನಾಥೇಶ್ವರ ಕನ್ ಸ್ಟ್ರಕ್ಷನ್ ನ ಯಶೋಧರ ವಂದಿಸಿದರು. ಉಜಿರೆಯ ಎಸ್ ಡಿ ಎಂ ಕಾಲೇಜಿನ ಉಪನ್ಯಾಸಕ ಸುನೀಲ್ ಪಂಡಿತ್ ಕಾಯ೯ಕ್ರಮ ನಿರೂಪಿಸಿದರು.











