37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ರೋವರ್ಸ್ – ರೇಂಜರ್ಸ್ ಘಟಕ ಹಾಗೂ ವಾಣಿಜ್ಯ ಸಂಘದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿನ ಯುವ ರೆಡ್ ಕ್ರಾಸ್ ಘಟಕ, ರೋವರ್ಸ್ – ರೇಂಜರ್ಸ ಘಟಕ ಹಾಗೂ ವಾಣಿಜ್ಯ ಸಂಘದ ವತಿಯಿಂದ ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ಒಂದು ದಿನದ ಶ್ರಮದಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ವಿದ್ಯಾರ್ಥಿಗಳ ತಂಡ ಆಸ್ಪತ್ರೆಯ ಸುತ್ತಮುತ್ತಲಿನ ಪರಿಸರದ ಸ್ವಚ್ಛತಾ ಕೆಲಸ ಮಾಡಿ ಅಲ್ಲಿನ ಸಾರ್ವಜನಿಕರ ಪ್ರಶಂಸೆಗೆ ಕಾರಣಿಭೂತರಾದರು. ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿ ವರ್ಗದವರು ಸಹ ಈ ಶಿಬಿರದಲ್ಲಿ ವಿದ್ಯಾರ್ಥಿಗಳೊಡನೆ ಕೈ ಜೋಡಿಸಿದರು.

ಸ್ವಚ್ಛತಾ ಶಿಬಿರದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊ. ಪದ್ಮನಾಭ ಕೆ, ವಾಣಿಜ್ಯ ಸಂಘದ ಸಂಚಾಲಕರಾದ ಪ್ರೊ. ನವೀನ್, ಯುವ ರೆಡ್ ಕ್ರಾಸ್ ಹಾಗೂ ರೇಂಜರ್ಸ್ ಘಟಕದ ಅಧಿಕಾರಿ ಡಾ. ರಾಜೇಶ್ವರಿ ಎಚ್ ಎಸ್, ಇಂಗ್ಲಿಷ್ ವಿಭಾಗದ ಪ್ರೊ. ಸುರೇಶ್ ಡಿ. ಭಾಗವಹಿಸಿದ್ದರು. ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆಗೆ ಉಪಸ್ಥಿತರಿದ್ದು ಎಲ್ಲ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

Related posts

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ಮಾಹಿತಿ ತಿಳಿದಿರುವ ವ್ಯಕ್ತಿ ಠಾಣೆಗೆ ಶರಣಾಗಲು ಸಿದ್ದ: ಬೆಂಗಳೂರಿನ ವಕೀಲರನ್ನು ಸಂಪರ್ಕಿಸಿದ ಪೊಲೀಸರು

Suddi Udaya

ಆ.17: ನಾಲ್ಕೂರಿನಲ್ಲಿ 3ನೇ ವರ್ಷದ ಮೊಸರು ಕುಡಿಕೆ ಉತ್ಸವ, ತಾಲೂಕು ಮಟ್ಟದ ಕೃಷ್ಣ ವೇಷ ಸ್ಪರ್ಧೆ

Suddi Udaya

ಕಾಮಗಾರಿ ನಿರ್ವಹಿಸಿದ ಬಿಲ್ಲು ಪಾವತಿಗೆ ಒತ್ತಾಯಿಸಿ ಮಂಗಳೂರಿನಲ್ಲಿ ಬೆಳ್ತಂಗಡಿ ಲೋಕೋಪಯೋಗಿ ಗುತ್ತಿಗೆದಾರರ ಧರಣಿ

Suddi Udaya

ಧರ್ಮಸ್ಥಳದಲ್ಲಿ ನೂತನ ಶಿಲಾಮಯ ಧ್ವಜಸ್ತಂಭಕ್ಕೆ ಭವ್ಯ ಸ್ವಾಗತ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕ ಸ್ಥಾನದ ಉಪಚುನಾವಣೆಗೆ ಮಾಜಿ ಸೈನಿಕ ತಂಗಚ್ಚನ್ ಅವಿರೋಧ ಆಯ್ಕೆ

Suddi Udaya

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya
error: Content is protected !!