September 6, 2026
ಅಭಿನಂದನೆವರದಿ

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಜೆಸ್ವಿನ್ ಪಾಲಾಟಿಗೆ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಗೌರವ

ಬೆಳ್ತಂಗಡಿ: ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸೈಂಟ್ ಸಾವಿಯೋ ಶಾಲೆಯ ವಿದ್ಯಾರ್ಥಿ ಜೆಸ್ವಿನ್ ಪಾಲಾಟಿ ಅವರನ್ನು ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ (CBK) ತಂಡದ ವತಿಯಿಂದ ಇಂದು ಅವರ ಮನೆಗೆ ಭೇಟಿ ನೀಡಿ ಗೌರವಿಸಲಾಯಿತು.

ಕುಟುಂಬಸ್ಥರ ಸಮ್ಮುಖದಲ್ಲಿ ನಡೆದ ಈ ಸನ್ಮಾನ ಕಾರ್ಯಕ್ರಮದಲ್ಲಿ CBK ಅಧ್ಯಕ್ಷ ಅಗಸ್ಟೀನ್ ಅವರು CBK ಪರವಾಗಿ ಜೆಸ್ವಿನ್ ಅವರಿಗೆ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಜೈಸನ್ ಪಟ್ಟೆರಿಲ್, ಗೌರವಾಧ್ಯಕ್ಷ ಸೆಬಾಸ್ಟಿಯನ್ ಪಿ.ಟಿ., ಕಾರ್ಯದರ್ಶಿ ಶಿಜೋ ಜೋಸೆಫ್, ಉಪಾಧ್ಯಕ್ಷ ಮ್ಯಾಥ್ಯೂ ವಿ.ಟಿ., ಕೋಶಾಧಿಕಾರಿ ರಂಜಿತ್ ಪಿ.ಎಸ್., ಗೌರವ ಸಲಹೆಗಾರ ಜೋಸೆಫ್ ಕೆ.ಡಿ., ಕಾರ್ಯಕಾರಿಣಿ ಸದಸ್ಯರು ಶಾಜಿ ತೋಮಸ್, ಲಿಜೋ ಚಾಕೋ ಹಾಗೂ ಸಂಘಟನೆಯ ಇತರ ಸದಸ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜೆಸ್ವಿನ್ ಅವರಿಗೆ ಅಭಿನಂದನೆ ಸಲ್ಲಿಸಿ, ಮುಂಬರುವ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಯಶಸ್ಸು ಕೋರಿ ಶುಭಹಾರೈಸಲಾಯಿತು.

Related posts

ನಾಗರಿಕ ಅಭಿನಂದನಾ ಸಮಿತಿ ಕುವೆಟ್ಟು-ಓಡಿಲ್ನಾಳ ವತಿಯಿಂದ ಭಾರತ ಮಾತೆಯ ಸೇವೆಗೈದು ನಿವೃತ್ತ ಹೊಂದಿದ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಖರೀದಿಯ ಮೇಲೆ ಶೇ.20 ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya

ದೊಂಡೋಲೆ ನಾರ್ಯ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಸತೀಶ್, ಕಾರ್ಯದರ್ಶಿ ದಿವಾಕರ್

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಸ್ಟ್ ಎಂಎಲ್ಎ‌ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವತಿಯಂದ ಗೌರವಾರ್ಪಣೆ

Suddi Udaya

ಎಸ್.ಡಿ.ಎಂ ವಸತಿ ಪಪೂ ಕಾಲೇಜಿನ ಪ್ರವೇಶೋತ್ಸವ ಸಮಾರಂಭ

Suddi Udaya
error: Content is protected !!