32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬುರುಡೆ ಪ್ರಕರಣ; ಎಸ್.ಐ.ಟಿ ಕಚೇರಿಗೆ ಆಗಮಿಸಿದ ಪ್ರಣವ್ ಮೊಹಂತಿ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಸಂಬಂಧ ತನಿಖೆ ಮಹತ್ವದ ಹಂತ ತಲುಪಿದ್ದು ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಶನಿವಾರ ಮಧ್ಯಾಹ್ನದ ವೇಳೆ ಆಗಮಿಸಿದ್ದಾರೆ.
ಕಳೆದ ನಾಲ್ಕು ತಿಂಗಳಿನಿಂದ ನಡೆಯುತ್ತಿರುವ ಎಸ್.ಐ.ಟಿ‌ ತನಿಖೆ ಇದೀಗ ಮಹತ್ವದ ಘಟ್ಟ ತಲುಪಿದೆ. ಚಿನ್ನಯ್ಯ ತಂದಿದ್ದ ತಲೆಬುರುಡೆಗೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಂಡಿದ್ದು ಇದರಲ್ಲಿ ಯಾವ ರೀತಿಯಾಗಿ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಅಂತಿಮ ನಿರ್ಧಾರಕ್ಕೆ ಎಸ್.ಐ.ಟಿ ತಂಡ ಬಂದಿದ್ದು ಈ ಬಗ್ಗೆ ಮಹತ್ವದ ಸಭೆಗಳು ಎಸ್.ಐ.ಟಿ ಕಚೇರಿಯಲ್ಲಿ ಅ.25, 26ರಂದು ನಡೆಯಲಿದೆ.

ಅ.27ರಂದು ವಿಚಾರಣೆಗಾಗಿ ಹಾಜರಾಗಲು ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ, ಹಾಗೂ ವಿಠಲ ಗೌಡ ಅವರಿಗೆ ನೋಟೀಸ್ ನೀಡಿದೆ
ಬುರುಡೆಗೆ ಸಂಬಂಧಿಸಿದಂತೆ ಇವರ ವಿಚಾರಣೆ ನಡೆಯುವ ನಿರೀಕ್ಷೆಯಿದೆ. ಅದೇ ರೀತಿ ಚಿನ್ನಯ್ಯ ನೀಡಿದ‌ ಹೇಳಿಕೆಗಳ ಬಗ್ಗೆಯು ತನಿಖೆ ನಡೆಸುವ ಬಗ್ಗೆ ಎಸ್.ಐ.ಟಿ ಮಹತ್ವದ ನಿರ್ಧಾರಗಳನ್ನು ತೆಗದುಕೊಳ್ಳುವ ನಿರೀಕ್ಷೆಯಿದೆ.
ಒಟ್ಟಾರೆಯಾಗಿ ಎಸ್.ಐ.ಟಿ ತನಿಖೆಯಲ್ಲಿ ಮುಂದಿನ ವಾರ ಅತ್ಯಂತ ಮಹತ್ವದ ಬೆಳವಣಿಗೆಗಳು ನಡೆಯುವ ನಿರೀಕ್ಷೆಯಿದೆ.

Related posts

ಬೆಳ್ತಂಗಡಿ: ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಮಡಂತ್ಯಾರು ಮುಖ್ಯರಸ್ತೆಯಲ್ಲಿ ಗುಡ್ಡ ಕುಸಿತ: ಟಾಟಾ ಎಸಿ ವಾಹನ ಜಖಂ; ಅಂಗಡಿಗೆ ಸಂಪೂರ್ಣ ಹಾನಿ

Suddi Udaya

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Suddi Udaya

ಮಿತ್ತಬಾಗಿಲು ಗ್ರಾಮ ಸಭೆ: ಆಶ್ರಯ ಯೋಜನೆಯ ಮನೆ ಮಂಜೂರಾತಿಯಲ್ಲಿ ಪಾರದರ್ಶಕತೆ ಇರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ: ಸಂಜೀವಿನಿ ಸಂಘಗಳಿಗೆ ರೂ.1.03 ಕೋಟಿ ಬ್ಯಾಂಕ್ ಸಾಲ ವಿತರಣೆ

Suddi Udaya

ಧರ್ಮಸ್ಥಳ: ನೇತ್ರಾವತಿ ಅಜಿಕುರಿ ಬಳಿ ರಸ್ತೆಗೆ ಬಿದ್ದ ಮರ

Suddi Udaya
error: Content is protected !!