37.9 C
ಪುತ್ತೂರು, ಬೆಳ್ತಂಗಡಿ
March 6, 2026
ಕರಾವಳಿಗ್ರಾಮಾಂತರ ಸುದ್ದಿಚುನಾವಣೆತಾಲೂಕು ಸುದ್ದಿಪೊಲೀಸ್ಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಪ್ರತಿಭಟನೆಗೆ ಪೊಲೀಸರಿಂದ ಅನುಮತಿ ನಿರಾಕರಣೆ

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿಯನ್ನು ಪುತ್ತೂರು ಎ.ಸಿ.ಸ್ಟೆಲ್ಲಾ ವರ್ಗೀಸ್ ಅವರು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷ ಗಡಿಪಾರು ಆದೇಶ ಮಾಡಿದ ವಿರುದ್ಧ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಮತ್ತೆ ಎರಡನೇ ಭಾರಿ ಅ.27 ರಂದು ಪ್ರತಿಭಟನೆ ನಡೆಸಲು ಬೆಳ್ತಂಗಡಿ ಪೊಲೀಸರಿಗೆ ಮನವಿ ಪತ್ರ ನೀಡಿದ್ದರು ಆದ್ರೆ ಪೊಲೀಸರು ಪ್ರತಿಭಟನೆ ಮಾಡಲು ನಿರಾಕರಣೆ ಮಾಡಿದ್ದಾರೆ.

ಬೆಳ್ತಂಗಡಿ ಪೊಲೀಸರಿಗೆ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಅಧ್ಯಕ್ಷ ಅನಿಲ್ ಅಂತರ ಅ.27 ರಂದು ಪ್ರತಿಭಟನೆ ನಡೆಸಲು ಅ.25 ರಂದು ಮನವಿ ನೀಡಿದ್ದರು. ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಮಾನ್ಯ ಉಚ್ಚ ನ್ಯಾಯಾಲಯದಲ್ಲಿ (30021/25) ವಿಚಾರಣೆ ನಡೆದು ಆದೇಶ ಬಾಕಿಯಿರುವ ಕಾರಣದಿಂದ ಯಾವುದೇ ಪ್ರತಿಭಟನೆಗಳನ್ನು ಮಾಡಲು ಅವಕಾಶವಿಲ್ಲ ಹಾಗೂ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ್ರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆಳ್ತಂಗಡಿ ಪೊಲೀಸರು ಅನುಮತಿಯನ್ನು ನಿರಾಕರಿಸಿ ಹಿಂಬರಹ ನೀಡಿದ್ದಾರೆ.

ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಕಡೆಯಿಂದ ಈ ಮೊದಲು ಪ್ರತಿಭಟನೆ ಮಾಡಲು ಬೆಳ್ತಂಗಡಿ ತಹಶೀಲ್ದಾರ್ ಗೆ ಅನುಮತಿ ಕೇಳಿದ್ದರು ಆದ್ರೆ ಬೆಳ್ತಂಗಡಿ ಪೊಲೀಸರ ನಿರ್ದೇಶನದಂತೆ ತಹಶೀಲ್ದಾರ್ ಅನುಮತಿಯನ್ನು ನೀಡಿರಲ್ಲಿಲ್ಲ. ಇದೀಗ ಎರಡನೇ ಭಾರಿ ಕೂಡ ಪ್ರತಿಭಟನೆಗೆ ಅನುಮತಿ ಸಿಕ್ಕಿಲ್ಲ.

Related posts

ಪಿಲಾತಬೆಟ್ಟು: ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

Suddi Udaya

ಮಡಂತ್ಯಾರು ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಾಘಾತದಿಂದ ನಿಧನ

Suddi Udaya

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಇವರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಪ.ಪಂ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ

Suddi Udaya
error: Content is protected !!