September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಅ28-ನ.3: ಕೊಕ್ಕಡದಲ್ಲಿ 69ನೇ ವರ್ಷದ ಸಾರ್ವಜನಿಕ ನಗರ ಭಜನಾ ಸಪ್ತಾಹ

ಕೊಕ್ಕಡ: ವಿಶ್ವ ಹಿಂದೂ ಪರಿಷದ್ ಕೊಕ್ಕಡ ಘಟಕ ಹಾಗೂ ಶ್ರೀರಾಮ ಸೇವಾ ಟ್ರಸ್ಟ್ ಕೊಕ್ಕಡ ಇವರ ಸಹಯೋಗದಲ್ಲಿ 69ನೇ ವರ್ಷದ ಸಾರ್ವಜನಿಕ ನಗರ ಭಜನಾ ಸಪ್ತಾಹ ಅ.28ರಿಂದ ನ.03ರವರೆಗೆ ಭಕ್ತಿಭಾವದಿಂದ ನಡೆಯಲಿದೆ.

ಅ.28ರಂದು ಸಂಜೆ 7.00 ಗಂಟೆಗೆ ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ರಂಗಪೂಜೆ ನೆರವೇರಲಿದೆ. ಅ.29ರಂದು ಮಧ್ಯಾಹ್ನ 1.00 ಗಂಟೆಗೆ ಕೊಕ್ಕಡದಿಂದ ಹೊರಟು ದೇವರ ಮೂರ್ತಿಯನ್ನು ಶಿಶಿಲ ಬರ್ಗುಳದ ದಿ.ಪುರುಷೋತ್ತಮ ನಾಯಕ್ ಅವರ ಮನೆಯಿಂದ ಕೊಕ್ಕಡಕ್ಕೆ ಮೆರವಣಿಗೆಯ ಮೂಲಕ ಬರಮಾಡಿಕೊಳ್ಳುವ ಕಾರ್ಯಕ್ರಮ ನಡೆಯಲಿದೆ. ಸಂಜೆ 6.30ಕ್ಕೆ ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ದೇವರ ಪ್ರಾರ್ಥನೆಯೊಂದಿಗೆ ಭಜನೆ ಆರಂಭಗೊಂಡು ನ.01ರ ತನಕ ಪ್ರತಿದಿನ ಕೊಕ್ಕಡ ಶ್ರೀರಾಮ ಭಜನಾ ಮಂದಿರದಲ್ಲಿ ಪ್ರಾರಂಭಗೊಂಡು ನಗರ ಸಂಚಾರದಿಂದ ಮುಕ್ತಾಯಗೊಳ್ಳಲಿದೆ.

ನಗರ ಭಜನಾ ಮಹೋತ್ಸವದ ಶೋಭಾಯಾತ್ರೆಯು ನ.2ರಂದು ಸಂಜೆ 6 ಗಂಟೆಗೆ ಆರಂಭಗೊಂಡು ಮರುದಿನ ಬೆಳಗ್ಗೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ. ನ.2ರಂದು ಭಜನಾ ಸಪ್ತಾಹದ ವಿಶೇಷ ಆಕರ್ಷಣೆಯಾಗಿ ಸ್ಥಳೀಯ ಹಾಗೂ ಆಹ್ವಾನಿತ ತಂಡಗಳಿಂದ ಕುಣಿತ ಭಜನೆ ನಡೆಯಲಿದೆ. ಕೊಕ್ಕಡ ಕೇಸರಿ ಗೆಳೆಯರ ಬಳಗದ ಪ್ರಾಯೋಜಕತ್ವದಲ್ಲಿ ಆಹ್ವಾನಿತ ಕುಣಿತ ಭಜನಾ ತಂಡಗಳು ಶ್ರೀ ದುರ್ಗಾ ಭಜನಾ ಮಂಡಳಿ ಕನ್ನಾಜೆ ಹಾಗೂ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಚಂದ್ಕೂರು ಅವರಿಂದ ಭಕ್ತಿ ಸ್ಫೂರ್ತಿ ತುಂಬಿದ ಕುಣಿತ ಭಜನೆ ಪ್ರದರ್ಶನಗಳು ನಡೆಯಲಿವೆ. ಪ್ರತಿದಿನ ರಾತ್ರಿ 7.30ಕ್ಕೆ ಅನ್ನಸಂತರ್ಪಣೆ ಕಾರ್ಯಕ್ರಮವೂ ನಡೆಯಲಿದೆ ಎಂದು ಸಮಿತಿಯವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Related posts

ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್: 26ನೇ ವರ್ಷದ ಭಜನಾ ತರಬೇತಿ ಕಮ್ಮಟ ಉದ್ಘಾಟನೆ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭು ರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧರ್ಮಸ್ಥಳದ ಮಂಜುನಾಥೇಶ್ವರ ಆಸ್ಪತ್ರೆಗೆ ದಶಮಾನೋತ್ಸವ ಸಂಭ್ರಮ

Suddi Udaya

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿ – ಹಯಾತುಲ್ ಇಸ್ಲಾಂ ಮದರಸ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸಂಸ್ಥಾಪನ ದಿನಾಚರಣೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.1,979 ಕೋಟಿ ವ್ಯವಹಾರ, ರೂ.5.85 ಕೋಟಿ ಲಾಭ, ಶೇ.15 ಡಿವಿಡೆಂಡ್

Suddi Udaya

ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವನ್ನು ರಕ್ಷಿಸಿದ ಗೃಹ ರಕ್ಷಕ ದಳದ ಸಿಬ್ಬಂದಿ

Suddi Udaya
error: Content is protected !!