24.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಬೆಳ್ತಂಗಡಿ: ನಾಲ್ಕು ಮಂದಿಗೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಿದ ಎಸ್ಐಟಿ

ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ವಿಚಾರಣೆಗೆ ಹಾಜರಾಗಲು ಕಾಲಾವಾಕಾಶ ಕೋರಿದ್ದ ನಾಲ್ಕು ಮಂದಿಗೆ ಎಸ್.ಐ.ಟಿ ಅಧಿಕಾರಿಗಳು ಕಾಲಾವಕಾಶ ನೀಡಿದ್ದಾರೆ.

ಧರ್ಮಸ್ಥಳ ಪ್ರಕರಣದಲ್ಲಿ ಅ.27 ರಂದು ಐದು ಮಂದಿಗೆ ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಅದರಂತೆ ಸುಜಾತ ಭಟ್ ಮಾತ್ರ ಅ.27 ರಂದು ವಿಚಾರಣೆಗೆ ಹಾಜರಾಗಿದ್ದರು. ಉಳಿದ ನಾಲ್ಕು ಮಂದಿ ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ, ಜಯಂತ್ ಟಿ, ಮಹೇಶ್ ಶೆಟ್ಟಿ ತಿಮರೋಡಿ ವಿಚಾರಣೆಗೆ ಹಾಜರಾಗಿಲ್ಲ.

ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಅ.27 ರಂದು ಮಧ್ಯಾಹ್ನ ಬಂದ ನಾಲ್ಕು ಮಂದಿಯ ಪರ ವಕೀಲರಾದ ಅಂಬಿಕಾ ಪ್ರಭು ಎಸ್.ಐ.ಟಿ ವಿಚಾರಣೆಗೆ ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದರು ಅದರಂತೆ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿಗೆ ಏಳು ದಿನದ ಒಳಗಡೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಿದ್ದು, ಉಳಿದಂತೆ ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ವಿಠಲ್ ಗೌಡರಿಗೆ ನಾಲ್ಕು ದಿನದ ಒಳಗಡೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಲಾಗಿದೆ ಎಂದು ಎಸ್‌.ಐ.ಟಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಪ್ರಗತಿ ಪರಿಶೀಲನ ತಂಡ ಭೇಟಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ /ದುಗಾ೯ದೇವಿ ದೇವಸ್ಥಾನದಲ್ಲಿ ಮನೆ-ಮನೆಯಿಂದ ಅಡಕೆ ಸಂಗ್ರಹಣಾ ಅಭಿಯಾನ, ರಥಬೀದಿಯ ಕಾಂಕ್ರಿಟೀಕರಣದ ಉದ್ಘಾಟನೆ ಹಾಗೂ ದೇವಸ್ಥಾನದ ಮುಖ ಮಂಟಪದ ಶಿಲಾನ್ಯಾಸ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಡೆಂಗ್ಯೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಜಾಗೃತಿ ಅಭಿಯಾನ

Suddi Udaya

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

Suddi Udaya

ಜ.11ರಂದು ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯಕ್ಕೆ ಹಾಜರಾಗಲು ಕೋರ್ಟ್ ಆದೇಶ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!