March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಚಂದ್ರಶೇಖರ್ ರವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ

ನಡ ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಚಂದ್ರಶೇಖರ್ ಇವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಚಂದ್ರಶೇಖರ್ ಇವರು ಸಾತ್ವಿಕ ಸ್ವಭಾವದವರಾಗಿದ್ದು ಎಲ್ಲರಿಗೂ ಚಂದ್ರನಂತೆ ತಂಪನ್ನು ನೀಡುವವರು. ಯಾರನ್ನು ದ್ವೇಷಿಸದ ಅಜಾತಶತ್ರು.” ಎಂದು ನಿವೃತ್ತ ಪ್ರಾಂಶುಪಾಲರಾದ ಯದುಪತಿ ಗೌಡ ಇವರು ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಲಿಲ್ಲಿ ಪಿವಿ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ವಿದ್ಯಾರ್ಥಿನಿ ಸುರಕ್ಷಿತ, ಹಿರಿಯ ವಿದ್ಯಾರ್ಥಿ ನಿತೇಶ್, ಉಪನ್ಯಾಸಕಿ ವಸಂತಿ ಪಿ ರವರು ಶ್ರೀಯುತರ ನಿಸ್ವಾರ್ಥ ಸೇವೆಯ ಬಗ್ಗೆ, ಕಾಲೇಜಿಗೆ ನೀಡಿದ ಸಾಕಷ್ಟು ಕೊಡುಗೆಗಳ ಬಗ್ಗೆ ಮಾತನಾಡಿದರು. ಉಪನ್ಯಾಸಕಿ ಶ್ರೀಮತಿ ಶಿಲ್ಪಾ ಡಿ ಸನ್ಮಾನ ಪತ್ರವನ್ನು ವಾಚಿಸಿದ ಬಳಿಕ ಕಾಲೇಜಿನ ಉಪನ್ಯಾಸಕರು, ಪ್ರಸಕ್ತ ಸಾಲಿನ ವಿದ್ಯಾರ್ಥಿಗಳು, ಹಿರಿಯ ವಿದ್ಯಾರ್ಥಿಗಳು, ನಡ ಪ್ರೌಢಶಾಲಾ ವಿಭಾಗದ ಅಧ್ಯಾಪಕರು, ಊರಿನವರು ಪ್ರತ್ಯೇಕ ಪ್ರತ್ಯೇಕವಾಗಿ ಸನ್ಮಾನಿಸಿದರು.


ಸನ್ಮಾನ ಸ್ವೀಕರಿಸಿ ಮಾತನಾಡುತ್ತಾ ಚಂದ್ರಶೇಖರ್ ಇವರು ತಮ್ಮ ಆರಂಭದ ಬದುಕಿನ ಕಷ್ಟದ ದಿನಗಳ ಬಗ್ಗೆ, ತನ್ನ 32 ವರ್ಷಗಳ ವಿಸ್ತಾರವಾದ ಸೇವಾ ಅನುಭವಗಳ ಬಗ್ಗೆ, ಸೇವಾ ಸಂತೃಪ್ತಿಯ ಬಗ್ಗೆ ವಿಚಾರಗಳನ್ನು ಹಂಚಿಕೊಂಡರು.
ಮುಖ್ಯಅಭ್ಯಾಗತರಾಗಿ ಅಜಿತ್ ಆರಿಗ, ರಾಜಶೇಖರ ಅಜ್ರಿ, ಮುನಿರಾಜ ಅಜ್ರಿ, ಮೋಹನ್ ಬಾಬು, ಜನಾರ್ದನ ಗೌಡ, ನಾರ್ಬರ್ಟ್ ಮಾರ್ಟಿಸ್, ಕಾಲೇಜು ನಾಯಕ ಭವಿತ್, ಕಾರ್ಯದರ್ಶಿ ಹೀನಾ ಕೌಸರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮೋಹನ ಗೌಡ ನಿರೂಪಿಸಿ, ಶ್ರೀಮತಿ ಪವಿತ್ರ ಧನ್ಯವಾದವಿತ್ತರು.

Related posts

ಡಿ.20: ಕರಾಯದಲ್ಲಿ ಹೆಣ್ಣು ಕರುಗಳ ಪ್ರದರ್ಶನ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಂಭ್ರಮದ ಜಾತ್ರೋತ್ಸವ

Suddi Udaya

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

Suddi Udaya

ಪ್ರೊ. ನಾವುಜಿರೆ ನಿಧನಕ್ಕೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಯದುಪತಿ ಗೌಡರಿಂದ ಸಂತಾಪ

Suddi Udaya

ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು

Suddi Udaya

ಬೆಳ್ತಂಗಡಿ: ಉಪನ್ಯಾಸಕ ಪುನೀತ್ ಕುಮಾರ್ ಬಯಲು ಅವರಿಗೆ ನುಡಿನಮನ ಕಾರ್ಯಕ್ರಮ

Suddi Udaya
error: Content is protected !!