22.9 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ಗೋಮಾಂಸ ಮಾಡುತ್ತಿದ್ದ ಶೆಡ್ ಮೇಲೆ ಪೊಲೀಸ್ ದಾಳಿ: ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ : ಅಕ್ರಮವಾಗಿ ದನವನ್ನು ಕಳವು ಮಾಡಿಕೊಂಡು ಬಂದು ಗೋಮಾಂಸ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿ. ದನದ ಮಾಂಸ ಮತ್ತು ಪರಿಕರಗಳನ್ನು ವಶಪಡಿಸಿಕೊಂಡ ಘಟನೆ ಅ.27ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಚರ್ಚ್ ಬಳಿಯ ಖಾಸಗಿ ರಬ್ಬರ್ ತೋಟದ ಶೆಡ್ ಒಳಗಡೆ ಅಕ್ರಮವಾಗಿ ಜಾನುವಾರು ಕಡಿದು ಮಾಂಸ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಓಮನ ನೇತೃತ್ವದ ತಂಡ ಅ.27 ರಂದು ಮಧ್ಯಾಹ್ನ 2:30 ಕ್ಕೆ ದಾಳಿ ಮಾಡಿದ್ದಾರೆ.

ದಾಳಿ ವೇಳೆ 91 ಕೆ.ಜಿ ದನದ ಮಾಂಸ ಮತ್ತು ಪರಿಕರಗಳನ್ನು ವಶಪಡಿಸಿಕೊಂಡಿದ್ದು. ಗೋಮಾಂಸ ಮಾಡುತ್ತಿದ್ದ ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ನಿವಾಸಿ ಉಸ್ಮಾನ್ ಮಗ ಅಬ್ದುಲ್ ನಝೀರ್(36) ಮತ್ತು ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಅಬ್ದುಲ್ ರಹುಮಾನ್ ಮಗ ಝಕಾರಿಯಾ(36) ಬಂಧಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 4,12 ಕರ್ನಾಟಕ ಗೋವಧೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಅಧಿನಿಯಮ 2020 ಮತ್ತು ಕಲಂ 33(2) BNS 2023 ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುಬ್ಬಪುರ್ ಮಠ್ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಅನಂದ್.ಎಮ್ ಮತ್ತು ವೇಣೂರು ಸಬ್ ಇನ್ಸ್‌ಪೆಕ್ಟರ್ ಓಮನ ನೇತೃತ್ವದಲ್ಲಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ನಾಳೆ(ಜ.11): ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ:ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಲಿದ್ದೇವೆ: ಸುಮಂತ್ ಕುಮಾರ್ ಜೈನ್:ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ,ಕಾರ್ಯಾಗಾರವೂ ಮಧ್ಯಾಹ್ನ 2:00 ರಿಂದ ಸಂಜೆ 4:30 ರ ವರೆಗೆ ಜರುಗಲಿದೆ

Suddi Udaya

ಶಿರ್ಲಾಲು: ಶ್ರೀ ರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ಉಜಿರೆ: ನಾಪತ್ತೆಯಾಗಿದ್ದ ಕ್ರೀಡಾ ವಸತಿ ನಿಲಯದ ಪಿಯುಸಿ ವಿದ್ಯಾರ್ಥಿನಿ ಹೈದರಾಬಾದ್ ನಲ್ಲಿ ಪತ್ತೆ

Suddi Udaya

ನಾಪತ್ತೆಯಾಗಿದ್ದ ಬೆಳಾಲಿನ ಯುವಕ ಬಲಿಪೆ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

Suddi Udaya

ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆ: ಕನ್ನಡಸೇನೆ-ಕರ್ನಾಟಕ” ಬೆಳ್ತಂಗಡಿ ತಾಲೂಕಿನಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ “ಅನಿಮಲ್ ಫಾರ್ಮ್” ಚಲನ ಚಿತ್ರ ಪ್ರದರ್ಶನ

Suddi Udaya
error: Content is protected !!