22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌.ಡಿ‌.ಎಂ. ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನಗಳ ಮಹಾವಿದ್ಯಾಲಯ, ಉಜಿರೆ ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ “ಏಕ ವಲಯ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆ ಮತ್ತು ಆಯ್ಕೆ ಪ್ರಕ್ರಿಯೆ – 2025” ಉಜಿರೆಯ ಕೀರ್ತಿಶೇಷ ಮಾತೃಶ್ರೀ ಡಿ. ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ಅ. 27ರಂದು ವಿಜೃಂಭಣೆಯಿಂದ ಆರಂಭಗೊಂಡು ಅ. 28ರಂದು ಸಮಾರೋಪಗೊಂಡಿತು.

ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಎಸ್‌.ಡಿ‌.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ವಿಶ್ವನಾಥ ಹಾಗೂ ಅಧ್ಯಕ್ಷರಾಗಿ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು.

ಯೋಗ ವಿಭಾಗದ ಡೀನ್ ಹಾಗೂ ಶಾಂತಿವನ ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಸ್ವಾಗತ ಭಾಷಣ ಮಾಡಿದರು. ಧನ್ಯವಾದ ಪ್ರಸ್ತಾವನೆಯನ್ನು ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಧರ್ಮೇಂದ್ರ ನೀಡಿದರು. ಮೈಸೂರಿನಿಂದ ಆಗಮಿಸಿದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವೀಕ್ಷಕ ಮಹೇಂದ್ರ ಉಪಸ್ಥಿತರಿದ್ದರು.

ಎಸ್‌.ಡಿ‌.ಎಂ. ನ್ಯಾಚುರೋಪತಿ ಕಾಲೇಜು ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ. ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ನಡೆದ ಈ ವಿಶೇಷ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 16 ಕಾಲೇಜುಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.

Related posts

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ನಿವೃತ್ತ ಡಿಎಫ್ ಓ, ಎನ್.ಪದ್ಮನಾಭ ಮಾಣಿಂಜ ವಿಧಿವಶ

Suddi Udaya

ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಲಾಯಿಲ ಚಂದ್ರಿಕಾ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಕೊಕ್ಕಡ ಗ್ರಾಮದ ರೈತರ ವತಿಯಿಂದ ಶ್ರೀ ಸೌತಡ್ಕ ಮಹಾಗಣಪತಿ ದೇವರಿಗೆ 24 ಅಗೇಲು ರಂಗ ಪೂಜೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ವಿದ್ಯುತ್ ಕಾಮಗಾರಿ ವೇಳೆ ಕಂಬದಿಂದ ಬಿದ್ದು ಮುಗೇರಡ್ಕ ನಿವಾಸಿ ಪ್ರಕಾಶ್ ಮೃತ್ಯು

Suddi Udaya

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್, ತಾಲೂಕು ಒಕ್ಕಲಿಗ ಗೌಡರ ಸಂಘ ಮತ್ತು ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯಿಂದ ವೈದ್ಯಕೀಯ ನೆರವು

Suddi Udaya
error: Content is protected !!