30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿನಿಧನಬೆಳ್ತಂಗಡಿವರದಿ

ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಎಂ.ಜಿ. ಶೆಟ್ಟಿಯವರ ನಿಧನಕ್ಕೆ ಸಂತಾಪ

ಧರ್ಮಸ್ಥಳ: ಭಾರತೀಯ ಜೀವವಿಮಾ ನಿಗಮದ ನಿವೃತ್ತ ಅಭಿವೃದ್ಧಿ ಅಧಿಕಾರಿ ಎಂ.ಜಿ. ಶೆಟ್ಟಿ ಅವರ ನಿಧನದ ಸುದ್ದಿ ತಿಳಿದು ವಿಷಾದವಾಯಿತು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಕೂಡಾ ವಿಮಾ ಏಜೆಂಟರುಗಳ ಮೂಲಕ ಅವರು ಜೀವವಿಮೆಯ ಮಹತ್ವದ ಬಗ್ಗೆ ಮಾಹಿತಿ, ಮಾರ್ಗದರ್ಶನ ನೀಡಿ ವಿಮೆ ಮಾಡುವಂತೆ ಪ್ರೇರಣೆ ನೀಡುತ್ತಿದ್ದರು. ಧರ್ಮಸ್ಥಳದ ಎಲ್ಲಾ ಸಿಬ್ಬಂದಿಗಳಿಗೆ ವಿಮೆ ಮಾಡಿಸುವಲ್ಲಿ ಅವರು ವಿಶೇಷ ಸಹಕಾರ ನೀಡಿರುತ್ತಾರೆ. ನಮ್ಮ ಕ್ಷೇತ್ರದ ಅಭಿಮಾನಿಯೂ, ಭಕ್ತರೂ ಆಗಿದ್ದ ಅವರು ಎಲ್ಲಾ ಕಾರ್ಯಕ್ರಮಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸುತ್ತಿದ್ದರು.

ಧರ್ಮಸ್ಥಳದಲ್ಲಿ ಪ್ರತಿವರ್ಷ ಲಕ್ಷದೀಪೋತ್ಸವ ಸಂದರ್ಭದಲ್ಲಿ ಆಯೋಜಿಸುವ ರಾಜ್ಯಮಟ್ಟದ ವಸ್ತುಪ್ರದರ್ಶನ ಸಮಿತಿಯ ಸದಸ್ಯರಾಗಿಯೂ ಅವರು ಉತ್ತಮ ಸೇವೆ ನೀಡಿದ್ದಾರೆ.ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ ಅವರ ಅಗಲುವಿಕೆಯಿಂದ ಕುಟುಂಬ-ವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ.

Related posts

ಧರ್ಮಸ್ಥಳ ಬುರುಡೆ ಪ್ರಕರಣ: ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡದ ಹಿನ್ನೆಲೆ ಜಾಮೀನು ಸಿಕ್ಕರೂ ಬಿಡುಗಡೆಯಾಗದ ಚಿನ್ನಯ್ಯ

Suddi Udaya

ವೇಣೂರು ಗ್ರಾ.ಪಂ. ನಿಧಿ 1ರ ಶೇ.25 ರ ಅನುದಾನದಲ್ಲಿ ಪ.ಜಾತಿ/ ಪ.ಪಂಗಡ ಫಲಾನುಭವಿಗಳಿಗೆ ಚಯರ್ ವಿತರಣೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ನಿಧಿ ವಿತರಣೆ

Suddi Udaya

ಉಜಿರೆ ಮಹಿಳಾ ವಿವಿದ್ದೋದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಶಶಿಕಲಾ ಡಿ ಗೌಡ , ಉಪಾಧ್ಯಕ್ಷರಾಗಿ ಪ್ರಮೀಳಾ

Suddi Udaya

ಉಜಿರೆ: ಪಾಕತಜ್ಞ ಕೃಷ್ಣಮೂರ್ತಿ ರಾವ್ ನಿಧನ

Suddi Udaya

ತಂದೆಯ ವಿಯೋಗದ ನಾಲ್ಕನೇ ದಿನವೇ ಮಗ ನಿಧನ

Suddi Udaya
error: Content is protected !!