22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.14: ಮಡಂತ್ಯಾರು ಸಹಕಾರಿ ಸಂಘದ ನೇತೃತ್ವದಲ್ಲಿ 72ನೇ ಸಹಕಾರಿ ಸಪ್ತಾಹ, ಪೂರ್ವಭಾವಿ ಸಭೆ

ಮಡಂತ್ಯಾರು: ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಕ್ಷೇತ್ರದಲ್ಲಿರುವವರೆಲ್ಲರೂ ಒಂದೆಡೆ ಸೇರಿ ಚಳವಳಿಯ ಸಾಧನೆ, ಪ್ರಗತಿಯ ಅವಲೋಕನದ ಜೊತೆಗೆ ಸಾಧನೆ ಬಗ್ಗೆ ಹೆಮ್ಮೆ ಪಟ್ಟುಕೊಂಡು ಮುಂದಿನ ಬೆಳವಣಿಗೆ ಬಗ್ಗೆ ಚಿಂತನೆ ನಡೆಸಿ 72ನೇ ಸಹಕಾರಿ ಸಪ್ತಾಹವನ್ನು ಅತ್ಯಂತ ಯಶಸ್ವಿಯಾಗಿ ನಡೆಸಲು ಎಲ್ಲರ ಸಹಕಾರ ಬೇಕೆಂದು ಮಡಂತ್ಯಾರು ಸಹಕಾರಿ ಸಂಘದ ಅಧ್ಯಕ್ಷ ಜೋಯೆಲ್ ಮೆಂಡೋನ್ಸಾ ಹೇಳಿದರು.

ಅವರು ಅ.29ರಂದು ಮಡಂತ್ಯಾರು ಸಿಎ ಬ್ಯಾಂಕಿನ ಸಭಾ ಭವನದಲ್ಲಿ ಅಖಿಲಾ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೇತೃತ್ವದಲ್ಲಿ ನ.೧೪ರಂದು ಜಿಲ್ಲಾ ಮಟ್ಟದ ಸಪ್ತಾಹ ಕಾರ್ಯಕ್ರಮವದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿದೆ. ಈಗಾಗಲೇ ಕಾರ್ಯಕ್ರಮದ ರೂಪುರೇಷೆ ಸಿದ್ದಪಡಿಸಲಾಗಿದೆ ಎಂದರು.

ವೇದಿಕೆಯಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾದ ಕುಶಾಲಪ್ಪ ಗೌಡ, ಸಹಕಾರಿ ಯೂನಿಯನ್ ನಿರ್ದೇಶಕ ಸತೀಶ್ ಕಾಶಿಪಟ್ಣ, ದಕ ಜಿಲ್ಲಾ ಹಾಲು ಉತ್ಪಾದಕರ ಸಂಘದ ನಿರ್ದೇಶಕ ಪ್ರಭಾಕರ ಹುಲಿಮೇರು, ಸಹಕಾರಿ ಯೂನಿಯನ್ ಸಿಇಓ ಹೀರೆಮಠ್, ಮಡಂತ್ಯಾರು ಸಹಕಾರಿ ಸಂಘದ ಉಪಾಧ್ಯಕ್ಷ ಕಾಂತಪ್ಪ ಗೌಡ, ಸಿಇಓ ಜೋಕಿಂ ಡಿಸೋಜ, ವಿವಿಧ ಸೊಸೈಟಿಯ ಅಧ್ಯಕ್ಷರು,ನಿರ್ದೇಶಕರುಗಳು,ಸಿಇಓ, ಜಿಲ್ಲಾ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್ ಮೊದಲಾದವರು ಉಪಸ್ಥಿತರಿದ್ದರು.

ಮಡಂತ್ಯಾರು ಸಿಎ ಬ್ಯಾಂಕ್ ನಿರ್ದೇಶಕರು, ಸಿಬ್ಬಂದಿಗಳು ಸಹಕರಿಸಿದರು

Related posts

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಕನ್ಯಾನ ಸದಾಶಿವ ಶೆಟ್ಟಿಯವರ ತೀರ್ಮಾನ ಸಂತಸ ತಂದಿದೆ: ಸಂದೀಪ್ ಶೆಟ್ಟಿ ಮಂದರ್ಸ

Suddi Udaya

ಕುವೆಟ್ಟು: ಮನೆಗೆ ನುಗ್ಗಿದ್ದ ಕಳ್ಳರು: ನಗದು ಸಹಿತ ರೂ. 3.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಭೆ:ಶಾಲಾ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಬಗ್ಗೆ ಸಮಗ್ರ ಚರ್ಚೆ :ಹಿರಿಯ ವಿದ್ಯಾರ್ಥಿ ಸಂಘದ ಸಮಿತಿ ರಚನೆ:ಅಧ್ಯಕ್ಷರಾಗಿ ವಾಸುದೇವ ಸೋಮಯಾಜಿ, ಕಾರ್ಯದರ್ಶಿಯಾಗಿ ಪೂರ್ಣಿಮಾ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ಅಧ್ಯಕ್ಷರಾಗಿ ಅಭಿಜ್ಞಾ ಬೊಲ್ಮಾ, ಕಾರ್ಯದರ್ಶಿಯಾಗಿ ಶಿವಾನಿ ಪಿ ಶೆಟ್ಟಿ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya
error: Content is protected !!