37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.7 ರಂದು ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯಲಿರುವ ಬೆಳ್ತಂಗಡಿ ಪಟ್ಟಣ ಪಂಚಾಯತ್‌ ಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡದಂತೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆ

ಬೆಳ್ತಂಗಡಿ: ನ.7 ರಂದು ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯಲಿರುವ ಬೆಳ್ತಂಗಡಿ ಪಟ್ಟಣ ಪಂಚಾಯತ್‌ ಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿದಂತೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಮಾಡಿದೆ. ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಅವರು‌ ಪ್ರತ್ಯೇಕವಾಗಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಅ.30 ರಂದು ಈ ಆದೇಶವನ್ನು ನೀಡಿದೆ.

ಬೆಳ್ತಂಗಡಿ ಪಟ್ಟಣ ಪಂಚಾಯತ್‌ನಲ್ಲಿ ಕಳೆದ ಅವಧಿಯ ಚುನಾವಣೆಯಲ್ಲಿ ಬೆಳ್ತಂಗಡಿಯ ಪಟ್ಟಣ ಪಂಚಾಯತ್‌ನ ಇತಿಹಾಸದಲ್ಲಿ ಪ್ರಥಮ ಬಾರಿಗೆ ಬಿಜೆಪಿ ಬೆಂಬಲಿತ ಸದಸ್ಯರು ಅಧಿಕಾರದ ಚುಕ್ಕಾಣಿ ಹಿಡಿದಿದ್ದ ರು. ಒಟ್ಟು ಐದು ವರ್ಷದ ಅಡಳಿತದಲ್ಲಿ ಪ್ರಥಮ ಅವಧಿಯ 30 ತಿಂಗಳ ಮೊದಲ ಅವಧಿಗೆ ಅಧ್ಯಕ್ಷರಾಗಿ ರಜನಿ ಕುಡ್ವ ಹಾಗೂ ಉಪಾಧ್ಯಕ್ಷರಾಗಿ ಜಯಾನಂದ ಗೌಡ ಟಿ. ಕಾರ್ಯನಿರ್ವಹಿಸಿದ್ದರು. ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲು ನಿಗದಿ ಪ್ರಕ್ರಿಯೆ ವಿಳಂಬಗೊಂಡು ಆಡಳಿತಾಧಿಕಾರಿಗಳು ಸರಿ ಸುಮಾರು 16 ತಿಂಗಳ ಕಾಲ ಕಾರ್ಯನಿರ್ವಹಿಸಿದರು. 2024ರಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಗೊಂಡು ಕಳೆದ ಅಕ್ಟೋಬರ್‌ನಲ್ಲಿ ಜಯಾನಂದ ಗೌಡ ಟಿ. ಅಧ್ಯಕ್ಷರಾಗಿ ಹಾಗೂ ಕು| ಗೌರಿ ಉಪಾಧ್ಯರಾಗಿ ಆಯ್ಕೆಯಾಗಿದ್ದರು.

ಎರಡನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅಧಿಕಾರ ಅವಧಿ 30 ತಿಂಗಳು ಆಗಿದ್ದರೂ, ಇದೀಗ ಇವರುಗಳ ಅಧಿಕಾರವಧಿ ಮೊಟಕುಗೊಂಡು ಒಂದು ವರ್ಷ ಮೂರು ತಿಂಗಳಲ್ಲಿ ಮುಕ್ತಾಯಗೊಳ್ಳುತ್ತಿದೆ. ಜೊತೆ ಪಂಚಾಯತದ ಎಲ್ಲಾ ಸದಸ್ಯರ ಅವಧಿಯೂ ನ.7ಕ್ಕೆ ಮುಕ್ತಾಯಗೊಳ್ಳಲಿದೆ. ಸರಕಾರ ಮೀಸಲಾತಿ ಪ್ರಕಟಗೊಳಿಸಲು ವಿಳಂಬ ಮಾಡಿರುವುದರಿಂದ ಚುನಾಯಿತ ಪ್ರತಿನಿಧಿಗಳು ತಮ್ಮ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಅಧಿಕಾರದ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಇದೀಗ ಅಧ್ಯಕ್ಷ ಜಯಾನಂದ ಗೌಡ ಅವರು ನ್ಯಾಯಾಲಯದ ಕಟಾಕಟೆಗೆ ಏರಿದ್ದು, ಸ್ಥಳೀಯ ಸಂಸ್ಥೆಗಳಲ್ಲಿ ಹಾಲಿ ಚುನಾಯಿತ ಸದಸ್ಯರ ಅಧಿಕಾವಧಿ ಮುಗಿಯುವವರೆಗೆ ಆಡಳಿತ ಅಧಿಕಾರಿ ನೇಮಿಸದಂತೆ ಒತ್ತಾಯಿಸಿ ಅಜಿ೯ ಸಲ್ಲಿಸಿದ್ದರು.

ಅಜಿ೯ಯ ವಿಚಾರಣೆ ನಡೆಸಿದ ನ್ಯಾಯಾಲಯ ಆಡಳಿತಾಧಿಕಾರಿ ನೇಮಕ ಮಾಡದಂತೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಇದರಿಂದಾಗಿ ಬೆಳ್ತಂಗಡಿ ಪಟ್ಟಣ ಪಂಚಾಯತದ ಚುನಾಯಿತ ಸದಸ್ಯರ ಅಧಿಕಾರವಧಿ ಮುಂದಿನ ಆದೇಶದವರೆಗೆಮುಂದುರಿಯಲಿದೆ.

40ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳಿಂದ ಅರ್ಜಿ:

ಆಡಳಿತಾಧಿಕಾರಿಗಳ ಅವಧಿ ಪರಿಗಣಿಸಲು ಒತ್ತಾಯಿಸಿ ಎರಡನೇ ಅವಧಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲು ನಿಗದಿಪಡಿಸಲು ವಿಳಂಬವಾದ ಹಿನ್ನಲೆಯಲ್ಲಿ 16 ತಿಂಗಳ ಕಾಲ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿದ್ದ ಅವಧಿಯನ್ನು ತಮ್ಮ ಐದು ವರ್ಷದ ಅಧಿಕಾರವಧಿಗೆ ಪರಿಗಣಿಸಬಾರದು ಮತ್ತು ಅವಧಿ ಮುಗಿಯಲಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳ ನೇಮಕ ಮಾಡುವ ಕ್ರಮಕ್ಕೆ ಮುಂದಾಗದಂತೆ ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ 40ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಪ್ರತ್ಯೇಕವಾಗಿ ಸಲ್ಲಿಕೆಯಾಗಿರುವ ಅರ್ಜಿಗಳು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.

Related posts

ಬಳಂಜ ವೈಭವದ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಂದ್ರಯಾನ -3 ಯಶಸ್ವಿಗಾಗಿ ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢ ಶಾಲೆಯ ನೂತನ ಕಟ್ಟಡದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ವಲಯ ಮಟ್ಟದ ಅಥ್ಲೆಟಿಕ್ಸ್ : ಉರುವಾಲು ಶ್ರೀ ಭಾರತೀ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಶಿಶಿಲ: ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯೆಯರಿಂದ ನೇಜಿ ನಾಟಿ ಕಾರ್ಯಕ್ರಮ

Suddi Udaya

ಪಡಂಗಡಿಯ ಮನೆಯೊಂದರಿಂದ ರೂ.25 ಸಾವಿರ ನಗದು ಹಾಗೂ ರೂ.9.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya
error: Content is protected !!